ಟಿ20 ವಿಶ್ವಕಪ್: ಆಸ್ಟ್ರೇಲಿಯಾ vs ಇಂಗ್ಲೆಂಡ್ ಟಾಸ್ ವರದಿ, ಆಡುವ ಬಳಗ ಮತ್ತು ಲೈವ್ ಸ್ಕೋರ್

ಈ ಬಾರಿಯ ಪ್ರತಿಷ್ಠಿತ ಟ್ವೆಂಟಿ ವಿಶ್ವಕಪ್ ಟೂರ್ನಿಯ 26ನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಇಂದು ( ಅಕ್ಟೋಬರ್ 30 ) ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿರುವ ಬಲಿಷ್ಠ ತಂಡಗಳಾದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಅಂಕ ಪಟ್ಟಿಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿವೆ. ಹೀಗಾಗಿ ಇಂದು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಪಂದ್ಯದಲ್ಲಿ ಜಯಗಳಿಸುವ ತಂಡ ಅಗ್ರಸ್ಥಾನವನ್ನು ಪಡೆದುಕೊಳ್ಳಲಿದ್ದು ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೂ ಒಟ್ಟು 2 ಪಂದ್ಯಗಳನ್ನಾಡಿದ್ದು ಎರಡೂ ತಂಡಗಳು ಸಹ ತಾವು ಆಡಿದ ಎರಡೂ ಪಂದ್ಯಗಳಲ್ಲಿಯೂ ಗೆಲುವನ್ನು ಸಾಧಿಸುವುದರ ಮೂಲಕ ಉತ್ತಮ ಹಂತದಲ್ಲಿವೆ. ಇಯಾನ್ ಮಾರ್ಗನ್ ನಾಯಕತ್ವದ ಇಂಗ್ಲೆಂಡ್ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಹಾಲಿ ಟಿ 20 ವಿಶ್ವಕಪ್ ಚಾಂಪಿಯನ್ಸ್ ಎನಿಸಿಕೊಂಡಿರುವ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು, ನಂತರ ತನ್ನ ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿತು. ಇನ್ನು ಆ್ಯರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವನ್ನು ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿತು, ನಂತರ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿಯೂ ಭರ್ಜರಿ ಜಯ ಸಾಧಿಸಿತು.
ಹೀಗೆ ಟೂರ್ನಿಯಲ್ಲಿ ಸಮವಾಗಿ ಯಶಸ್ಸನ್ನು ಗಳಿಸಿರುವ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್ ನಡುವಿನ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದೆ.
ಆಡುವ ಬಳಗಗಳು
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ ಮತ್ತು ಜೋಶ್ ಹ್ಯಾಜಲ್‌ವುಡ್
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಟೈಮಲ್ ಮಿಲ್ಸ್
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಲೈವ್ ಸ್ಕೋರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications