ಟಿ20 ವಿಶ್ವಕಪ್, 4ನೇ ಪಂದ್ಯ: ಶ್ರೀಲಂಕಾ vs ನಮೀಬಿಯಾ, ಟಾಸ್ ವರದಿ, ಲೈವ್ ಸ್ಕೋರ್

ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗಿದ್ದು, ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಅರ್ಹತಾ ಸುತ್ತಿನ ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ಮತ್ತು ನಮೀಬಿಯಾ ತಂಡಗಳು ಸೆಣಸಾಡುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ಇನ್ನು ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದೇ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ಅರ್ಹತಾ ಸುತ್ತಿನ ಮೂರನೇ ಪಂದ್ಯದಲ್ಲಿ ಐರ್ಲೆಂಡ್ ಮತ್ತು ನೆದರ್ಲೆಂಡ್ಸ್ ತಂಡಗಳು ಸೆಣಸಾಡಿದ್ದು, ಐರ್ಲೆಂಡ್ ತಂಡ 7 ವಿಕೆಟ್‍ಗಳ ಜಯವನ್ನು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಇನ್ನು ಇತ್ತೀಚೆಗಷ್ಟೇ ಮುಕ್ತಾಯವಾದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯಗಳು ಕೂಡ ಈ ಶೈಕ್ ಜಾಯೇದ್ ಮೈದಾನದಲ್ಲಿ ನಡೆದಿದೆ. ಹೀಗಾಗಿ ಈ ಪಿಚ್ ಸವಾಲಿನಿಂದ ಕೂಡಿದ್ದು 150ಕ್ಕಿಂತ ಹೆಚ್ಚಿನ ರನ್ ಗಳಿಸಿದರೆ ಎದುರಾಳಿಗೆ ಬೆನ್ನಟ್ಟಲು ಕಠಿಣವೆನಿಸಲಿದೆ.

ಶ್ರೀಲಂಕಾ ಪ್ಲೇಯಿಂಗ್ XI: ಕುಸಲ್ ಪೆರೇರಾ (ವಿಕೆಟ್ ಕೀಪರ್‌), ಪಾತುಮ್ ನಿಸ್ಸಂಕ, ದಿನೇಶ್ ಚಾಂಡಿಮಾಲ್, ಅವಿಷ್ಕಾ ಫೆರ್ನಾಂಡೊ, ಭಾನುಕಾ ರಾಜಪಕ್ಸೆ, ದಾಸುನ್ ಶನಕ (ನಾಯಕ), ಚಾಮಿಕ ಕರುಣರತ್ನೆ, ವಾನಿಂದು ಹಸರಂಗ, ದುಷ್ಮಂತ ಚಮೀರಾ, ಮಹೀಶ್ ತೀಕ್ಷ್ಣ, ಲಹಿರು ಕುಮಾರ

ನಮೀಬಿಯಾ ಪ್ಲೇಯಿಂಗ್ XI: ಸ್ಟೀಫನ್ ಬಾರ್ಡ್, ಜೇನ್ ಗ್ರೀನ್ (ವಿಕೆಟ್ ಕೀಪರ್), ಕ್ರೇಗ್ ವಿಲಿಯಮ್ಸ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಡೇವಿಡ್ ವೈಸ್, ಜೆಜೆ ಸ್ಮಿತ್, ಜಾನ್ ಫ್ರೈಲಿಂಕ್, ಪಿಕ್ಕಿ ಯಾ ಫ್ರಾನ್ಸ್, ಜಾನ್ ನಿಕೋಲ್ ಲೋಫ್ಟಿ-ಈಟನ್, ರುಬೆನ್ ಟ್ರಂಪಲ್‌ಮನ್, ಬರ್ನಾರ್ಡ್ ಸ್ಕಾಲ್ಟ್ಜ್

ಶ್ರೀಲಂಕಾ vs ನಮೀಬಿಯಾ ಲೈವ್ ಸ್ಕೋರ್:

ಶ್ರೇಯಸ್ ಐಯರ್ ನ ಬಿಟ್ಟು ಈತನನ್ನು ನಂಬಿದಕ್ಕೆ ಕೊಹ್ಲಿಗೆ ಮುಖಭಂಗ | Oneindia Kannada
1
51667

For Quick Alerts
ALLOW NOTIFICATIONS
For Daily Alerts
Story first published: Monday, October 18, 2021, 19:16 [IST]
Other articles published on Oct 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X