For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ನ್ಯೂಜಿಲೆಂಡ್‌ vs ಸ್ಕಾಟ್ಲೆಂಡ್ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮತ್ತು ಲೈವ್‌ ಸ್ಕೋರ್

T20 World Cup 2021, Match 32: New Zealand vs Scotland Toss Report and Live Score

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಈ ಬಾರಿಯ ಆವೃತ್ತಿಯ ಸೂಪರ್ 12 ಹಂತದ ಪಂದ್ಯವೊಂದರಲ್ಲಿ ಇಂದು ( ನವೆಂಬರ್‌ 3 ) ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟೂರ್ನಿಯ 32ನೇ ಪಂದ್ಯ ಇದಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸ್ಕಾಟ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ತಂಡವಾದ ನ್ಯೂಜಿಲೆಂಡ್‌ಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದೆ. ಹಾಗೂ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರರು ರೆಟ್ರೋ ಜರ್ಸಿಯನ್ನು ಧರಿಸಿ ಕಣಕ್ಕಿಳಿಯುತ್ತಿದ್ದಾರೆ.

ನ್ಯೂಜಿಲೆಂಡ್ ಮತ್ತು ಸ್ಕಾಟ್ ಲೆಂಡ್ ನಡುವಿನ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಎರಡೂ ತಂಡಗಳ ಆಡುವ ಬಳಗಗಳ ಮಾಹಿತಿ ಈ ಕೆಳಕಂಡಂತಿದೆ.

ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್

ಸ್ಕಾಟ್ಲೆಂಡ್ ಪ್ಲೇಯಿಂಗ್ ಇಲೆವೆನ್: ಜಾರ್ಜ್ ಮುನ್ಸಿ, ಕೈಲ್ ಕೋಟ್ಜರ್(ನಾಯಕ), ಮ್ಯಾಥ್ಯೂ ಕ್ರಾಸ್(ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಅಲಾಸ್ಡೇರ್ ಇವಾನ್ಸ್, ಬ್ರಾಡ್ಲಿ ವೀಲ್

ನ್ಯೂಜಿಲೆಂಡ್ ಮತ್ತು ಸ್ಕಾಟ್ ಲೆಂಡ್ ನಡುವಿನ ಈ ಪಂದ್ಯದ ಲೈವ್ ಸ್ಕೋರ್ ಈ ಕೆಳಕಂಡಂತಿದೆ:

1
51695

ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳನ್ನಾಡಿ 1 ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದರೆ, ಟೂರ್ನಿಯಲ್ಲಿ ಇದುವರೆಗೂ ಒಟ್ಟು 2 ಪಂದ್ಯಗಳನ್ನಾಡಿರುವ ಸ್ಕಾಟ್ಲೆಂಡ್ ಎರಡೂ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಕುಸಿದಿದೆ. ಹೀಗೆ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಈಗಾಗಲೇ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳನ್ನು ಆಡಿದ್ದು ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಬೇಕೆಂದರೆ ತನ್ನ ಮುಂದಿನ ಎಲ್ಲಾ 3 ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಹೌದು, ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ನ್ಯೂಜಿಲೆಂಡ್ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನ್ನು ಅನುಭವಿಸಿತ್ತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್ ಟೂರ್ನಿಯಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಹೀಗೆ ಮೊದಲೆರಡು ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಮಾತ್ರ ಗೆದ್ದಿರುವ ನ್ಯೂಜಿಲೆಂಡ್ ಸೆಮಿಫೈನಲ್ ಹಂತ ಪ್ರವೇಶಿಸಬೇಕೆಂದರೆ ಮುಂದಿನ ತನ್ನ ಎಲ್ಲಾ ಪಂದ್ಯಗಳನ್ನು ಕೂಡ ಕಡ್ಡಾಯವಾಗಿ ಗೆಲ್ಲಲೇಬೇಕಾಗಿದೆ. ಹೀಗಾಗಿ ಇಂದು ಸ್ಕಾಟ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯ ಕೂಡ ನ್ಯೂಜಿಲೆಂಡ್ ಪಾಲಿಗೆ ಪ್ರಮುಖ ಪಂದ್ಯವಾಗಿದ್ದು ನ್ಯೂಜಿಲೆಂಡ್ ತಂಡ ದೊಡ್ಡ ಅಂತರದಿಂದ ಪಂದ್ಯ ಗೆಲ್ಲುವತ್ತ ಚಿತ್ತ ನೆಟ್ಟಿದೆ.

ನ್ಯೂಜಿಲೆಂಡ್‌ vs ಸ್ಕಾಟ್ಲೆಂಡ್ ಟಿ 20 ಕ್ರಿಕೆಟ್‌ನ ಮುಖಾಮುಖಿಯ ಫಲಿತಾಂಶ

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಇದುವರೆಗೂ ಒಟ್ಟು 1 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಟ ನಡೆಸಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲುವನ್ನು ಸಾಧಿಸಿದೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಬೀಗಿದೆ. ಹೀಗೆ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳ ಟಿ ಟ್ವೆಂಟಿ ಕ್ರಿಕೆಟ್ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

Story first published: Wednesday, November 3, 2021, 15:33 [IST]
Other articles published on Nov 3, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+