For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ಪಂದ್ಯದ ಟಾಸ್ ವರದಿ, ಆಡುವ ಬಳಗ, ಲೈವ್‌ ಸ್ಕೋರ್

T20 World Cup 2021, Match 14: England vs West Indies Toss Report and Live Score

ಕಳೆದ ಭಾನುವಾರ ( ಅಕ್ಟೋಬರ್ 17 ) ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಚಾಲನೆ ಪಡೆದುಕೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಇಂದಿನಿಂದ ( ಅಕ್ಟೋಬರ್ 23 ) ಆರಂಭಗೊಂಡಿವೆ. ಇನ್ನು ಸೂಪರ್ 12 ಸುತ್ತಿನ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಟ ನಡೆಸಿದ್ದು ಆಸ್ಟ್ರೇಲಿಯಾ ತಂಡ 5 ವಿಕೆಟ್‍ಗಳ ರೋಚಕ ಗೆಲುವನ್ನು ಸಾಧಿಸಿದೆ.

ಇದೀಗ ಇದೇ ದಿನದ ದ್ವಿತೀಯ ಪಂದ್ಯದಲ್ಲಿ ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ಸ್ ಇಂಗ್ಲೆಂಡ್ ಮತ್ತು ಹಾಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ಪಂದ್ಯ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ 14ನೇ ಪಂದ್ಯವಾಗಿದ್ದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ವೆಸ್ಟ್ ಇಂಡೀಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.

ಇಂಗ್ಲೆಂಡ್ vs ವೆಸ್ಟ್ ಇಂಡೀಸ್ ಲೈವ್ ಸ್ಕೋರ್

1
51677

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್ (ವಿಕೆಟ್ ಕೀಪರ್‌), ಜೇಸನ್ ರಾಯ್, ಡೇವಿಡ್ ಮಲನ್, ಇಯಾನ್ ಮಾರ್ಗನ್ (ನಾಯಕ), ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಟೈಮಲ್ ಮಿಲ್ಸ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಎವಿನ್ ಲೂಯಿಸ್, ಲೆಂಡ್ಲ್ ಸಿಮನ್ಸ್, ಕ್ರಿಸ್ ಗೇಲ್, ಶಿಮ್ರಾನ್ ಹೆಟ್ಮೀರ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರನ್ ಪೊಲಾರ್ಡ್ (ನಾಯಕ), ಆಂಡ್ರೆ ರಸೆಲ್, ಡ್ವೇನ್ ಬ್ರಾವೊ, ಅಕೆಲ್ ಹೊಸೇನ್, ಓಬೇದ್ ಮೆಕಾಯ್, ರವಿ ರಾಂಪಾಲ್

Story first published: Saturday, October 23, 2021, 19:43 [IST]
Other articles published on Oct 23, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+