ಬಾಬರ್, ಅಫ್ರಿದಿ ಸೇರಿದಂತೆ 11 ಅತ್ಯುತ್ತಮ ಆಟಗಾರರನ್ನು ಹೆಸರಿಸಿದ ಪೀಟರ್ಸನ್; ಭಾರತೀಯರಿಗಿಲ್ಲ ಸ್ಥಾನ!

ಕಳೆದೊಂದು ತಿಂಗಳಿನಿಂದ ಯುಎಇ ನೆಲದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ನವೆಂಬರ್ 14ರಂದು ನಡೆದ ಫೈನಲ್ ಪಂದ್ಯದ ಮೂಲಕ ತೆರೆ ಬಿದ್ದಿದೆ. ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್ ಹಂತವನ್ನು ಯಶಸ್ವಿಯಾಗಿ ತಲುಪಿದ್ದವು. ಹಾಗೂ ಇತ್ತಂಡಗಳ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಆ್ಯರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಹಾಗೂ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದವು. ಸೆಮಿಫೈನಲ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಸೋತು ಟೂರ್ನಿಯಿಂದ ಹೊರಬಿದ್ದರೆ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋತು ಫೈನಲ್ ಪ್ರವೇಶಿಸುವಲ್ಲಿ ವಿಫಲವಾಗಿ ಟೂರ್ನಿಯಿಂದ ಹೊರಬಿತ್ತು. ಹಾಗೂ ಸೂಪರ್ 12 ಹಂತದಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳಷ್ಟೇ ಗೆಲುವನ್ನು ಸಾಧಿಸಿದರೂ ಸಹ ನೆಟ್ ರನ್ ರೇಟ್ ಅಭಾವದಿಂದ ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿತು. ಆದರೆ ದಕ್ಷಿಣ ಆಫ್ರಿಕಾದ ಕೆಲ ಆಟಗಾರರು ನೀಡಿದ ಉತ್ತಮ ಪ್ರದರ್ಶನ ಮಾತ್ರ ಹಲವಾರು ಮಾಜಿ ಕ್ರಿಕೆಟಿಗರ ಮನಗೆದ್ದಿದೆ.
ಇನ್ನು ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಮಾತ್ರ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನಿರೀಕ್ಷೆಯ ಮಟ್ಟವನ್ನು ತಲುಪುವಲ್ಲಿ ಸಂಪೂರ್ಣವಾಗಿ ವಿಫಲವಾಯಿತು ಎಂದೇ ಹೇಳಬಹುದು. ಟೂರ್ನಿಯಲ್ಲಿನ ತನ್ನ ಮೊದಲೆರಡು ಮಹತ್ವದ ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ಸೆಮಿಫೈನಲ್ ಹಂತ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿತು. ಈ ಎರಡೂ ಪಂದ್ಯಗಳಲ್ಲಿಯೂ ತಂಡದ ಪ್ರಮುಖ ಆಟಗಾರರೇ ವಿಫಲರಾದ್ದರಿಂದ ಭಾರತ ತಂಡ ಸೋಲನುಭವಿಸಬೇಕಾಯಿತು. ಹೀಗೆ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಟಗಾರರ ದೊಡ್ಡ ಮಟ್ಟದ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿತ್ತು. ಹೀಗೆ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆಟಗಾರರನ್ನು ಇತ್ತೀಚೆಗಷ್ಟೇ ಐಸಿಸಿ ಅತ್ಯುತ್ತಮ ಟಿ ಟ್ವೆಂಟಿ ವಿಶ್ವಕಪ್ ತಂಡವನ್ನು ಪ್ರಕಟಿಸಿದಾಗ ಕಡೆಗಣಿಸಿತ್ತು. ಅದೇ ರೀತಿ ಇದೀಗ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಕೂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ 11 ಆಟಗಾರರ ತಂಡವನ್ನು ಪ್ರಕಟಿಸಿದ್ದು ಭಾರತೀಯರನ್ನು ಕಡೆಗಣಿಸಿದ್ದಾರೆ. ಕೆವಿನ್ ಪೀಟರ್ಸನ್ ಪ್ರಕಟಿಸಿರುವ 11 ಆಟಗಾರರನ್ನೊಳಗೊಂಡ ಟಿ ಟ್ವೆಂಟಿ ವಿಶ್ವಕಪ್ ತಂಡ ಈ ಕೆಳಕಂಡಂತಿದೆ..

