ಟಿ20 ವಿಶ್ವಕಪ್: ಪಾಕ್ vs ನಮೀಬಿಯಾ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮತ್ತು ಲೈವ್‌ ಸ್ಕೋರ್

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ಇಂದು ( ನವೆಂಬರ್‌ 2 ) ಪಾಕಿಸ್ತಾನ ಮತ್ತು ನಮೀಬಿಯಾ ತಂಡಗಳು ಸೆಣಸಾಟ ನಡೆಸುತ್ತಿವೆ. ಪಾಕಿಸ್ತಾನ ಮತ್ತು ನಮೀಬಿಯಾ ತಂಡಗಳ ನಡುವೆ ನಡೆಯುತ್ತಿರುವ ಈ ಪಂದ್ಯ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ 31ನೇ ಪಂದ್ಯವಾಗಿದ್ದು, ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದೆ.

ಪಾಕ್ vs ನಮೀಬಿಯಾ ಲೈವ್‌ ಸ್ಕೋರ್

1
51694

ಆಡುವ ಬಳಗಗಳು

ಪಾಕಿಸ್ತಾನ ಆಡುವ ಬಳಗ: ಮುಹಮ್ಮದ್ ರಿಜ್ವಾ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಮುಹಮ್ಮದ್ ಹಫೀಜ್, ಶಾಯೆಬ್ ಮಲಿಕ್, ಆಸಿಫ್ ಅಲಿ, ಶಾದಾಬ್ ಖಾನ್, ಇಮಾದ್ ವಸೀಮ್, ಹಸನ್ ಅಲಿ, ಹ್ಯಾರಿಸ್ ರಯೂಫ್ ಮತ್ತು ಶಾಹೀನ್ ಫರಿದಿ

ನಮೀಬಿಯಾ ಆಡುವ ಬಳಗ: ಸ್ಟೀಫನ್ ಬಾರ್ಡ್, ಮೈಕೆಲ್ ವ್ಯಾನ್ ಲಿಂಗೆನ್, ಕ್ರೇಗ್ ವಿಲಿಯಮ್ಸ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜಾನ್ ನಿಕೋಲ್ ಲಾಫ್ಟಿ-ಈಟನ್, ಝೇನ್ ಗ್ರೀನ್ (ವಿಕೆಟ್ ಕೀಪರ್), ಡೇವಿಡ್ ವೈಸ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ರೂಬೆನ್ ಟ್ರಂಪೆಲ್ಮನ್ ಮತ್ತು ಬೆನ್ ಶಿಕೊಂಗೊ

ಟಿ20 ವಿಶ್ವಕಪ್: ಫೈನಲ್‌ ಪ್ರವೇಶಿಸಲಿರುವ ತಂಡಗಳನ್ನು ಹೆಸರಿಸಿದ ಬೆನ್ ಸ್ಟೋಕ್ಸ್ಟಿ20 ವಿಶ್ವಕಪ್: ಫೈನಲ್‌ ಪ್ರವೇಶಿಸಲಿರುವ ತಂಡಗಳನ್ನು ಹೆಸರಿಸಿದ ಬೆನ್ ಸ್ಟೋಕ್ಸ್

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ನಮೀಬಿಯಾ ತಂಡಗಳು ಸೂಪರ್ 12 ಹಂತದ ಗ್ರೂಪ್‌ 2ರಲ್ಲಿ ಸ್ಥಾನ ಪಡೆದುಕೊಂಡಿದ್ದು, ಈ ಗುಂಪಿನ ಅಂಕ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನ ಪಡೆದುಕೊಂಡಿದ್ದರೆ, ನಮೀಬಿಯಾ ತಂಡ ಸದ್ಯ ನಾಲ್ಕನೇ ಸ್ಥಾನದಲ್ಲಿದೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ 3 ಪಂದ್ಯಗಳನ್ನಾಡಿರುವ ಪಾಕಿಸ್ತಾನ ಮೂರರಲ್ಲಿಯೂ ಜಯಗಳಿಸುವುದರ ಮೂಲಕ 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ನಮೀಬಿಯಾ ಪ್ರಸ್ತುತ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿ 1 ಪಂದ್ಯದಲ್ಲಿ ಗೆದ್ದು, ಮತ್ತೊಂದರಲ್ಲಿ ಸೋಲುವುದರ ಮೂಲಕ 2 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.

ಇನ್ನು ಗ್ರೂಪ್‌ 1 ತಂಡಗಳಾದ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಇತ್ತೀಚೆಗಷ್ಟೇ ನಡೆದ ಪಂದ್ಯವೊಂದರಲ್ಲಿ ಇಂಗ್ಲೆಂಡ್ ಅಮೋಘ ಜಯವನ್ನು ಸಾಧಿಸುವುದರ ಮೂಲಕ 8 ಅಂಕಗಳನ್ನು ಪಡೆದುಕೊಂಡು ಸೆಮಿಫೈನಲ್ ಪ್ರವೇಶವನ್ನು ಮಾಡಿತು. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಮೊದಲು ಅಧಿಕೃತವಾಗಿ ಸೆಮಿಫೈನಲ್ ಪ್ರವೇಶವನ್ನು ಪಡೆದುಕೊಂಡ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ.

ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವೆನಿಸಿಕೊಂಡರೆ, ಇಂದು ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದರೆ ಅಧಿಕೃತವಾಗಿ ಸೆಮಿ ಫೈನಲ್ ಪ್ರವೇಶಿಸಲಿರುವ ಎರಡನೇ ತಂಡ ಪಾಕಿಸ್ತಾನವಾಗಲಿದೆ. ಹಾಗೆ ನೋಡಿದರೆ ಭಾರತ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನಗಳಂತಹ ತಂಡಗಳಿಗೆ ಸೋಲುಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿರುವ ಪಾಕಿಸ್ತಾನ ತಂಡಕ್ಕೆ ನಮೀಬಿಯಾ ತಂಡವನ್ನು ಸೋಲಿಸುವುದೇನು ತೀರಾ ಕಷ್ಟದ ಕೆಲಸವಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಪಾಕಿಸ್ತಾನ ಜಯ ಗಳಿಸಿ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಡುವುದು ಬಹುತೇಕ ಖಚಿತ ಎನ್ನಬಹುದು.

ಇನ್ನು ಪಾಕಿಸ್ತಾನ ಮತ್ತು ನಮೀಬಿಯಾ ತಂಡಗಳು ಇದುವರೆಗೂ ಯಾವುದೇ ರೀತಿಯ ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿಯೂ ಕೂಡ ಮುಖಾಮುಖಿಯಾಗಿಲ್ಲ. ಹೀಗಾಗಿ ಇಂದು ಇತ್ತಂಡಗಳ ನಡುವೆ ನಡೆಯುತ್ತಿರುವ ಪಂದ್ಯವೇ ಮೊದಲ ಮುಖಾಮುಖಿಯಾಗಿದೆ.

For Quick Alerts
ALLOW NOTIFICATIONS
For Daily Alerts
Story first published: Tuesday, November 2, 2021, 19:37 [IST]
Other articles published on Nov 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X