ಟಿ20 ವಿಶ್ವಕಪ್: ಇಂಗ್ಲೆಂಡ್ vs ಬಾಂಗ್ಲಾದೇಶ, ಟಾಸ್ ವರದಿ, ಪ್ಲೇಯಿಂಗ್ XI ಮತ್ತು ಲೈವ್‌ ಸ್ಕೋರ್

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯು ಹಲವಾರು ಮೊದಲುಗಳಿಗೆ ವೇದಿಕೆಯಾಗುತ್ತಿದೆ. ಇತ್ತೀಚೆಗಷ್ಟೇ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಇತಿಹಾಸದಲ್ಲಿ ಇಂಗ್ಲೆಂಡ್ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು ಹಾಗೂ ಇದೇ ರೀತಿ ಪಾಕಿಸ್ತಾನ ಭಾರತ ತಂಡವನ್ನು ಮಣಿಸಿತು. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಹಿಂದೆಂದೂ ಆಗದೇ ಇರುವಂತಹ ಹಲವಾರು ಗೆಲುವುಗಳು ಸಂಭವಿಸಿವೆ.

ಅದೇ ರೀತಿ ಇದೀಗ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿಯೇ ಇದುವರೆಗೂ ಯಾವುದೇ ಪಂದ್ಯದಲ್ಲಿಯೂ ಮುಖಾಮುಖಿಯಾಗದಿದ್ದ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಇದೇ ಮೊದಲ ಬಾರಿಗೆ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ಈ ಪಂದ್ಯ ಸಾಕಷ್ಟು ಕುತೂಹಲ ಮತ್ತು ಆಶ್ಚರ್ಯಕ್ಕೆ ಕಾರಣವಾಗಿದೆ.

ಹೌದು, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆಯುತ್ತಿರುವ ಈ ಪಂದ್ಯದ ಮೂಲಕ ಎರಡೂ ತಂಡಗಳು ಸಹ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮುಖಾಮುಖಿಯಾಗಿವೆ. ಹಾಗೂ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ಪಂದ್ಯವೊಂದರಲ್ಲಿ ಭಾಗವಹಿಸಿರುವ ಇತ್ತಂಡಗಳಲ್ಲಿ ಯಾವ ತಂಡ ಜಯ ಸಾಧಿಸಲಿದೆ ಎಂಬ ಕುತೂಹಲಗಳು ಹುಟ್ಟಿಕೊಂಡಿವೆ.

ಟಿ20 ವಿಶ್ವಕಪ್: 'ನ್ಯೂಜಿಲೆಂಡ್‌ ವಿರುದ್ಧ ಭಾರತ ತಂಡದಲ್ಲಿ ಈ 2 ಬದಲಾವಣೆ ಮಾಡದಿದ್ದರೆ ಸೋಲು ಖಚಿತ!'ಟಿ20 ವಿಶ್ವಕಪ್: 'ನ್ಯೂಜಿಲೆಂಡ್‌ ವಿರುದ್ಧ ಭಾರತ ತಂಡದಲ್ಲಿ ಈ 2 ಬದಲಾವಣೆ ಮಾಡದಿದ್ದರೆ ಸೋಲು ಖಚಿತ!'

ಇನ್ನು ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ನಡೆಯುತ್ತಿರುವ ಈ ಪಂದ್ಯ ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 20ನೇ ಪಂದ್ಯವಾಗಿದ್ದು, ಈ ಪಂದ್ಯ ಅಬುಧಾಬಿಯ ಶೈಕ್ ಜಾಯದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ದ್ವಿತೀಯ ಪಂದ್ಯ ಇದಾಗಿದ್ದು, ಇಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಟ ನಡೆಸಿದ್ದವು. ಹಾಗೂ ಆ ಪಂದ್ಯದಲ್ಲಿ ಹೇಳಿಕೊಳ್ಳುವಂತಹ ರನ್ ಹೊಳೆ ಬಂದಿರಲಿಲ್ಲ. ಹೀಗಾಗಿ ಇಂದು ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಯಾವ ರೀತಿಯ ರನ್ ಬರಲಿದೆ ಎಂಬ ಕುತೂಹಲವಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಡುವ ಬಳಗದಲ್ಲಿ

ಇಂಗ್ಲೆಂಡ್ ಆಡುವ ಬಳಗ: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಟೈಮಲ್ ಮಿಲ್ಸ್

ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ (ನಾಯಲ), ಅಫೀಫ್ ಹೊಸೈನ್, ನೂರುಲ್ ಹಸನ್ ( ವಿಕೆಟ್ ಕೀಪರ್), ಮಹೇದಿ ಹಸನ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್, ನಸುಮ್ ಅಹ್ಮದ್

ಇಂಗ್ಲೆಂಡ್ vs ಬಾಂಗ್ಲಾದೇಶ ಲೈವ್‌ ಸ್ಕೋರ್:

1
51683

ಇನ್ನು ಈಗಾಗಲೇ ಸೂಪರ್ 12 ಹಂತದಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇಂಗ್ಲೆಂಡ್ ತನ್ನ ಮೊದಲನೇ ಪಂದ್ಯದಲ್ಲಿ ಹಾಲಿ ಟಿ ಟ್ವೆಂಟಿ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ತಂಡವನ್ನು 55 ರನ್‌ಗಳಿಗೆ ಆಲ್ ಔಟ್ ಮಾಡುವುದರ ಮೂಲಕ ಭರ್ಜರಿ ಜಯವನ್ನು ಸಾಧಿಸಿತ್ತು. ಅತ್ತ ಬಾಂಗ್ಲಾದೇಶ ಈ ಹಂತದ ತನ್ನ ಮೊದಲನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತ್ತು.

For Quick Alerts
ALLOW NOTIFICATIONS
For Daily Alerts
Story first published: Wednesday, October 27, 2021, 15:17 [IST]
Other articles published on Oct 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X