ಜೋಸ್ ಬಟ್ಲರ್ ಮತ್ತು ಮೊಹಮ್ಮದ್ ರಿಜ್ವಾನ್ ಆರಂಭಿಕ ಆಟಗಾರರು
ಕೆವಿನ್ ಪೀಟರ್ಸನ್ ಪ್ರಕಟಿಸಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 11 ಆಟಗಾರರ ಅತ್ಯುತ್ತಮ ತಂಡದಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜೋಸ್ ಬಟ್ಲರ್ ಮತ್ತು ಪಾಕಿಸ್ತಾನ ತಂಡದ ಆಟಗಾರ ಮೊಹಮದ್ ರಿಜ್ವಾನ್ ಅವರನ್ನು ಆರಂಭಿಕ ಆಟಗಾರರಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಮೊಹಮ್ಮದ್ ರಿಜ್ವಾನ್ ಕುರಿತಾಗಿ ಮಾತನಾಡಿದ ಕೆವಿನ್ ಪೀಟರ್ಸನ್ "ಟೂರ್ನಿಯುದ್ದಕ್ಕೂ ಮೊಹಮ್ಮದ್ ರಿಜ್ವಾನ್ ಸತತವಾಗಿ ಉತ್ತಮ ರನ್ ಕಲೆ ಹಾಕುವುದರ ಮೂಲಕ ಚೆನ್ನಾಗಿ ಆಡಿದರು. ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನರಳುತ್ತಿದ್ದ ಅವರು ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದು 67 ರನ್ ಚಚ್ಚಿದರು" ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೆವಿನ್ ಪೀಟರ್ಸನ್ ಆಯ್ಕೆ ಮಾಡಿಕೊಂಡ 11 ಅತ್ಯುತ್ತಮ ಆಟಗಾರರ ತಂಡ ಹೀಗಿದೆ
ಕೆವಿನ್ ಪೀಟರ್ಸನ್ ಪ್ರಕಾರ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರ ತಂಡ ಹೀಗಿದೆ: ಮೊಹಮ್ಮದ್ ರಿಜ್ವಾನ್, ಜೋಸ್ ಬಟ್ಲರ್, ಬಾಬರ್ ಅಜಮ್, ಚರಿತ್ ಅಸಲಂಕಾ, ಐಡೆನ್ ಮಾರ್ಕ್ರಾಮ್, ಮೊಯಿನ್ ಅಲಿ, ವನಿಂದು ಹಸರಂಗಾ, ಆಡಮ್ ಜಂಪಾ, ಟ್ರೆಂಟ್ ಬೌಲ್ಟ್, ಅನ್ರಿಚ್ ನಾರ್ಟ್ಜೆ, ಶಾಹೀನ್ ಶಾ ಆಫ್ರಿದಿ

ಭಾರತದ ಯಾವೊಬ್ಬ ಆಟಗಾರಿನಿಗೂ ತಂಡದಲ್ಲಿ ಸ್ಥಾನವಿಲ್ಲ
ಮೊದಲೇ ಹೇಳಿದಂತೆ ಕೆವಿನ್ ಪೀಟರ್ಸನ್ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರ ಆಯ್ಕೆಯಲ್ಲಿ ಟೀಮ್ ಇಂಡಿಯಾ ಆಟಗಾರರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಕೆವಿನ್ ಪೀಟರ್ಸನ್ ಮಾತ್ರವಲ್ಲದೇ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ಪಂಡಿತರು ಪ್ರಕಟಿಸಿರುವ ಉತ್ತಮ ಟಿ ಟ್ವೆಂಟಿ ವಿಶ್ವಕಪ್ ತಂಡಗಳಲ್ಲಿಯೂ ಭಾರತೀಯ ಆಟಗಾರರನ್ನು ಕಡೆಗಣಿಸಲಾಗಿದೆ. ಇದಕ್ಕೆ ಕಾರಣ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರು ನೀಡಿದ ಕಳಪೆ ಪ್ರದರ್ಶನ ಎಂದರೆ ತಪ್ಪಾಗಲಾರದು. ಟೂರ್ನಿ ಆರಂಭಕ್ಕೂ ಮುನ್ನ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಟೀಮ್ ಇಂಡಿಯಾ ಟೂರ್ನಿ ಆರಂಭದ ನಂತರ ಆ ನಿರೀಕ್ಷೆಯನ್ನು ತಲುಪುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications