ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್, ಇಂಗ್ಲೆಂಡ್ vs ವೆಸ್ಟ್ ಇಂಡೀಸ್: ತನ್ನ ಕೆಟ್ಟ ದಾಖಲೆಗೆ ಬ್ರೇಕ್ ಹಾಕುತ್ತಾ ಇಂಗ್ಲೆಂಡ್?

T20 World Cup 2021, Match 14: ENG vs WI head to head, Match preview and probable playing XI details

ಕಳೆದ ಭಾನುವಾರ ( ಅಕ್ಟೋಬರ್ 17 ) ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಚಾಲನೆ ಪಡೆದುಕೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಇಂದಿನಿಂದ ( ಅಕ್ಟೋಬರ್ 23 ) ಆರಂಭಗೊಂಡಿವೆ. ಇನ್ನು ಸೂಪರ್ 12 ಸುತ್ತಿನ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಟ ನಡೆಸುತ್ತಿದ್ದು, ಇದೇ ದಿನ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೆಣಸಾಡಲಿವೆ.

ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!

ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳೆರಡೂ ತಲಾ 2 ಅಭ್ಯಾಸ ಪಂದ್ಯಗಳಲ್ಲಿ ಭಾಗವಹಿಸಿದ್ದವು. ಇಂಗ್ಲೆಂಡ್ ಬಲಿಷ್ಠ ತಂಡಗಳಾದ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿದಿತ್ತು. ಈ ಪಂದ್ಯಗಳ ಪೈಕಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಗೆಲುವನ್ನು ಸಾಧಿಸಿತು ಮತ್ತು ಟೀಮ್ ಇಂಡಿಯಾ ವಿರುದ್ಧ ಸೋಲನ್ನು ಕಂಡಿತ್ತು. ಅತ್ತ ವೆಸ್ಟ್ ಇಂಡೀಸ್ ತಂಡ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಂಡಗಳ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿದಿತ್ತು. ಹಾಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ಸ್ ಈ ಎರಡೂ ಪಂದ್ಯಗಳಲ್ಲಿಯೂ ಸಹ ಸೋಲನ್ನು ಅನುಭವಿಸಿತ್ತು.

ಇನ್ನು ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಈ ಪಂದ್ಯದ ಕುರಿತ ಮಾಹಿತಿ, ಸಂಭಾವ್ಯ ಆಡುವ ಬಳಗ ಮತ್ತು ಟಿ ಟ್ವೆಂಟಿ ಇತಿಹಾಸದಲ್ಲಿ ಎರಡೂ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಯಾರು ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೆ ಎಂಬುದರ ಕುರಿತ ಮಾಹಿತಿ ಮುಂದೆ ಇದೆ..

ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿ ಫಲಿತಾಂಶ:

ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೂ ಒಟ್ಟು 18 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು ವೆಸ್ಟ್ ಇಂಡೀಸ್ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ ಮತ್ತು ಇಂಗ್ಲೆಂಡ್ ಕೇವಲ 7 ಪಂದ್ಯಗಳಲ್ಲಿ ಜಯ ಗಳಿಸಿದೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಟ್ಟು 5 ಪಂದ್ಯಗಳಲ್ಲಿ ಸೆಣಸಾಟ ನಡೆಸಿದ್ದು ಈ ಎಲ್ಲಾ ಪಂದ್ಯಗಳಲ್ಲಿಯೂ ಸಹ ವೆಸ್ಟ್ ಇಂಡೀಸ್ ತಂಡ ಜಯವನ್ನು ಸಾಧಿಸಿದೆ. ಹೀಗೆ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಯಾವುದೇ ಪಂದ್ಯದಲ್ಲಿಯೂ ಸಹ ಇದುವರೆಗೂ ಗೆಲುವನ್ನು ಸಾಧಿಸದೆ ಇರುವ ಕೆಟ್ಟ ದಾಖಲೆಗೆ ಒಳಗಾಗಿದೆ. ಹೀಗಾಗಿ ಇಂದು ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವನ್ನು ಸಾಧಿಸುವುದರ ಮೂಲಕ ಈ ಕೆಟ್ಟ ದಾಖಲೆಗೆ ಬ್ರೇಕ್ ಹಾಕುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್: ಅರ್ಹತಾ ಸುತ್ತಿನ ಮುಕ್ತಾಯದ ನಂತರ ಪಾಕ್ ಸೇಫ್, ಈ ಬಲಿಷ್ಠ ತಂಡಗಳಿಗೆ ಹೆಚ್ಚಾಯ್ತು ಕಷ್ಟ!ಟಿ20 ವಿಶ್ವಕಪ್: ಅರ್ಹತಾ ಸುತ್ತಿನ ಮುಕ್ತಾಯದ ನಂತರ ಪಾಕ್ ಸೇಫ್, ಈ ಬಲಿಷ್ಠ ತಂಡಗಳಿಗೆ ಹೆಚ್ಚಾಯ್ತು ಕಷ್ಟ!

ಪಿಚ್ ರಿಪೋರ್ಟ್: ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದು ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರುವ ಪಿಚ್ ಆಗಿದೆ ಮತ್ತು ವೇಗಿಗಳಿಗಿಂತ ಸ್ಪಿನ್ ಬೌಲರ್‌ಗಳಿಗೆ ಅನುಕೂಲಕರವಾಗಿದೆ. ಇನ್ನು ಈ ಪಿಚ್‌ನಲ್ಲಿ ಎರಡನೇ ಬ್ಯಾಟಿಂಗ್ ಮಾಡುವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಕಾರಣ ಟಾಸ್ ಗೆಲ್ಲುವ ಪ್ರತಿ ತಂಡವೂ ಸಹ ಹೆಚ್ಚಾಗಿ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತವೆ.

ಇಂಗ್ಲೆಂಡ್ ಸಂಭಾವ್ಯ ತಂಡ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಸನ್ ರಾಯ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೊ, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯೀನ್ ಅಲಿ, ಇಯೋನ್ ಮಾರ್ಗನ್, ಟೈಮಲ್ ಮಿಲ್ಸ್, ಮಾರ್ಕ್ ವುಡ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಎವಿನ್ ಲೆವಿಸ್, ಕ್ರಿಸ್ ಗೇಲ್, ಲೆಂಡ್ಲ್ ಸಿಮನ್ಸ್, ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ಕೀರಾನ್ ಪೊಲಾರ್ಡ್ (ನಾಯಕ), ಆಂಡ್ರೆ ರಸೆಲ್, ಡ್ವೇನ್ ಬ್ರಾವೋ, ಹೇಡನ್ ವಾಲ್ಷ್, ರವಿ ರಾಂಪಾಲ್, ಒಬೆಡ್ ಮೆಕಾಯ್.

Story first published: Saturday, October 23, 2021, 18:06 [IST]
Other articles published on Oct 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X