ಟಿ20 ವಿಶ್ವಕಪ್: ಸೌತ್ಆಫ್ರಿಕಾ vs ಶ್ರೀಲಂಕಾ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯವೊಂದರಲ್ಲಿ ಇಂದು ( ಅಕ್ಟೋಬರ್ 30 ) ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಸೆಣಸಾಟ ನಡೆಸಲಿವೆ. ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿರುವ ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳೆರಡೂ ಸಮಬಲ ಸಾಧಿಸಿದ್ದು ದಕ್ಷಿಣ ಆಫ್ರಿಕಾ ತಂಡ ಉತ್ತಮ ನೆಟ್ ರನ್ ರೇಟ್ ಇರುವ ಕಾರಣ ತೃತೀಯ ಸ್ಥಾನದಲ್ಲಿದ್ದರೆ, ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಕಾರಣದಿಂದಾಗಿ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನವನ್ನು ಅಂಕಪಟ್ಟಿಯಲ್ಲಿ ಪಡೆದುಕೊಂಡಿದೆ.
ಹೌದು, ಸೌತ್ ಆಫ್ರಿಕಾ ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳನ್ನಾಡಿದ್ದು 1 ಪಂದ್ಯದಲ್ಲಿ ಜಯ ಗಳಿಸಿ ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಶ್ರೀಲಂಕಾ ತಂಡ ಕೂಡ ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು 1 ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದ್ದು ಗೆಲ್ಲುವ ತಂಡ ಸೆಮಿಫೈನಲ್ ಸುತ್ತಿನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವತ್ತ ಸಾಗಲಿದೆ ಮತ್ತು ಸೋತ ತಂಡ ಸೆಮಿಫೈನಲ್ ರೇಸ್‌ನಲ್ಲಿ ಹಿನ್ನಡೆ ಅನುಭವಿಸಲಿದೆ.
ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಶ್ರೀಲಂಕಾ ತನ್ನ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಅನುಭವಿಸಿತ್ತು. ಇನ್ನು ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಅನುಭವಿಸಿದ್ದ ದಕ್ಷಿಣ ಆಫ್ರಿಕಾ ದ್ವಿತೀಯ ಪಂದ್ಯದಲ್ಲಿ ಹಾಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ಜಯವನ್ನು ಸಾಧಿಸಿತ್ತು.
ಇಂದು ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆಯಲಿರುವ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದೆ.
ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಟಿ ಟ್ವೆಂಟಿ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದವರ ವಿವರ:
* ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಇದುವರೆಗೂ ಒಟ್ಟು 16 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಸೌತ್ ಆಫ್ರಿಕಾ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಶ್ರೀಲಂಕಾ 5 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಟಿ ಟ್ವೆಂಟಿ ಮುಖಾಮುಖಿಯಲ್ಲಿ ಸೌತ್ ಆಫ್ರಿಕಾ ಸ್ಪಷ್ಟ ಮೇಲುಗೈ ಸಾಧಿಸಿದೆ.
* ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ಇಂದಿನ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಕ್ರೀಡಾಂಗಣದಲ್ಲಿ ಇತ್ತಂಡಗಳು ಇದುವರೆಗೂ ಯಾವುದೇ ಪಂದ್ಯದಲ್ಲಿಯೂ ಮುಖಾಮುಖಿಯಾಗಿಲ್ಲ.
* ಇನ್ನು ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೌತ್ ಆಫ್ರಿಕಾ ತಂಡ ಗೆದ್ದು ಬೀಗಿದೆ. ಹೀಗೆ ಇತ್ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಸೌತ್ ಆಫ್ರಿಕಾ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ.
* ಇನ್ನು ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವೆ ಒಟ್ಟು 3 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳು ನಡೆದಿದ್ದು 2 ಪಂದ್ಯಗಳಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿದ್ದರೆ ಕೇವಲ 1 ಪಂದ್ಯದಲ್ಲಿ ಮಾತ್ರ ಶ್ರೀಲಂಕಾ ಗೆದ್ದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications