ಭಾರತ vs ಪಾಕ್: ಬಲಿಷ್ಠ ಭಾರತ ತಂಡ ಪ್ರಕಟ; ಟಾಸ್ ವರದಿ ಮತ್ತು ಲೈವ್ ಸ್ಕೋರ್

ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಮಹತ್ವದ ದಿನ ಕೊನೆಗೂ ಬಂದಿದೆ. ಪ್ರಸಕ್ತ ಸಾಲಿನ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡುತ್ತಿವೆ.
ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಬ್ ಖಾನ್, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಹಾರಿಸ್ ರೌಫ್
ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:
ಅನೇಕ ವರ್ಷಗಳ ನಂತರ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಈ ವಿಶ್ವಕಪ್ ಪಂದ್ಯದಲ್ಲಿ ಸೆಣಸಾಡುತ್ತಿದ್ದು ಪಾಕಿಸ್ತಾನ ತಂಡ ಈ ಬಾರಿ ಭಾರತದ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಇದುವರೆಗೂ ಭಾರತದ ವಿರುದ್ಧ ಯಾವುದೇ ವಿಶ್ವಕಪ್ ಪಂದ್ಯವನ್ನು ಗೆದ್ದಿಲ್ಲ ಎಂಬ ತನ್ನ ಕಳಂಕವನ್ನು ತೆಗೆದು ಹಾಕುವ ಪ್ರಯತ್ನದಲ್ಲಿದೆ. ಮತ್ತೊಂದೆಡೆ ಭಾರತ ಈ ಬಾರಿಯ ಪಂದ್ಯದಲ್ಲಿಯೂ ಕೂಡ ಪಾಕಿಸ್ತಾನವನ್ನು ಸೋಲಿಸಿ ತನ್ನ ವಿಶೇಷ ದಾಖಲೆಯನ್ನು ಮುಂದುವರೆಸುವ ಗುರಿಯನ್ನು ಹೊಂದಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಸಾಕಷ್ಟು ದೊಡ್ಡ ಮಟ್ಟದ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ. ಇನ್ನು ಈ ಪಂದ್ಯಕ್ಕೆ ಪ್ರಕಟವಾಗಿರುವ ಭಾರತ ತಂಡದಿಂದ ರವಿಚಂದ್ರನ್ ಅಶ್ವಿನ್, ರಾಹುಲ್ ಚಹರ್, ಇಶಾನ್ ಕಿಶನ್ ಮತ್ತು ಶಾರ್ದೂಲ್ ಠಾಕೂರ್ ಈ 4 ಆಟಗಾರರನ್ನು ಹೊರಗಿಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications