Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್ 2021: ಆಸ್ಟ್ರೇಲಿಯಾ vs ಸೌತ್ಆಫ್ರಿಕಾ ಪಂದ್ಯದ ಟಾಸ್ ವರದಿ, ಆಡುವ ಬಳಗ, ಲೈವ್‌ ಸ್ಕೋರ್

T20 World Cup 2021, Match 13: Australia vs South Africa Toss Report and Live Score

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯ ಗಳೆಲ್ಲಾ ಮುಗಿದಿದ್ದು ಇಂದಿನಿಂದ ( ಅಕ್ಟೋಬರ್ 23 ) ಸೂಪರ್ 12 ಹಂತ ಆರಂಭವಾಗುತ್ತಿದೆ. ಇಂದು 2 ಪಂದ್ಯಗಳು ನಡೆಯಲಿದ್ದು ಮಧ್ಯಾಹ್ನ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಡಲಿದ್ದರೆ, ಸಂಜೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.

ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಟ ನಡೆಸುತ್ತಿದ್ದು, ಈ ಪಂದ್ಯವು ಟೂರ್ನಿಯ 13ನೇ ಪಂದ್ಯವಾಗಿದೆ. ಈ ಪಂದ್ಯ ಅಬುಧಾಬಿಯ ಶೈಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಸೌತ್ ಆಫ್ರಿಕಾ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.

ಆಸ್ಟ್ರೇಲಿಯ ಪ್ಲೇಯಿಂಗ್ ಇಲೆವೆನ್: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್‌), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಜಲ್‌ವುಡ್

ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸೆನ್, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ

ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:

1
51676

ಸೂಪರ್ 12 ಹಂತದ ಗ್ರೂಪ್ 1ನ ಭಾಗವಾಗಿರುವ ಈ ಎರಡೂ ತಂಡಗಳು ಸಹ ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತಲಾ 2 ಅಭ್ಯಾಸ ಪಂದ್ಯಗಳನ್ನಾಡಿವೆ. ಈ ಅಭ್ಯಾಸ ಪಂದ್ಯಗಳ ಪೈಕಿ ಸೌತ್ ಆಫ್ರಿಕಾ ಎಲ್ಲಾ 2 ಅಭ್ಯಾಸ ಪಂದ್ಯಗಳಲ್ಲಿಯೂ ಜಯ ಸಾಧಿಸಿದ್ದರೆ, ಆಸ್ಟ್ರೇಲಿಯಾ ತಂಡ ಒಂದು ಅಭ್ಯಾಸ ಪಂದ್ಯದಲ್ಲಿ ಗೆದ್ದು ಮತ್ತೊಂದರಲ್ಲಿ ಸೋಲುಂಡಿತ್ತು.

Story first published: Saturday, October 23, 2021, 17:40 [IST]
Other articles published on Oct 23, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+