ಟಿ20 ವಿಶ್ವಕಪ್ IND vs ENG: ಅಭ್ಯಾಸ ಪಂದ್ಯದ ಟಾಸ್, ಲೈವ್ ಸ್ಕೋರ್ ಮತ್ತು ನೇರಪ್ರಸಾರದ ಮಾಹಿತಿ

ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ಈಗಾಗಲೇ ಆರಂಭವಾಗಿದ್ದು ಟೂರ್ನಿಗೆ ಚಾಲನೆ ದೊರೆತಿದೆ. ಈಗಾಗಲೇ ಟೂರ್ನಿಯ ಅರ್ಹತಾ ಸುತ್ತಿನ ಮೊದಲ 3 ಪಂದ್ಯಗಳು ಮುಗಿದಿದ್ದು, ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ನಮೀಬಿಯಾ ತಂಡಗಳು ಅಬುದಾಬಿ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸುತ್ತಿವೆ.
ಇದೇ ಸಮಯಕ್ಕೆ ಬಲಿಷ್ಠ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಕೂಡ ನಡೆಯುತ್ತಿದ್ದು, ಈ ಪಂದ್ಯ ದುಬೈನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23ರಿಂದ ಆರಂಭಗೊಳ್ಳಲಿದ್ದು, ಇದಕ್ಕೂ ಮುನ್ನ ಕೆಲ ಅಭ್ಯಾಸ ಪಂದ್ಯಗಳು ನಡೆಯಲಿವೆ. ಟೀಂ ಇಂಡಿಯಾ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಸೆಣಸಾಡಲಿದೆ.
ಇನ್ನು ಟೀಮ್ ಇಂಡಿಯಾದ 2 ಅಭ್ಯಾಸ ಪಂದ್ಯಗಳ ಮೊದಲನೇ ಪಂದ್ಯವು ಇಂದು ( ಅಕ್ಟೋಬರ್ 18 ) ದುಬೈನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕನಾಗಿದ್ದ ಇಯಾನ್ ಮಾರ್ಗನ್ ಸದ್ಯ ಭಾರತ ವಿರುದ್ಧದ ಈ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವವನ್ನು ವಹಿಸಿಕೊಂಡಿರುವ ಜೋಸ್ ಬಟ್ಲರ್ ತಿಳಿಸಿದ್ದಾರೆ.
ಇನ್ನು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನಂತರ ಪಂದ್ಯದ ಕುರಿತಾಗಿ ಮಾತನಾಡಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದು, ತಾನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಯಾವ ಆಟಗಾರ ಕಣಕ್ಕಿಳಿಯಲಿದ್ದಾನೆ ಎಂಬ ಹಲವಾರು ದಿನಗಳಿಂದ ಇದ್ದ ಪ್ರಶ್ನೆಗೆ ವಿರಾಟ್ ಕೊಹ್ಲಿ ಉತ್ತರ ನೀಡಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ XI: ಜೋಸ್ ಬಟ್ಲರ್ (ನಾಯಕ), ಜೇಸನ್ ರಾಯ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್
ಭಾರತ ಪ್ಲೇಯಿಂಗ್ XI: ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಬಿಡುಗಡೆಯಾಗಿಲ್ಲ. ಹನ್ನೊಂದು ಆಟಗಾರರು ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮಾಡಲಿದ್ದಾರೆ.
ನೇರಪ್ರಸಾರ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ ಅಭ್ಯಾಸ ಪಂದ್ಯದ ನೇರಪ್ರಸಾರವನ್ನು ಕೂಡ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಮಾಡಲಿದೆ. ಸ್ಟಾರ್‌ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ ಕನ್ನಡ, ಸ್ಟಾರ್‌ಸ್ಪೋರ್ಟ್ಸ್ ತೆಲುಗು, ಸ್ಟಾರ್ ಸ್ಪೋರ್ಟ್ಸ್ ತಮಿಳು ಹಾಗೂ ಹಿಂದಿಯಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ.
India vs England Warm Up Match Live Score:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications