ಟಿ20 ವಿಶ್ವಕಪ್: ಭಾರತದ ವಿರುದ್ಧ ಪಾಕಿಸ್ತಾನ ಗೆಲ್ಲುವ ಸಾಧ್ಯತೆ ಹೆಚ್ಚಿದೆ; ಕಾರಣ ಬಿಚ್ಚಿಟ್ಟ ಸೆಹ್ವಾಗ್!

ಕಳೆದ ಭಾನುವಾರದಿಂದ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಚಾಲನೆ ಪಡೆದುಕೊಂಡಿದೆ. ಒಂದೆಡೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ವಿವಿಧ ತಂಡಗಳ ಅಭ್ಯಾಸ ಪಂದ್ಯಗಳು ಕೂಡ ನಡೆಯುತ್ತಿವೆ. ಇನ್ನು ಈ ಪ್ರತಿಷ್ಠಿತ ಟೂರ್ನಿಯ ಸೂಪರ್ 12 ಹಂತ ಅಕ್ಟೋಬರ್ 23ರ ಶನಿವಾರದಿಂದ ಆರಂಭವಾಗಲಿದೆ.

ದುಬೈನಲ್ಲಿ ರಾರಾಜಿಸುತ್ತಿದೆ ವಿರಾಟ್ ಕೊಹ್ಲಿ ಮೇಣದ ಪ್ರತಿಮೆದುಬೈನಲ್ಲಿ ರಾರಾಜಿಸುತ್ತಿದೆ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ

ಟೀಮ್ ಇಂಡಿಯಾ ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲನೇ ಪಂದ್ಯವನ್ನು ಅಕ್ಟೋಬರ್ 24ರ ಭಾನುವಾರದಂದು ಆಡಲಿದ್ದು ಈ ಪಂದ್ಯದಲ್ಲಿ ತನ್ನ ಬದ್ಧ ಎದುರಾಳಿಯಾದ ಪಾಕಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸಾಮಾನ್ಯ ಪಂದ್ಯಗಳೆಂದರೆ ದೊಡ್ಡ ಮಟ್ಟದ ಚರ್ಚೆ ಮತ್ತು ಕುತೂಹಲಗಳು ಹುಟ್ಟಿಕೊಳ್ಳುತ್ತವೆ. ಹೀಗಿರುವಾಗ ವಿಶ್ವಕಪ್ ಟೂರ್ನಿಯ ಪಂದ್ಯಗಳಲ್ಲಿ ಈ ಎರಡೂ ತಂಡಗಳು ಸೆಣಸಾಡಲಿವೆ ಎಂದರೆ ದೊಡ್ಡ ಮಟ್ಟದ ಕ್ರೇಜ್ ಹುಟ್ಟುವುದು ಸಾಮಾನ್ಯ. ಇನ್ನು ವಿಶ್ವಕಪ್ ಇತಿಹಾಸದಲ್ಲಿ ಇದುವರೆಗೂ ಯಾವುದೇ ಪಂದ್ಯದಲ್ಲಿಯೂ ಸಹ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ವಿರುದ್ಧ ಗೆಲ್ಲಲು ಆಗಿಲ್ಲ. ಏಕದಿನ ವಿಶ್ವಕಪ್ ಪಂದ್ಯಗಳಲ್ಲಾಗಲಿ ಅಥವಾ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಾಗಲಿ ಪಾಕಿಸ್ತಾನ ಭಾರತ ವಿರುದ್ಧ ಗೆಲುವನ್ನು ಸಾಧಿಸಿಲ್ಲ.

ಟಿ20 ವಿಶ್ವಕಪ್: ರಾಹುಲ್, ಇಶಾನ್ ಕಿಶನ್ ಅಬ್ಬರ; ಅಭ್ಯಾಸ ಪಂದ್ಯದಲ್ಲಿ ಆಂಗ್ಲರಿಗೆ ಸೋಲುಣಿಸಿದ ಭಾರತಟಿ20 ವಿಶ್ವಕಪ್: ರಾಹುಲ್, ಇಶಾನ್ ಕಿಶನ್ ಅಬ್ಬರ; ಅಭ್ಯಾಸ ಪಂದ್ಯದಲ್ಲಿ ಆಂಗ್ಲರಿಗೆ ಸೋಲುಣಿಸಿದ ಭಾರತ

ಭಾರತ ಮತ್ತು ಪಾಕಿಸ್ತಾನ ತಂಡಗಳು ಇದುವರೆಗೂ ಒಟ್ಟು 7 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಎಲ್ಲಾ ಪಂದ್ಯಗಳನ್ನು ಪಾಕಿಸ್ತಾನ ಸೋತಿದೆ ಮತ್ತು 5 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಯಾವುದೇ ಪಂದ್ಯದಲ್ಲಿಯೂ ಪಾಕಿಸ್ತಾನ ಗೆದ್ದಿಲ್ಲ. ಹೀಗೆ ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಹಿಂದಿನಿಂದಲೂ ಪಾಕಿಸ್ತಾನದ ಮೇಲೆ ದೊಡ್ಡ ಮಟ್ಟದ ಹಿಡಿತವನ್ನು ಸಾಧಿಸುತ್ತಲೇ ಬಂದಿದೆ. ಈ ಕುರಿತಾಗಿ ಇದೀಗ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮಾತನಾಡಿದ್ದು ಪಾಕಿಸ್ತಾನ ತಂಡ ಯಾಕೆ ಯಾವಾಗಲೂ ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ವಿರುದ್ಧ ಸೋಲುತ್ತದೆ ಎಂಬುದನ್ನು ಬಿಚ್ಚಿಟ್ಟಿದ್ದಾರೆ ಹಾಗೂ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಯಾರಿಗೆ ಗೆಲುವಿನ ಸಾಧ್ಯತೆಗಳು ಹೆಚ್ಚಿವೆ ಎಂಬುದನ್ನು ಕೂಡ ತಿಳಿಸಿದ್ದಾರೆ. ಮುಂದೆ ಓದಿ..

ನಾವು ಪಾಕಿಸ್ತಾನದವರ ರೀತಿ ಪಂದ್ಯಕ್ಕೂ ಮುನ್ನ ದೊಡ್ಡ ಹೇಳಿಕೆಗಳನ್ನು ನೀಡುವುದಿಲ್ಲ

ನಾವು ಪಾಕಿಸ್ತಾನದವರ ರೀತಿ ಪಂದ್ಯಕ್ಕೂ ಮುನ್ನ ದೊಡ್ಡ ಹೇಳಿಕೆಗಳನ್ನು ನೀಡುವುದಿಲ್ಲ

"2011ರ ವಿಶ್ವಕಪ್ ಮತ್ತು 2003ರ ವಿಶ್ವಕಪ್ ಕುರಿತು ಮಾತನಾಡುವುದಾದರೆ ಆ ಪಂದ್ಯಗಳಲ್ಲಿ ಎದುರಾಳಿ ಪಾಕಿಸ್ತಾನ ತಂಡಕ್ಕಿಂತ ನಮ್ಮ ತಂಡ ಉತ್ತಮ ಸ್ಥಿತಿಯಲ್ಲಿತ್ತು. ಆದರೂ ನಾವು ಪಂದ್ಯಕ್ಕೂ ಮುನ್ನ ದೊಡ್ಡ ಹೇಳಿಕೆಗಳನ್ನು ನೀಡುವ ಬದಲು ಉತ್ತಮ ಆಟವನ್ನು ಆಡುತ್ತಿದ್ದೆವು. ಆದರೆ ಪಾಕಿಸ್ತಾನ ತಂಡದವರು ಪಂದ್ಯ ಆರಂಭವಾಗುವ ಮುನ್ನವೇ ಈ ಬಾರಿ ಇತಿಹಾಸವನ್ನು ಬದಲಾಯಿಸಲಿದ್ದೇವೆ ಎಂಬ ದೊಡ್ಡ ಹೇಳಿಕೆಗಳನ್ನು ನೀಡುವುದರ ಮೂಲಕ ಪ್ರತೀ ವಿಶ್ವಕಪ್ ಪಂದ್ಯದಲ್ಲಿಯೂ ಎಡವುತ್ತಿದ್ದಾರೆ. ಆ ರೀತಿಯ ಹೇಳಿಕೆಗಳನ್ನು ನೀಡುವ ಬದಲು ಪಂದ್ಯಕ್ಕೆ ಉತ್ತಮ ರೀತಿಯಲ್ಲಿ ತಯಾರಿಯನ್ನು ನಡೆಸಿಕೊಂಡು ಕಣಕ್ಕಿಳಿದರೆ ಮಾತ್ರ ಜಯ ಸಾಧ್ಯ" ಎಂದು ವಿರೇಂದ್ರ ಸೆಹ್ವಾಗ್ ಪಾಕಿಸ್ತಾನದ ಸಾಲು ಸಾಲು ವಿಶ್ವಕಪ್ ಸೋಲುಗಳ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಕಷ್ಟ, ಆದರೆ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನ ಭಾರತವನ್ನು ಸೋಲಿಸಬಹುದು

ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಕಷ್ಟ, ಆದರೆ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನ ಭಾರತವನ್ನು ಸೋಲಿಸಬಹುದು

"ಪಾಕಿಸ್ತಾನ ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಪಂದ್ಯದುದ್ದಕ್ಕೂ ಉತ್ತಮವಾಗಿ ಆಟವನ್ನು ಆಡುವುದರ ಮೂಲಕ ಟೀಮ್ ಇಂಡಿಯಾವನ್ನು ಸೋಲಿಸುವುದು ತೀರಾ ಕಷ್ಟದ ಕೆಲಸ. ಆದರೆ ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಪಾಕಿಸ್ತಾನ ತಂಡ ಟೀಮ್ ಇಂಡಿಯಾವನ್ನು ಸೋಲಿಸಲು ಯಾವಾಗಲೂ ಹೆಚ್ಚು ಅವಕಾಶಗಳನ್ನು ಹೊಂದಿರುತ್ತದೆ. ಈ ಟಿ ಟ್ವೆಂಟಿ ಪಂದ್ಯದಲ್ಲಿ ತಂಡದ ಓರ್ವ ಆಟಗಾರ ಎದುರಾಳಿ ತಂಡವನ್ನು ಸೋಲಿಸಿ ಬಿಡಬಹುದಾದಂತಹ ಪ್ರದರ್ಶನವನ್ನು ನೀಡಬಹುದು. ಆದರೆ ಪಾಕಿಸ್ತಾನ ಇದುವರೆಗೂ ಅಂತಹದ್ದನ್ನು ಮಾಡಲಾಗಿಲ್ಲ, ಈ ಬಾರಿಯ ಪಂದ್ಯದಲ್ಲಿ ಏನಾಗುತ್ತದೆಯೋ ಕಾದು ನೋಡೋಣ" ಎಂಬ ಹೇಳಿಕೆಯನ್ನು ವಿರೇಂದ್ರ ಸೆಹವಾಗ್ ನೀಡಿದ್ದಾರೆ. ಈ ಮೂಲಕ ಪಾಕಿಸ್ತಾನ ತಂಡ ಮುಂಬರಲಿರುವ ಪಂದ್ಯದಲ್ಲಿ ಭಾರತ ವಿರುದ್ಧ ಗೆಲ್ಲುವ ಅವಕಾಶಗಳನ್ನು ಹೊಂದಿದೆ ಎಂಬುದನ್ನು ವಿರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಮಾಹಿತಿ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್‌ನ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಮಾಹಿತಿ

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸೂಪರ್ 12 ಹಂತದ ಪಂದ್ಯ ಅಕ್ಟೋಬರ್ 24ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

For Quick Alerts
ALLOW NOTIFICATIONS
For Daily Alerts
Story first published: Tuesday, October 19, 2021, 18:59 [IST]
Other articles published on Oct 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X