ಟಿ20 ವಿಶ್ವಕಪ್: ಒಂದು ದಿನ ಮುಂಚೆಯೇ ಭಾರತ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ!

ಕಳೆದ ಭಾನುವಾರ ( ಅಕ್ಟೋಬರ್ 17 ) ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಚಾಲನೆ ಪಡೆದುಕೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಇಂದಿನಿಂದ ( ಅಕ್ಟೋಬರ್ 23 ) ಆರಂಭಗೊಂಡಿವೆ. ಇನ್ನು ಸೂಪರ್ 12 ಸುತ್ತಿನ ಮೊದಲನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಟ ನಡೆಸುತ್ತಿದ್ದು, ಇದೇ ದಿನ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೆಣಸಾಡಲಿವೆ.
ಹೀಗೆ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದ್ದರೂ ಸಹ ಬಹುತೇಕ ಕ್ರಿಕೆಟ್ ಅಭಿಮಾನಿಗಳ ಚಿತ್ತ ಈ ಹಂತದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಮೇಲಿದೆ. ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಸೂಪರ್ 12 ಹಂತದಲ್ಲಿ ಪಂದ್ಯ ಆಯೋಜನೆಯಾಗಿದ್ದು ಅಕ್ಟೋಬರ್ 24ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭವಾಗಲಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ಆರಂಭವಾಗುವ ಮುನ್ನ ಈ ಎರಡೂ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳಲ್ಲಿ ಪಾಲ್ಗೊಂಡಿದ್ದವು. ಭಾರತ ಬಲಿಷ್ಠ ತಂಡಗಳಾದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳನ್ನಾಡಿದ್ದು ಈ ಎರಡೂ ಪಂದ್ಯಗಳಲ್ಲಿಯೂ ಸಹ ಭರ್ಜರಿ ಜಯ ಸಾಧಿಸಿದೆ. ಅತ್ತ ಪಾಕಿಸ್ತಾನ ತಂಡ ಹಾಲಿ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ತಂಡಗಳ ವಿರುದ್ಧ ನಡೆದ ಅಭ್ಯಾಸ ಪಂದ್ಯಗಳಲ್ಲಿ ಸೆಣಸಾಟ ನಡೆಸಿತು. ಪಾಕಿಸ್ತಾನ ತಂಡ ತನ್ನ ಮೊದಲನೇ ಅಭ್ಯಾಸ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ನಂತರ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 186 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿದರೂ ಸಹ ಸೋಲುಂಡಿತು. ಹೀಗೆ ಅಭ್ಯಾಸ ಪಂದ್ಯಗಳಲ್ಲಿ ಭಾರತ ತಂಡದಷ್ಟು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ ಪಾಕಿಸ್ತಾನ ಇದೀಗ ಒಂದು ದಿನ ಮುಂಚಿತವಾಗಿಯೇ ಟೀಮ್ ಇಂಡಿಯಾ ವಿರುದ್ಧದ ಪಂದ್ಯಕ್ಕೆ 12 ಆಟಗಾರರ ತನ್ನ ತಂಡವನ್ನು ಪ್ರಕಟಿಸಿದೆ. ಹೀಗೆ ಪ್ರಕಟವಾಗಿರುವ ಪಾಕಿಸ್ತಾನ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಭಾರತ ವಿರುದ್ಧದ ಪಂದ್ಯಕ್ಕೆ ಪ್ರಕಟವಾಗಿರುವ ಪಾಕಿಸ್ತಾನ ತಂಡ
ಅಕ್ಟೋಬರ್ 24ರ ಭಾನುವಾರದಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಕ್ಕೆ ಪ್ರಕಟವಾಗಿರುವ ಪಾಕಿಸ್ತಾನದ 12 ಆಟಗಾರರ ತಂಡ ಈ ಕೆಳಕಂಡಂತಿದೆ.
ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಹೈದರ್ ಅಲಿ, ಇಮಾದ್ ವಾಸಿಂ, ಶಾದಬ್ ಖಾನ್, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಹಾರಿಸ್ ರೌಫ್

ಪಂದ್ಯಕ್ಕೂ ಮುನ್ನ ವಿಶ್ವಾಸ ವ್ಯಕ್ತಪಡಿಸಿದ್ದ ಪಾಕ್ ನಾಯಕ
ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯದ ಕುರಿತು ಕೆಲ ದಿನಗಳ ಹಿಂದೆಯೇ ಪ್ರತಿಕ್ರಿಯೆಯನ್ನು ನೀಡಿದ್ದ ಬಾಬರ್ ಅಜಮ್ ಯು ಎ ಇ ಕ್ರೀಡಾಂಗಣಗಳಲ್ಲಿ ಪಾಕಿಸ್ತಾನ ತಂಡದ ಆಟಗಾರರಿಗೆ ಅನೇಕ ಪಂದ್ಯಗಳನ್ನು ಆಡಿ ಅನುಭವವಿರುವ ಕಾರಣ ಈ ಬಾರಿ ತಮ್ಮ ತಂಡ ಉತ್ತಮ ಪ್ರದರ್ಶನವನ್ನು ನೀಡಲಿದೆ ಎಂಬ ವಿಶ್ವಾಸವನ್ನು ಬಾಬರ್ ಅಜಮ್ ವ್ಯಕ್ತಪಡಿಸಿದ್ದರು.

ಭಾರತ vs ಪಾಕ್ ವಿಶ್ವಕಪ್ ಮುಖಾಮುಖಿ
ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇದುವರೆಗೂ ಒಟ್ಟು 7 ಏಕದಿನ ವಿಶ್ವಕಪ್ ಪಂದ್ಯಗಳು ನಡೆದಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಭಾರತ ತಂಡ ಜಯ ಸಾಧಿಸಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇದುವರೆಗೂ ಒಟ್ಟು 5 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳು ನಡೆದಿದ್ದು ಭಾರತ ತಂಡ 4 ಪಂದ್ಯಗಳಲ್ಲಿ ಜಯ ಗಳಿಸಿದೆ ಹಾಗೂ ಒಂದು ಪಂದ್ಯ ಟೈ ಆಗಿದೆ. ಆದರೆ ಪಾಕಿಸ್ತಾನ ಮಾತ್ರ ಯಾವುದೇ ಪಂದ್ಯದಲ್ಲಿಯೂ ಕೂಡ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications