ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

'ಬೇಕಂತಲೇ ಬಾಬರ್‌ಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿಲ್ಲ'; ದೊಡ್ಡ ಮಟ್ಟದಲ್ಲಿ ಕೇಳಿ ಬಂದ ಕೂಗು!

T20 World Cup 2021: Netizens slam ICC for not naming Babar Azam as the Player of the Tournament

ಕಳೆದೊಂದು ತಿಂಗಳಿನಿಂದ ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಗೆ ಕಾರಣವಾಗಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನವೆಂಬರ್‌ 14ರ ಭಾನುವಾರದಂದು ನಡೆದ ಫೈನಲ್ ಪಂದ್ಯದ ಮೂಲಕ ಅಂತ್ಯಗೊಂಡಿದೆ. ಇನ್ನು ಈ ಬಾರಿಯ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಿದವು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ 8 ವಿಕೆಟ್‍ಗಳ ಅಮೋಘ ಜಯವನ್ನು ಸಾಧಿಸುವುದರ ಮೂಲಕ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಟಿ20 ವಿಶ್ವಕಪ್ 2021 ಫೈನಲ್‌: ನ್ಯೂಜಿಲೆಂಡ್‌ ಸೋಲಿಸಲು ಸಿಎಸ್‌ಕೆಯ ಈ ತಂತ್ರವೇ ಕಾರಣ ಎಂದ ಫಿಂಚ್!ಟಿ20 ವಿಶ್ವಕಪ್ 2021 ಫೈನಲ್‌: ನ್ಯೂಜಿಲೆಂಡ್‌ ಸೋಲಿಸಲು ಸಿಎಸ್‌ಕೆಯ ಈ ತಂತ್ರವೇ ಕಾರಣ ಎಂದ ಫಿಂಚ್!

ಇನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಇನ್ನು ನ್ಯೂಜಿಲೆಂಡ್ ತಂಡ ನೀಡಿದ 173 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 38 ಎಸೆತಗಳಲ್ಲಿ 53 ರನ್ ಬಾರಿಸುವುದರ ಮೂಲಕ ಮತ್ತೊಮ್ಮೆ ಟೂರ್ನಿಯಲ್ಲಿ ಮಿಂಚು ಹರಿಸಿದರು. ನಂತರ ಮಿಚೆಲ್ ಮಾರ್ಷ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಅಜೇಯ ಆಟದ ನೆರವಿನಿಂದ ಆಸ್ಟ್ರೇಲಿಯಾ ತಂಡ 18.5 ಓವರ್‌ಗಳಲ್ಲಿಯೇ ಗೆಲುವಿನ ಕೇಕೆ ಹಾಕಿತು. ಇನ್ನು ಈ ಪಂದ್ಯದಲ್ಲಿ ಅಬ್ಬರಿಸಿದ ಮಿಚೆಲ್ ಮಾರ್ಷ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಡೇವಿಡ್ ವಾರ್ನರ್ ಸರಣಿಯಲ್ಲಿ ನೀಡಿದ ಅತ್ಯುತ್ತಮ ಪ್ರದರ್ಶನಕ್ಕಾಗಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು.

ಟೂರ್ನಿಯಲ್ಲಿ ಇದುವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 289 ರನ್ ಕಲೆಹಾಕಿದ್ದಾರೆ. ಅತ್ತ 6 ಪಂದ್ಯಗಳನ್ನಾಡಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ 303 ರನ್ ಗಳಿಸಿದ್ದಾರೆ. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಬಾಬರ್ ಅಜಮ್ ಪ್ರಥಮ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯದ ಡೇವಿಡ್ ವಾರ್ನರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೀಗಿರುವಾಗ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದ ಬಾಬರ್ ಅಜಮ್ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡುವುದನ್ನು ಬಿಟ್ಟು ದ್ವಿತೀಯ ಸ್ಥಾನ ಪಡೆದುಕೊಂಡಿರುವ ಡೇವಿಡ್ ವಾರ್ನರ್ ಅವರಿಗೆ ನೀಡಿದ್ದರ ಕುರಿತು ಸಾಕಷ್ಟು ದೊಡ್ಡ ಮಟ್ಟದಲ್ಲಿ ವಿರೋಧ ಕೇಳಿಬಂದಿದೆ.

ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಪ್ರಕಟಿಸಿದ ಐಸಿಸಿ; ಭಾರತೀಯರೇ ಇಲ್ಲ!ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಪ್ರಕಟಿಸಿದ ಐಸಿಸಿ; ಭಾರತೀಯರೇ ಇಲ್ಲ!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಕೂಡ ಬಾಬರ್ ಅಜಮ್ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡದೆ ಇರುವುದರ ಕುರಿತು ಅನ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹೀಗೆ ಮಾಜಿ ಕ್ರಿಕೆಟಿಗರು ಮಾತ್ರವಲ್ಲದೇ ಪಾಕಿಸ್ತಾನದ ಹಲವಾರು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಐಸಿಸಿ ವಿರುದ್ಧ ಈ ಕೆಳಕಂಡಂತೆ ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಸರಣಿಯಲ್ಲಿ ಬಾಬರ್ ಅಜಮ್, ಡೇವಿಡ್ ವಾರ್ನರ್ ಅವರಿಗಿಂತ ಅತಿ ಹೆಚ್ಚಿನ ರನ್ ಗಳಿಸಿದ್ದಾರೆ ಹೀಗಿದ್ದರೂ ಡೇವಿಡ್ ವಾರ್ನರ್ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿ ಬಾಬರ್ ಅಜಮ್ ಅವರಿಗೆ ನೀಡದೇ ಇರುವುದು ಐಸಿಸಿ ಡೇವಿಡ್ ವಾರ್ನರ್ ವಿರುದ್ಧ ಬೇಕಂತಲೇ ಹಗೆ ಸಾಧಿಸುತ್ತಿರುವುದನ್ನು ಬಿಂಬಿಸುತ್ತದೆ ಎಂದು ನೆಟ್ಟಿಗನೋರ್ವ ಟ್ವೀಟ್ ಮಾಡಿದ್ದಾನೆ.

ಮತ್ತೋರ್ವ ನೆಟ್ಟಿಗ ಈ ಕುರಿತಾಗಿ ಟ್ವೀಟ್ ಮಾಡಿದ್ದು ಐಸಿಸಿಯನ್ನು ಉಲ್ಲೇಖಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಕುರಿತು ಐಸಿಸಿ ತೆಗೆದುಕೊಂಡಿರುವ ನಿರ್ಧಾರವನ್ನು ನಾಚಿಕೆಗೇಡು ಎಂದಿದ್ದಾನೆ. ಅಷ್ಟೆ ಅಲ್ಲದೆ ಟೂರ್ನಿಯ ನಿಜವಾದ ಸರಣಿಶ್ರೇಷ್ಠ ಎಂದರೆ ಅದು ಬಾಬರ್ ಅಜಮ್ ಎಂದು ಟ್ವೀಟ್ ಮಾಡಿದ್ದಾನೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಬಾಬರ್ ಅಜಮ್ ಅವರಿಗೆ ಸರಣಿಶ್ರೇಷ್ಠ ನೀಡದೇ ಇರುವುದರ ಕುರಿತು ಮತ್ತೋರ್ವ ನೆಟ್ಟಿಗ ಟ್ವೀಟ್ ಮಾಡಿದ್ದು 4 ಅರ್ಧಶತಕ ಸಹಿತ 303 ಬಾರಿಸಿರುವ ಬಾಬರ್ ಅಜಮ್ ಬದಲು 3 ಅರ್ಧಶತಕ ಸಹಿತ 289 ರನ್ ಕಲೆಹಾಕಿರುವ ಡೇವಿಡ್ ವಾರ್ನರ್ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ನೀಡಿರುವುದು ಐಸಿಸಿಯ ರಾಜತಾಂತ್ರಿಕತೆಯಾಗಿದೆ ಎಂದು ಬರೆದುಕೊಂಡಿದ್ದಾನೆ.

David Warner ಅವರು RCB ಸೇರಿಕೊಂಡರೆ RCBಗೆ ಲಾಭ | Oneindia Kannada

Story first published: Tuesday, November 16, 2021, 10:19 [IST]
Other articles published on Nov 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X