Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ಸೆಣಸಾಟ

T20 World Cup 2021, Match 38: Australia vs West Indies Toss Report, playing XI and Live Score

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಈ ಬಾರಿಯ ಆವೃತ್ತಿಯ ಪಂದ್ಯವೊಂದರಲ್ಲಿ ಆಸ್ಟ್ರೇಲಿಯ ಮತ್ತು ಹಾಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ ಎನಿಸಿಕೊಂಡಿರುವ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇನ್ನು ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಈ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 38ನೇ ಪಂದ್ಯವಾಗಿದ್ದು, ಅಬುಧಾಬಿಯ ಶೈಖ್ ಝಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ವೆಸ್ಟ್ ಇಂಡೀಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.

ಆಡುವ ಬಳಗಗಳು

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ ಮತ್ತು ಜೋಶ್ ಹ್ಯಾಜಲ್‌ವುಡ್

ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರಿಸ್ ಗೇಲ್, ಎವಿನ್ ಲೆವಿಸ್, ನಿಕೋಲಸ್ ಪೂರನ್ ( ವಿಕೆಟ್ ಕೀಪರ್), ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಕೀರಾನ್ ಪೊಲಾರ್ಡ್ (ನಾಯಕ), ಆಂಡ್ರೆ ರಸೆಲ್, ಜೇಸನ್ ಹೋಲ್ಡರ್, ಡ್ವೇನ್ ಬ್ರಾವೋ, ಹೇಡನ್ ವಾಲ್ಷ್ ಮತ್ತು ಅಕೇಲ್ ಹೊಸೈನ್

ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ಲೈವ್ ಸ್ಕೋರ್

{cricket_2-2021_51701}

ಇನ್ನು ಆಸ್ಟ್ರೇಲಿಯ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳಿಗೂ ಸಹ ಇಂದು ನಡೆಯುತ್ತಿರುವ ಪಂದ್ಯ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಕೊನೆಯ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯ ಜಯ ಗಳಿಸಿದರೆ ಸೆಮಿಫೈನಲ್ ಪ್ರವೇಶಿಸುವ ಸಾಧ್ಯತೆ ಜೀವಂತವಾಗಿ ಉಳಿದುಕೊಳ್ಳಲಿದೆ. ಒಂದುವೇಳೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ ಅಂಕಪಟ್ಟಿಯಲ್ಲಿ ತನ್ನಷ್ಟೇ ಅಂಕವನ್ನು ಹೊಂದಿರುವ ಮತ್ತೊಂದು ತಂಡವಾದ ಸೌತ್ ಆಫ್ರಿಕಾದ ಮುಂದಿನ ಪಂದ್ಯದ ಫಲಿತಾಂಶಕ್ಕಾಗಿ ಆಸ್ಟ್ರೇಲಿಯಾ ಕಾಯಬೇಕಾಗುತ್ತದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತು ಸೌತ್ ಆಫ್ರಿಕಾ ತನ್ನ ಮುಂದಿನ ಪಂದ್ಯದಲ್ಲಿ ಜಯ ಗಳಿಸಿದರೆ ಸೌತ್ ಆಫ್ರಿಕಾ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದ್ದು ಆಸ್ಟ್ರೇಲಿಯಾ ಟೂರ್ನಿಯಿಂದ ಹೊರ ಬೀಳಲಿದೆ. ಅಥವಾ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋತರೆ ಆಸ್ಟ್ರೇಲಿಯ ತಂಡ ನೇರವಾಗಿ ಸೆಮಿಫೈನಲ್ ಪ್ರವೇಶಿಸಿ ಸೌತ್ ಆಫ್ರಿಕಾ ಟೂರ್ನಿಯಿಂದ ಹೊರ ಬೀಳಲಿದೆ.

ಒಂದುವೇಳೆ ವೆಸ್ಟ್ ಇಂಡೀಸ್ ವಿರುದ್ಧದ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತು, ದಕ್ಷಿಣ ಆಫ್ರಿಕಾ ತಂಡ ತನ್ನ ಮುಂದಿನ ಪಂದ್ಯದಲ್ಲಿ ಸೋತರೆ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಲ್ಲಿ ಯಾವ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುತ್ತದೆಯೋ ಆ ತಂಡ ಸೆಮಿಫೈನಲ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳಲಿದೆ. ಹೀಗೆ ಸೂಪರ್ 12 ಹಂತದ ಗ್ರೂಪ್ 1ರಲ್ಲಿ ಸೆಮಿಫೈನಲ್ ಪ್ರವೇಶಿಸಲು ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ದೊಡ್ಡ ಮಟ್ಟದ ಪೈಪೋಟಿ ಏರ್ಪಟ್ಟಿರುವ ಕಾರಣ ಆಸ್ಟ್ರೇಲಿಯಾಗೆ ಇಂದಿನ ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಪಂದ್ಯ ಭಾರಿ ಮಹತ್ವದ್ದಾಗಿದೆ. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದೊಡ್ಡ ಮಟ್ಟದ ಅಂತರದಲ್ಲಿ ಗೆಲ್ಲುವುದರ ಮೂಲಕ ಉತ್ತಮ ನೆಟ್ ರನ್ ರೇಟ್ ಗಳಿಸಬೇಕಾದ ಅನಿವಾರ್ಯತೆಯಿದೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಇದುವರೆಗೂ 4 ಪಂದ್ಯಗಳನ್ನಾಡಿದ್ದು 3 ಪಂದ್ಯಗಳಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋತಿದೆ. ಇನ್ನೊಂದೆಡೆ ಹಾಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ಸ್ ಎನಿಸಿಕೊಂಡಿರುವ ವೆಸ್ಟ್ ಇಂಡೀಸ್ ತಂಡ ಕೂಡಾ ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿ ಉಳಿದ 3 ಪಂದ್ಯಗಳಲ್ಲಿಯೂ ಹೀನಾಯವಾಗಿ ಸೋತಿದೆ. ಈ ಮೂಲಕ ವೆಸ್ಟ್ ಇಂಡೀಸ್ ತಂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸುವ ಅರ್ಹತೆಯನ್ನು ಈಗಾಗಲೇ ಕಳೆದುಕೊಂಡಿದ್ದು ಇಂದಿನ ಪಂದ್ಯದ ಫಲಿತಾಂಶ ವೆಸ್ಟ್ ಇಂಡೀಸ್ ತಂಡದ ಮೇಲೆ ಯಾವುದೇ ರೀತಿಯ ಪರಿಣಾಮವನ್ನು ಬೀರುವುದಿಲ್ಲ.

Story first published: Saturday, November 6, 2021, 15:42 [IST]
Other articles published on Nov 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+