ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್ vs ಬಾಂಗ್ಲಾದೇಶ ಮುಖಾಮುಖಿಯಲ್ಲಿ ಬಲಿಷ್ಠರಾರು?

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಈ ಪಂದ್ಯದಲ್ಲಿ ಇಂದು ( ಅಕ್ಟೋಬರ್ 29 ) ಹಾಲಿ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 23ನೇ ಪಂದ್ಯವಾಗಿದ್ದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಇನ್ನು ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳೆರಡೂ ತಲಾ 2 ಪಂದ್ಯಗಳನ್ನಾಡಿದ್ದು ಎರಡರಲ್ಲಿಯೂ ಎರಡೂ ತಂಡಗಳು ಸೋತಿವೆ. ಈ ಮೂಲಕ ಸೂಪರ್ 12 ಹಂತದ ಗ್ರೂಪ್ 1ರ ಅಂಕಪಟ್ಟಿಯಲ್ಲಿ ಅಂತಿಮ 2 ಸ್ಥಾನಗಳನ್ನು ಈ ತಂಡಗಳು ಪಡೆದುಕೊಂಡಿವೆ. ಹೀಗೆ ಸೂಪರ್ 12 ಹಂತದ ಆರಂಭದ 2 ಪಂದ್ಯಗಳನ್ನು ಸೋತಿರುವ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಸೆಮಿಫೈನಲ್ ಹಾದಿಯಿಂದ ಬಹಳ ದೂರ ಸರಿದಿದ್ದು ಇಂದು ನಡೆಯಲಿರುವ ಪಂದ್ಯದಲ್ಲಿ ಯಾವ ತಂಡ ಸೋಲುತ್ತದೆಯೋ ಆ ತಂಡ ಅಧಿಕೃತವಾಗಿ ಸೆಮಿಫೈನಲ್ ರೇಸ್‌ನಿಂದ ಹೊರಬೀಳಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಸಹ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಅಂತರ ರಾಷ್ಟ್ರೀಯ ಟಿ ಟ್ವೆಂಟಿ ಮುಖಾಮುಖಿಯ ಫಲಿತಾಂಶದ ವಿವರ:
* ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಇದುವರೆಗೂ ಒಟ್ಟು 12 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 6 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲುವು ಸಾಧಿಸಿದ್ದರೆ ಬಾಂಗ್ಲಾದೇಶ 5 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.
* ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಇಂದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಇದುವರೆಗೂ ಯಾವುದೇ ಪಂದ್ಯದಲ್ಲಿಯೂ ಮುಖಾಮುಖಿಯಾಗಿಲ್ಲ. ಹೀಗಾಗಿ ಇಂದು ಇತ್ತಂಡಗಳ ನಡುವೆ ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಸಹ ಚೊಚ್ಚಲ ಮುಖಾಮುಖಿಯಾಗಲಿದೆ.
* ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ 3 ಪಂದ್ಯಗಳನ್ನು ಗೆದ್ದಿದೆ ಮತ್ತು ಬಾಂಗ್ಲಾದೇಶ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ನಡುವಿನ ಕಳೆದ 5 ಪಂದ್ಯಗಳ ಟಿ ಟ್ವೆಂಟಿ ಕ್ರಿಕೆಟ್ ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ತಂಡ ಮುನ್ನಡೆ ಸಾಧಿಸಿದೆ.
* ಇನ್ನು ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳ ಇತಿಹಾಸದಲ್ಲಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಒಟ್ಟು 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿವೆ.
ಸಂಭಾವ್ಯ ತಂಡಗಳು:
ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಎರಡೂ ತಂಡಗಳ ಸಂಭಾವ್ಯ ಆಡುವ ಬಳಗದ ಪಟ್ಟಿ ಈ ಕೆಳಕಂಡಂತಿದೆ.
ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಎವಿನ್ ಲೆವಿಸ್, ಲೆಂಡ್ಲ್ ಸಿಮನ್ಸ್, ಕ್ರಿಸ್ ಗೇಲ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರಾನ್ ಪೊಲಾರ್ಡ್ (ನಾಯಕ), ಆಂಡ್ರೆ ರಸೆಲ್, ಜೇಸನ್ ಹೋಲ್ಡರ್, ಡ್ವೇನ್ ಬ್ರಾವೋ, ಅಕೇಲ್ ಹೊಸೈನ್, ರವಿ ರಾಂಪಾಲ್
ಬಾಂಗ್ಲಾದೇಶ ಸಂಭಾವ್ಯ ತಂಡ: ಮೊಹಮ್ಮದ್ ನಯಿಮ್, ಲಿಟನ್ ದಾಸ್, ಶಾಕಿಬ್ ಅಲ್ ಹಸನ್, ಮುಶ್ಫಿಕುರ್ ರಹೀಮ್, ಮಹಮ್ಮದುಲ್ಲಾ (ನಾಯಕ), ಅಫೀಫ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮಹೇದಿ ಹಸನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications