'ರಾಹುಲ್ ಬದಲು ಇಶಾನ್ ಕಿಶನ್'; ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಈ 2 ಬದಲಾವಣೆ ಮಾಡಬೇಕೆಂದ ಹರ್ಭಜನ್!

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳೆರಡೂ ನೀರಸ ಆರಂಭವನ್ನು ಪಡೆದುಕೊಂಡಿವೆ. ಹೌದು, ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2ನಲ್ಲಿರುವ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಮತ್ತು ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡಗಳೆರಡೂ ಇತ್ತೀಚಿಗಷ್ಟೆ ನಡೆದ ಸೂಪರ್ 12 ಹಂತದ ತಮ್ಮ ಮೊದಲನೇ ಪಂದ್ಯಗಳಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ವಿರುದ್ಧ ಸೋಲನ್ನು ಅನುಭವಿಸಿವೆ.
ಕಳೆದ ಅಕ್ಟೋಬರ್ 24ರ ಭಾನುವಾರದಂದು ನಡೆದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಟೀಮ್ ಇಂಡಿಯಾ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಶುಭಾರಂಭವನ್ನು ಮಾಡಿತು. ಇತ್ತ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಸೋಲುವುದರ ಮೂಲಕ ಟೂರ್ನಿಯಲ್ಲಿ ಕೆಟ್ಟ ಆರಂಭ ಪಡೆದುಕೊಳ್ಳುವುದರ ಮೂಲಕ ಆಡಿದ ಮೊದಲ ಪಂದ್ಯದ ಸೋಲಿನಿಂದಲೇ ಸೆಮಿಫೈನಲ್ ಪ್ರವೇಶಿಸುವ ಹಾದಿಯಲ್ಲಿ ಹಿನ್ನಡೆಯನ್ನು ಅನುಭವಿಸಿತು.
ಅತ್ತ ಅಕ್ಟೋಬರ್ 26ರ ಮಂಗಳವಾರದಂದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಸೂಪರ್ 12 ಹಂತದ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನದ ಜೊತೆ ಸೆಣಸಾಡಿದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡ ಕೂಡ ಸೋಲನುಭವಿಸುವಿದೆ. ಹೀಗೆ ಟೂರ್ನಿಯ ತಮ್ಮ ಚೊಚ್ಚಲ ಪಂದ್ಯಗಳಲ್ಲಿಯೇ ಸೋಲನುಭವಿಸಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಕ್ಟೋಬರ್ 31ರಂದು ಮುಖಾಮುಖಿಯಾಗಲಿದ್ದು ಈ ಪಂದ್ಯದಲ್ಲಿ ಸೋಲಲಿರುವ ತಂಡ ಸೆಮಿಫೈನಲ್ ರೇಸ್‌ನಿಂದ ಬಹುತೇಕ ದೂರ ಸರಿಯಲಿದೆ ಎನ್ನಲಾಗುತ್ತಿದೆ. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಈ ಪಂದ್ಯ ಮಹತ್ವದ್ದಾಗಿದ್ದು ಪಾಕ್ ವಿರುದ್ಧ ಕಣಕ್ಕಿಳಿದಿದ್ದ ತಂಡವನ್ನೇ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಕಣಕ್ಕಿಳಿಸಿದರೆ ಭಾರತ ಸೋಲುವ ಸಾಧ್ಯತೆಗಳು ಹೆಚ್ಚಿದ್ದು ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಬೇಕಿದೆ ಎಂದು ಈಗಾಗಲೇ ಕೆಲ ಮಾಜಿ ಕ್ರಿಕೆಟಿಗರು ಸಲಹೆಗಳನ್ನು ನೀಡಿದ್ದಾರೆ.
ಇದೀಗ ಈ ವಿಷಯದ ಕುರಿತು ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೂಡ ಮಾತನಾಡಿದ್ದು ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಆಗಬೇಕಿರುವ ಪ್ರಮುಖ ಬದಲಾವಣೆಗಳನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಇಶಾನ್ ಕಿಶನ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಬೇಕು
"ಇಶಾನ್ ಕಿಶನ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದು, ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಲ್ಲಿಯೂ ಉತ್ತಮ ಆಟವನ್ನು ಆಡಿ ಒಳ್ಳೆಯ ಫಾರ್ಮ್‌ನಲ್ಲಿದ್ದಾರೆ. ಎದುರಾಳಿ ಬೌಲರ್‌ಗಳ ಮೇಲೆ ಒತ್ತಡವನ್ನು ಹೇರಬಲ್ಲ ಗುಣವನ್ನು ಹೊಂದಿರುವ ಇಶಾನ್ ಕಿಶನ್ ಅವರನ್ನು ರೋಹಿತ್ ಶರ್ಮಾ ಜತೆ ಆರಂಭಿಕ ಆಟಗಾರನನ್ನಾಗಿ ಕಣಕ್ಕಿಳಿಸಿದರೆ ತಂಡಕ್ಕೆ ಉತ್ತಮ ಆರಂಭ ಸಿಗಲಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಟವಾಡಲಿ
ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು ಎಂದು ಸಲಹೆ ನೀಡಿರುವ ಹರ್ಭಜನ್ ಸಿಂಗ್ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು ಎಂದಿದ್ದಾರೆ. ಹೀಗೆ ಆರಂಭಿಕ ಆಟಗಾರರಾಗಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಮತ್ತು ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಆಡಿದರೆ ಭಾರತ ತಂಡದ ಬ್ಯಾಟಿಂಗ್ ಬಲಿಷ್ಠವಾಗಿರಲಿದೆ ಎಂದು ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಭುವನೇಶ್ವರ್ ಕುಮಾರ್ ಬದಲು ಶಾರ್ದೂಲ್ ಠಾಕೂರ್
ಹರ್ಭಜನ್ ಸಿಂಗ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಕಣಕ್ಕಿಳಿಯಬೇಕಾದ ಭಾರತ ತಂಡದ ಬೌಲಿಂಗ್ ವಿಭಾಗದ ಕುರಿತು ಕೂಡ ಸಲಹೆಯನ್ನು ನೀಡಿದ್ದು ಭುವನೇಶ್ವರ್ ಕುಮಾರ್ ಬದಲು ಶಾರ್ದೂಲ್ ಠಾಕೂರ್ ಅವರಿಗೆ ಸ್ಥಾನ ನೀಡಬೇಕು ಎಂದಿದ್ದಾರೆ. ಹಾಗೂ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಇರಬೇಕು ಎಂದೂ ಕೂಡ ಹರ್ಭಜನ್ ಸಿಂಗ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications