ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೋಹಿತ್, ಕೊಹ್ಲಿ ಅಲ್ಲ ಭಾರತ ಟಿಟ್ವೆಂಟಿ ವಿಶ್ವಕಪ್ ಗೆಲ್ಲಲು ಈ ಆಟಗಾರ ಇರಲೇಬೇಕು ಎಂದ ಗಂಭೀರ್!

T20 world cup 2021: Jasprit Bumrah will Indias X factor the tournament says Gautam Gambhir
T-20 ವಿಶ್ವಕಪ್ ಗೆಲ್ಲೋದಕ್ಕೆ ಈ ಆಟಗಾರ ಇರ್ಲೇಬೇಕು ಎಂದ ಗೌತಮ್ ಗಂಭೀರ್ | Oneindia Kannada

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದರೂ ಸಹ ಇದರ ನಡುವೆ ಟಿ ಟ್ವೆಂಟಿ ವಿಶ್ವಕಪ್ ಟ್ರೆಂಡಿಂಗ್ ಪಟ್ಟಿ ಸೇರಿಕೊಂಡಿದೆ. ಹೌದು ಸಾಮಾಜಿಕ ಜಾಲತಾಣಗಳಲ್ಲಿ ಮುಂಬರಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಕುರಿತು ಚರ್ಚೆಗಳು ಹೆಚ್ಚಾಗಿ ನಡೆಯುತ್ತಿವೆ. 2016ರ ನಂತರ ಟಿ ಟ್ವೆಂಟಿ ವಿಶ್ವಕಪ್‌ ನಡೆಯದೇ ಇರುವ ಕಾರಣ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಕುರಿತು ಎಲ್ಲರಲ್ಲಿಯೂ ಕಾತುರ, ಕುತೂಹಲ ಹೆಚ್ಚಾಗಿದೆ.

ಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರ

ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಕ್ರೀಡಾ ಪಂಡಿತರು ಮತ್ತು ಕ್ರೀಡಾಭಿಮಾನಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದು ಯಾವ ತಂಡ ಗೆಲ್ಲಲಿದೆ ಮತ್ತು ಯಾವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ ಎಂಬುದರ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಹೀಗೆಯೇ ಮುಂಬರಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮಾತನಾಡಿದ್ದು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಓರ್ವ ಆಟಗಾರನ ಅಗತ್ಯತೆ ಹೆಚ್ಚಿದೆ ಎಂಬುದನ್ನು ತಿಳಿಸಿದ್ದಾರೆ.

ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!

ಹೌದು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪಾಲಿಗೆ ಜಸ್ ಪ್ರೀತ್ ಬುಮ್ರಾ ಅತ್ಯಮೂಲ್ಯ ಆಟಗಾರನಾಗಿ ಪಾತ್ರ ನಿರ್ವಹಿಸಲಿದ್ದಾರೆ ಎಂದು ಗೌತಮ್ ಗಂಭೀರ್ ಭವಿಷ್ಯ ನುಡಿದಿದ್ದಾರೆ. ಎಲ್ಲರೂ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡಕ್ಕೆ ಆಸರೆಯಾಗಲಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಆದರೆ ನಿಜವಾಗಿಯೂ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಆಸರೆಯಾಗಿ ನಿಲ್ಲುವುದು ಜಸ್ ಪ್ರೀತ್ ಬೂಮ್ರಾ ಎಂದು ಗೌತಮ್ ಗಂಭೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಸ್ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನ ನೀಡಿದರೆ ಭಾರತಕ್ಕೆ ಗೆಲುವು ಖಚಿತ

ಜಸ್ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನ ನೀಡಿದರೆ ಭಾರತಕ್ಕೆ ಗೆಲುವು ಖಚಿತ

ಹೀಗೆ ಜಸ್ಪ್ರೀತ್ ಬುಮ್ರಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಆಸರೆಯಾಗಿ ನಿಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿರುವ ಗೌತಮ್ ಗಂಭೀರ್ 'ಜಸ್ಪ್ರೀತ್ ಬುಮ್ರಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದರೆ ಟೀಮ್ ಇಂಡಿಯಾ ಗೆಲ್ಲುವುದು ಖಚಿತ. ಎಲ್ಲರೂ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಆಸರೆಯಾಗಬಲ್ಲ ಆಟಗಾರರು ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ನಿಜವಾಗಿಯೂ ಟೀಮ್ ಇಂಡಿಯಾಗೆ ತನ್ನ ಆಟದ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹಸಿಯಾಗುವುದು ಜಸ್ಪ್ರೀತ್ ಬುಮ್ರಾ' ಎಂದು ಗೌತಮ್ ಗಂಭೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೆಮಿಫೈನಲ್ ಪ್ರವೇಶಿಸಲಿರುವ ತಂಡಗಳನ್ನು ಹೆಸರಿಸಿದ ಗಂಭೀರ್

ಸೆಮಿಫೈನಲ್ ಪ್ರವೇಶಿಸಲಿರುವ ತಂಡಗಳನ್ನು ಹೆಸರಿಸಿದ ಗಂಭೀರ್

ಇನ್ನೂ ಮುಂದುವರಿದು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಮಾತನಾಡಿರುವ ಗೌತಮ್ ಗಂಭೀರ್ ಯಾವ ಯಾವ ತಂಡಗಳು ಸೆಮಿಫೈನಲ್ ಹಂತವನ್ನು ಪ್ರವೇಶಿಸಲಿವೆ ಎಂಬುದರ ಕುರಿತು ಭವಿಷ್ಯವನ್ನು ನುಡಿದಿದ್ದಾರೆ. ಗೌತಮ್ ಗಂಭೀರ್ ಪ್ರಕಾರ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಯಶಸ್ವಿಯಾಗಿ ಸೆಮಿಫೈನಲ್ ತಲುಪಲಿವೆಯಂತೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾರತದ ಪಂದ್ಯಗಳು:

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾರತದ ಪಂದ್ಯಗಳು:

* ಭಾರತ vs ಪಾಕಿಸ್ತಾನ - ಅಕ್ಟೋಬರ್ 24, ದುಬೈನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

* ಭಾರತ vs ನ್ಯೂಜಿಲೆಂಡ್‌ - ಅಕ್ಟೋಬರ್ 31, ದುಬೈನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

* ಭಾರತ vs ಅಫ್ಘಾನಿಸ್ತಾನ - ನವೆಂಬರ್‌ 3, ಅಬುಧಾಬಿಯಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

* ಭಾರತ vs ಅರ್ಹತಾ ಸುತ್ತಿನ ಬಿ ಗುಂಪಿನ ಟಾಪ್ 1 ತಂಡ - ನವೆಂಬರ್‌ 5, ದುಬೈನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

* ಭಾರತ vs ಅರ್ಹತಾ ಸುತ್ತಿನ ಎ ಗುಂಪಿನ ಟಾಪ್ 2 ತಂಡ - ನವೆಂಬರ್‌ 8, ದುಬೈನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

Story first published: Saturday, August 21, 2021, 7:36 [IST]
Other articles published on Aug 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X