ಟಿ20 ವಿಶ್ವಕಪ್: ಸೌತ್ಆಫ್ರಿಕಾ vs ಶ್ರೀಲಂಕಾ ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯವೊಂದರಲ್ಲಿ ಇಂದು ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 25ನೇ ಪಂದ್ಯವಾಗಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು ತನ್ನ ಎದುರಾಳಿ ತಂಡವಾದ ಶ್ರೀಲಂಕಾಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದೆ.
ಆಡುವ ಬಳಗಗಳು:
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ ಮತ್ತು ತಬ್ರೈಜ್ ಶಮ್ಸಿ
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಕುಸಲ್ ಪೆರೇರಾ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಅವಿಷ್ಕ ಫೆರ್ನಾಂಡೋ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಮಹೇಶ್ ತೀಕ್ಷಣ ಮತ್ತು ಲಹಿರು ಕುಮಾರ
ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ಲೈವ್ ಸ್ಕೋರ್:
ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿರುವ ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳೆರಡೂ ಸಮಬಲ ಸಾಧಿಸಿದ್ದು ದಕ್ಷಿಣ ಆಫ್ರಿಕಾ ತಂಡ ಉತ್ತಮ ನೆಟ್ ರನ್ ರೇಟ್ ಇರುವ ಕಾರಣ ತೃತೀಯ ಸ್ಥಾನದಲ್ಲಿದ್ದರೆ, ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಕಾರಣದಿಂದಾಗಿ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನವನ್ನು ಅಂಕಪಟ್ಟಿಯಲ್ಲಿ ಪಡೆದುಕೊಂಡಿದೆ.
ಹೌದು, ಸೌತ್ ಆಫ್ರಿಕಾ ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳನ್ನಾಡಿದ್ದು 1 ಪಂದ್ಯದಲ್ಲಿ ಜಯ ಗಳಿಸಿ ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಶ್ರೀಲಂಕಾ ತಂಡ ಕೂಡ ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು 1 ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದ್ದು ಗೆಲ್ಲುವ ತಂಡ ಸೆಮಿಫೈನಲ್ ಸುತ್ತಿನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವತ್ತ ಸಾಗಲಿದೆ ಮತ್ತು ಸೋತ ತಂಡ ಸೆಮಿಫೈನಲ್ ರೇಸ್‌ನಲ್ಲಿ ಹಿನ್ನಡೆ ಅನುಭವಿಸಲಿದೆ.
ಹೀಗಾಗಿ ಇಂದು ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದ್ದು ಕುತೂಹಲವನ್ನು ಹುಟ್ಟುಹಾಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications