For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ನ್ಯೂಜಿಲೆಂಡ್‌ vs ಸ್ಕಾಟ್ಲೆಂಡ್ ಸಂಭಾವ್ಯ ಆಡುವ ಬಳಗ ಮತ್ತು ಪಂದ್ಯದ ಮಾಹಿತಿ

T20 World Cup 2021, Match 32: Scotland vs New Zealand head to head, Match preview and probable playing XI details

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 32ನೇ ಪಂದ್ಯದಲ್ಲಿ ಇಂದು ( ನವೆಂಬರ್‌ 3 ) ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ಇನ್ನು ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳನ್ನಾಡಿ 1 ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದರೆ, ಟೂರ್ನಿಯಲ್ಲಿ ಇದುವರೆಗೂ ಒಟ್ಟು 2 ಪಂದ್ಯಗಳನ್ನಾಡಿರುವ ಸ್ಕಾಟ್ಲೆಂಡ್ ಎರಡೂ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಕುಸಿದಿದೆ. ಹೀಗೆ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಈಗಾಗಲೇ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳನ್ನು ಆಡಿದ್ದು ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಬೇಕೆಂದರೆ ತನ್ನ ಮುಂದಿನ ಎಲ್ಲಾ 3 ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಹೌದು, ಬಲಿಷ್ಠ ತಂಡಗಳಲ್ಲಿ ಒಂದಾಗಿರುವ ನ್ಯೂಜಿಲೆಂಡ್ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋಲನ್ನು ಅನುಭವಿಸಿತ್ತು. ನಂತರ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್ ಟೂರ್ನಿಯಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಹೀಗೆ ಮೊದಲೆರಡು ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಮಾತ್ರ ಗೆದ್ದಿರುವ ನ್ಯೂಜಿಲೆಂಡ್ ಸೆಮಿಫೈನಲ್ ಹಂತ ಪ್ರವೇಶಿಸಬೇಕೆಂದರೆ ಮುಂದಿನ ತನ್ನ ಎಲ್ಲಾ ಪಂದ್ಯಗಳನ್ನು ಕೂಡ ಕಡ್ಡಾಯವಾಗಿ ಗೆಲ್ಲಲೇಬೇಕಾಗಿದೆ. ಹೀಗಾಗಿ ಇಂದು ಸ್ಕಾಟ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯ ಕೂಡ ನ್ಯೂಜಿಲೆಂಡ್ ಪಾಲಿಗೆ ಪ್ರಮುಖ ಪಂದ್ಯವಾಗಿದ್ದು ನ್ಯೂಜಿಲೆಂಡ್ ತಂಡ ದೊಡ್ಡ ಅಂತರದಿಂದ ಪಂದ್ಯ ಗೆಲ್ಲುವತ್ತ ಚಿತ್ತ ನೆಟ್ಟಿದೆ.

ಪಂದ್ಯದ ವಿವರ: ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ಸಂಭಾವ್ಯ ತಂಡಗಳು

ನ್ಯೂಜಿಲೆಂಡ್‌ ಸಂಭಾವ್ಯ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್

ಸ್ಕಾಟ್ಲೆಂಡ್ ಸಂಭಾವ್ಯ ತಂಡ: ಜಾರ್ಜ್ ಮುನ್ಸೆ, ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ಕ್ಯಾಲಮ್ ಮ್ಯಾಕ್ಲಿಯೋಡ್, ರಿಚಿ ಬೆರಿಂಗ್ಟನ್ (ನಾಯಕ), ಕ್ರೇಗ್ ವ್ಯಾಲೇಸ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಜೋಶ್ ಡೇವಿ, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್

ಟಿ ಟ್ವೆಂಟಿ ಇತಿಹಾಸದಲ್ಲಿ ಇತ್ತಂಡಗಳ ಮುಖಾಮುಖಿ ಫಲಿತಾಂಶದ ವಿವರ

ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಇದುವರೆಗೂ ಒಟ್ಟು 1 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಟ ನಡೆಸಿದ್ದು, ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲುವನ್ನು ಸಾಧಿಸಿದೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಬೀಗಿದೆ. ಹೀಗೆ ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳ ಟಿ ಟ್ವೆಂಟಿ ಕ್ರಿಕೆಟ್ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

ಪಿಚ್ ವರದಿ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪಂದ್ಯಗಳಲ್ಲಿ 140-160ರ ನಡುವಿನ ಮೊತ್ತಗಳನ್ನು ತಂಡಗಳು ಕಲೆಹಾಕಿವೆ. ಈ ಕ್ರೀಡಾಂಗಣದಲ್ಲಿ ಸರಾಸರಿ ಅಂತರರಾಷ್ಟ್ರೀಯ ಟಿ20 ಪಂದ್ಯಗಳ 1ನೇ ಇನಿಂಗ್ಸ್ ಸ್ಕೋರ್ 143 ಆಗಿದ್ದರೆ, ಸರಾಸರಿ 2ನೇ ಇನಿಂಗ್ಸ್ ಸರಾಸರಿ ಸ್ಕೋರ್ 122 ಆಗಿದೆ. ಈ ಕ್ರೀಡಾಂಗಣದಲ್ಲಿ ಸ್ಪಿನ್ನರ್‌ಗಳಿಗೆ ಅನುಕೂಲ ಹೆಚ್ಚಿದ್ದು ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿ ಅಂಶ ಅನುಕೂಲವಾಗಲಿದೆ.

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯನ್ನು ಭಾರತದಲ್ಲಿ ನೇರ ಪ್ರಸಾರ ಮಾಡುತ್ತಿದೆ. ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಈ ಪಂದ್ಯಕ್ಕೆ ಲೈವ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಅನ್ನು ಒದಗಿಸುತ್ತಿದೆ.

Story first published: Wednesday, November 3, 2021, 12:55 [IST]
Other articles published on Nov 3, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+