
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮಹತ್ವದ ಪಂದ್ಯ ಇಂದು ನಡೆಯುತ್ತಿದೆ. ಈ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದಿದ್ದು ಭಾರತವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಮೊದಲಿಗೆ ಎದುರಾಳಿಗೆ ಗುರಿಯನ್ನು ನಿಗದಿಪಡಿಸುವ ಸವಾಲು ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆ ಮಾಡಿಕೊಂಡಿದೆ. ಯುವ ಆಟಗಾರ ಇಶಾನ್ ಕಿಶನ್ ಆಡುವ ಬಳಗದಲ್ಲಿ ಸೇರಿಕೊಂಡಿದ್ದು ಸೂರ್ಯಕುಮಾರ್ ಯಾದವ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇನ್ನು ವೇಗಿ ಭುವನೇಶ್ವರ್ ಕುಮಾರ್ ಕೂಡ ಆಡುವ ಬಳಗದಿಂದ ಹೊರಬಿದ್ದಿದ್ದು ಶಾರ್ದೂಲ್ ಠಾಕೂರ್‌ಗೆ ಅವಕಾಶ ನೀಡಲಾಗಿದೆ. ಇನ್ನು ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಮುಂದುವರಿದಿದ್ದಾರೆ.
ಇನ್ನು ಈ ಪಂದ್ಯಕ್ಕಾಗಿ ನ್ಯೂಜಿಲೆಂಡ್ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಟಿಮ್ ಸೈಫರ್ಟ್ ಸ್ಥಾನದಲ್ಲಿ ಆಡಂ ಮಿಲ್ನೆ ಅವಕಾಶ ಪಡೆದುಕೊಂಡಿದ್ದಾರೆ.
Live ಸ್ಕೋರ್ ಕಾರ್ಡ್ ಹೀಗಿದೆ
ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಆಘಾತಕಾರಿ ಸೋಲುಂಡಿದೆ. ಈ ಮೂಲಕ ಈ ಬಾರಿಯ ವಿಶ್ವಕಪ್‌ನ ಮೊದಲ ಎರಡು ಪಂದ್ಯಗಳಲ್ಲಿಯೂ ಗೆಲುವು ಭಾರತ ತಂಡಕ್ಕೆ ಮರೀಚಿಕೆಯಾಗಿದೆ. ಗೆಲ್ಲಬೇಕಾಗಿದ್ದ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತ ತಂಡ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೇರುವ ಕನಸನ್ನು ಬಹುತೇಕ ಭಗ್ನಗೊಳಿಸಿದಂತಾಗಿದೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ನ್ಯೂಜಿಲೆಂಡ್‌ಗೆ ಕೇವಲ 111 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಕೇವಲ 14.3 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ 2 ವಿಕೆಟ್ ಕಳೆದುಕೊಂಡು ಗೆದ್ದು ಬೀಗಿದೆ. ಈ ಮೂಲಕ ಕಿವೀಸ್ ಪಡೆ ಸೆಮಿಫೈನಲ್ ರೇಸ್‌ನಲ್ಲಿ ಮುನ್ನುಗ್ಗಿದೆ.
ಭಾರತ ತಂಡ ನೀಡಿದ 111 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕಿವೀಸ್ ಪಡೆಗೆ ಸಾಧಾರಣ ಆರಂಭ ದೊರೆಯಿತು. ಸ್ಪೋಟಕ ಪ್ರದರ್ಶನ ನಿಡುವ ಸೂಚನೆ ನೀಡಿದ ಮಾರ್ಟಿನ್ ಗಪ್ಟಿಲ್ ತಂಡದ ಮೊತ್ತ 24 ರನ್‌ಗಳಾಗಿದ್ದಾರ 20 ರನ್‌ಗಳನ್ನು ಗಳಿಸಿ ಔಟಾದರು. ನಂತರ ಡೇರಲ್ ಮಿಚೆಲ್‌ಗೆ ಜೊತೆಯಾದ ನಾಯಕ ಕೇನ್ ವಿಲಿಯಮ್ಸನ್ ಅದ್ಭುತ ಆಟವನ್ನು ಪ್ರದರ್ಶಿಸಿದರು. ಈ ಜೋಡಿ ಭರ್ಜರಿ 72 ರನ್‌ಗಳ ಜೊತೆಯಾಟವನ್ನು ನೀಡಿದರು. ಎಚ್ಚರಿಕೆಯ ಆಟವನ್ನು ಪ್ರದರ್ಶಿಸುತ್ತಾ ಸಾಗಿದ ಈ ಜೋಡಿ ಭಾರತದ ಗೆಲುವಿಗೆ ಸಣ್ಣ ಅವಕಾಶವನ್ನು ಕೂಡ ನೀಡಲಿಲ್ಲ. 49 ರನ್‌ಗಳಿಸಿದ್ದ ಮಿಚೆಲ್ ಬೂಮ್ರಾಗೆ ವಿಕೆಟ್ ಒಪ್ಪಿಸಿದರಾದರೂ ಇದು ಭಾರತಕ್ಕೆ ಯಾವುದೇ ಲಾಭ ನೀಡಲಿಲ್ಲ. ಅದಾಗಲೇ ಗೆಲುವಿನ ಸನಿಹಕ್ಕೆ ತಲುಪಿದ್ದು ಕೇನ್ ಬಳಗ. ನಂತರ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಡೆವೋನ್ ಕಾನ್ವೆ ಸೇರಿಕೊಂಡು ಗೆಲುವಿನ ಪ್ರಕ್ರಿಯೆ ಪೂರ್ಣಗೊಳಿಸಿದರು.
ಭಾರತ ಪ್ಲೇಯಿಂಗ್ XI: ಇಶಾನ್ ಕಿಶನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಬೆಂಚ್: ರವಿಚಂದ್ರನ್ ಅಶ್ವಿನ್, ರಾಹುಲ್ ಚಹಾರ್, ಸೂರ್ಯಕುಮಾರ್ ಯಾದವ್, ಭುವನೇಶ್ವರ್ ಕುಮಾರ್
ನ್ಯೂಜಿಲೆಂಡ್ ಪ್ಲೇಯಿಂಗ್ XI : ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಜೇಮ್ಸ್ ನೀಶಮ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್
ಬೆಂಚ್: ಕೈಲ್ ಜೇಮಿಸನ್, ಟಾಡ್ ಆಸ್ಟಲ್, ಮಾರ್ಕ್ ಚಾಪ್ಮನ್, ಟಿಮ್ ಸೀಫರ್ಟ್