ಟಿ20 ವಿಶ್ವಕಪ್: ಭಾರತ vs ಸ್ಕಾಟ್ಲೆಂಡ್ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮತ್ತು ಲೈವ್ ಸ್ಕೋರ್

ಪ್ರಸ್ತುತ ಯುಎಇಯಲ್ಲಿ ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯ 37ನೇ ಪಂದ್ಯದಲ್ಲಿ ಇಂದು ( ನವೆಂಬರ್ 5 ) ಭಾರತ ಮತ್ತು ಸ್ಕಾಟ್ಲೆಂಡ್ ತಂಡಗಳು ಸೆಣಸಾಡುತ್ತಿವೆ. ಇತ್ತಂಡಗಳ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೂರ್ನಿಯಲ್ಲಿ ಈಗಾಗಲೇ 3 ಪಂದ್ಯಗಳನ್ನಾಡಿ ಕೇವಲ 1 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಈ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಇದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ತಂಡ ಸ್ಕಾಟ್ಲೆಂಡ್‌ಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.
ಆಡುವ ಬಳಗಗಳು:
ಭಾರತ ತಂಡ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಸ್ಕಾಟ್ಲೆಂಡ್ ತಂಡ: ಜಾರ್ಜ್ ಮುನ್ಸಿ, ಕೈಲ್ ಕೋಟ್ಜರ್(ನಾಯಕ), ಮ್ಯಾಥ್ಯೂ ಕ್ರಾಸ್(ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಅಲಾಸ್ಡೇರ್ ಇವಾನ್ಸ್, ಬ್ರಾಡ್ಲಿ ವೀಲ್
ಭಾರತ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್:
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications