ಟಿ20 ವಿಶ್ವಕಪ್: ಆಸ್ಟ್ರೇಲಿಯಾ vs ಸೌತ್ಆಫ್ರಿಕಾ ಪಂದ್ಯದಲ್ಲಿ ಗೆಲ್ಲುವವರಾರು? ಬಲಿಷ್ಠರು ಯಾರು ಗೊತ್ತಾ?

ಕಳೆದ ಭಾನುವಾರದಿಂದ ( ಅಕ್ಟೋಬರ್ 17 ) ಆರಂಭವಾಗಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತು ಮುಕ್ತಾಯವಾಗಿದ್ದು ಇಂದಿನಿಂದ ( ಅಕ್ಟೋಬರ್ 23 ) ಸೂಪರ್ 12 ಹಂತದ ಪಂದ್ಯಗಳು ಆರಂಭವಾಗುತ್ತಿವೆ.
ಸೂಪರ್ 12 ಸುತ್ತಿನ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ಪಂದ್ಯ ಅಬುಧಾಬಿಯ ಶೈಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಸೂಪರ್ 12 ಹಂತದ ಗ್ರೂಪ್ 1ನ ಭಾಗವಾಗಿರುವ ಈ ಎರಡೂ ತಂಡಗಳು ಸಹ ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತಲಾ 2 ಅಭ್ಯಾಸ ಪಂದ್ಯಗಳನ್ನಾಡಿವೆ. ಈ ಅಭ್ಯಾಸ ಪಂದ್ಯಗಳ ಪೈಕಿ ಸೌತ್ ಆಫ್ರಿಕಾ ಎಲ್ಲಾ 2 ಅಭ್ಯಾಸ ಪಂದ್ಯಗಳಲ್ಲಿಯೂ ಜಯ ಸಾಧಿಸಿದ್ದರೆ, ಆಸ್ಟ್ರೇಲಿಯಾ ತಂಡ ಒಂದು ಅಭ್ಯಾಸ ಪಂದ್ಯದಲ್ಲಿ ಗೆದ್ದು ಮತ್ತೊಂದರಲ್ಲಿ ಸೋಲುಂಡಿದೆ.
ಹೌದು, ಸೌತ್ ಆಫ್ರಿಕಾ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ವಿರುದ್ಧ ನಡೆದ ಅಭ್ಯಾಸ ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಆಸ್ಟ್ರೇಲಿಯಾ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿತು ಹಾಗೂ ದ್ವಿತೀಯ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಸೋಲುಂಡಿತು. ಹೀಗೆ ಅಭ್ಯಾಸ ಪಂದ್ಯಗಳನ್ನು ಮುಗಿಸಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ತಯಾರಿರುವ ಈ ಎರಡೂ ತಂಡಗಳ ನಡುವಿನ ಹಣಾಹಣಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯ ಗೆದ್ದಿದೆ ಮತ್ತು ಇಂದಿನ ಪಂದ್ಯದ ಪಿಚ್ ರಿಪೋರ್ಟ್ ಹಾಗೂ ಸಂಭಾವ್ಯ ಆಡುವ ಬಳಗ ಹೇಗಿರಲಿದೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ.

ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಮುಖಾಮುಖಿಯ ವಿವರ
ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಖಾಮುಖಿ ಮತ್ತು ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಎಷ್ಟು ಪಂದ್ಯಗಳನ್ನಾಡಿವೆ ಮತ್ತು ಯಾವ ತಂಡ ಹೆಚ್ಚು ಪಂದ್ಯ ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಇದುವರೆಗೂ ಒಟ್ಟು 18 ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಟ ನಡೆಸಿದ್ದು ಆಸ್ಟ್ರೇಲಿಯಾ 11 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಸೌತ್ ಆಫ್ರಿಕಾ ಕೇವಲ 7 ಪಂದ್ಯಗಳಲ್ಲಿ ಜಯ ಗಳಿಸಿದೆ. ಇನ್ನು ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಒಂದು ಟಿ ಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದ್ದು ಈ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಹಾಗೂ ಕಳೆದ 5 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಆಸ್ಟ್ರೇಲಿಯಾ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಸೌತ್ ಆಫ್ರಿಕಾ 2 ಪಂದ್ಯಗಳಲ್ಲಿ ಗೆದ್ದಿದೆ. ಹೀಗೆ ಟಿ ಟ್ವೆಂಟಿ ಮುಖಾಮುಖಿಯಲ್ಲಿ ಸೌತ್ ಆಫ್ರಿಕಾ ತಂಡಕ್ಕಿಂತ ಆಸ್ಟ್ರೇಲಿಯಾ ತಂಡ ಬಲಿಷ್ಠವಾಗಿದ್ದು ಪಂದ್ಯ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.

ಪಂದ್ಯದ ಪಿಚ್ ರಿಪೋರ್ಟ್ ಮತ್ತು ಹವಾಮಾನ ವರದಿ
ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಿನ ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಮಧ್ಯಾಹ್ನದ ವೇಳೆ ನಡೆಯಲಿದೆ. ಹವಾಮಾನ ವರದಿಯ ಪ್ರಕಾರ ಈ ಪಂದ್ಯಕ್ಕೆ ಯಾವುದೇ ರೀತಿಯ ಮಳೆ ಅಡ್ಡಿ ಆಗುವುದಿಲ್ಲ ಎನ್ನಲಾಗುತ್ತಿದೆ.
ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಟೂರ್ನಿಯ ಅಂತಿಮ ಪಂದ್ಯವನ್ನಾಡಿದ ಶ್ರೀಲಂಕಾ 171 ರನ್ ಬಾರಿಸಿದೆ. ಇನ್ನು ಈ ಪಿಚ್ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಅನುಕೂಲವಾಗಿದ್ದು, ಮೊದಲು ಬ್ಯಾಟಿಂಗ್ ಮಾಡುವ ತಂಡ ಗಳಿಸುವ ಸರಾಸರಿ ರನ್ 140 ಮತ್ತು ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಮಾಡುವ ತಂಡ 128ರ ಆಸುಪಾಸು ರನ್ ಗಳಿಸುವ ಸಾಧ್ಯತೆ ಹೆಚ್ಚಿದೆ.

ಆಡುವ ಸಂಭಾವ್ಯ ಬಳಗಗಳು
ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳ ನಡುವಿನ ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಎರಡೂ ತಂಡಗಳ ಸಂಭಾವ್ಯ ಆಡುವ ಬಳಗಗಳು ಹೀಗಿವೆ.
ಆಸ್ಟ್ರೇಲಿಯ ಸಂಭಾವ್ಯ ತಂಡ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಷ್ಟನ್ ಅಗರ್/ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಾಂಪಾ, ಜೋಶ್ ಹೇಜಲ್‌ವುಡ್
ಸೌತ್ ಆಫ್ರಿಕಾ ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ, ಲುಂಗಿ ಎನ್‌ಗಿಡಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications