ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್ vs ಬಾಂಗ್ಲಾದೇಶ ಪಂದ್ಯದ ಟಾಸ್ ವರದಿ, ಆಡುವ ಬಳಗ, ಲೈವ್ ಸ್ಕೋರ್

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಈ ಪಂದ್ಯದಲ್ಲಿ ಇಂದು ( ಅಕ್ಟೋಬರ್ 29 ) ಹಾಲಿ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 23ನೇ ಪಂದ್ಯವಾಗಿದ್ದು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಎದುರಾಳಿ ವೆಸ್ಟ್ ಇಂಡೀಸ್ ತಂಡಕ್ಕೆ ನೀಡಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರಿಸ್ ಗೇಲ್, ಎವಿನ್ ಲೆವಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕೀರಾನ್ ಪೊಲಾರ್ಡ್ (ನಾಯಕ), ಆಂಡ್ರೆ ರಸೆಲ್, ಜೇಸನ್ ಹೋಲ್ಡರ್, ಡ್ವೇನ್ ಬ್ರಾವೋ, ರೋಸ್ಟನ್ ಚೇಸ್, ಅಕೇಲ್ ಹೊಸೈನ್, ರವಿ ರಾಂಪಾಲ್
ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಸೌಮ್ಯ ಸರ್ಕಾರ್, ಮಹಮ್ಮದುಲ್ಲಾ (ನಾಯಕ), ಅಫೀಫ್ ಹೊಸೈನ್, ಮಹೇದಿ ಹಸನ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್
ವೆಸ್ಟ್ ಇಂಡೀಸ್ vs ಬಾಂಗ್ಲಾದೇಶ ಪಂದ್ಯದ ಲೈವ್ ಸ್ಕೋರ್:
ಇನ್ನು ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳೆರಡೂ ತಲಾ 2 ಪಂದ್ಯಗಳನ್ನಾಡಿದ್ದು ಎರಡರಲ್ಲಿಯೂ ಎರಡೂ ತಂಡಗಳು ಸೋತಿವೆ. ಈ ಮೂಲಕ ಸೂಪರ್ 12 ಹಂತದ ಗ್ರೂಪ್ 1ರ ಅಂಕಪಟ್ಟಿಯಲ್ಲಿ ಅಂತಿಮ 2 ಸ್ಥಾನಗಳನ್ನು ಈ ತಂಡಗಳು ಪಡೆದುಕೊಂಡಿವೆ. ಹೀಗೆ ಸೂಪರ್ 12 ಹಂತದ ಆರಂಭದ 2 ಪಂದ್ಯಗಳನ್ನು ಸೋತಿರುವ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಸೆಮಿಫೈನಲ್ ಹಾದಿಯಿಂದ ಬಹಳ ದೂರ ಸರಿದಿದ್ದು ಇಂದು ನಡೆಯಲಿರುವ ಪಂದ್ಯದಲ್ಲಿ ಯಾವ ತಂಡ ಸೋಲುತ್ತದೆಯೋ ಆ ತಂಡ ಅಧಿಕೃತವಾಗಿ ಸೆಮಿಫೈನಲ್ ರೇಸ್‌ನಿಂದ ಹೊರಬೀಳಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಇಂದು ನಡೆಯುತ್ತಿರುವ ಪಂದ್ಯ ಎರಡೂ ತಂಡಗಳಿಗೂ ಸಹ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications