ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಸತತ 4ನೇ ಗೆಲುವು ಕಂಡ ಪಾಕಿಸ್ತಾನ ಸೆಮಿಫೈನಲ್‌ಗೆ ಲಗ್ಗೆ

T20 World Cup 2021: Pakistan won against Namibia by 45 runs and qualified for semifinal

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡ ಅತ್ಯದ್ಭುತ ಪ್ರದರ್ಶನವನ್ನು ನೀಡುತ್ತಿದೆ. ಇಂದು ( ನವೆಂಬರ್‌ 2 ) ಅಬುಧಾಬಿಯ ಶೇಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯವೊಂದರಲ್ಲಿ ಪಾಕಿಸ್ತಾನ ತಂಡವು ನಮೀಬಿಯಾ ವಿರುದ್ಧ 45 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ತನ್ನ ನಾಲ್ಕನೇ ಗೆಲುವನ್ನು ಕಂಡಿದೆ.

'ಟೀಮ್ ಇಂಡಿಯಾ ಒಳಗೆ 2 ಗುಂಪುಗಳಿವೆ'; ತಂಡದ ಸೋಲಿನ ನಂತರ ಸಂಶಯ ಹೊರಹಾಕಿದ ಮಾಜಿ ಕ್ರಿಕೆಟಿಗ'ಟೀಮ್ ಇಂಡಿಯಾ ಒಳಗೆ 2 ಗುಂಪುಗಳಿವೆ'; ತಂಡದ ಸೋಲಿನ ನಂತರ ಸಂಶಯ ಹೊರಹಾಕಿದ ಮಾಜಿ ಕ್ರಿಕೆಟಿಗ

ಹೌದು, ಅಕ್ಟೋಬರ್ 24ರ ಭಾನುವಾರದಂದು ನಡೆದಿದ್ದ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾವನ್ನು ಸೋಲಿಸುವುದರ ಮೂಲಕ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭವನ್ನು ಮಾಡಿತ್ತು. ಅಷ್ಟೇ ಅಲ್ಲದೆ ವಿಶ್ವಕಪ್ ಟೂರ್ನಿಗಳ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ವಿರುದ್ಧ ಗೆದ್ದ ನೂತನ ಮೈಲಿಗಲ್ಲನ್ನು ಕೂಡ ಪಾಕಿಸ್ತಾನ ತಂಡ ನೆಟ್ಟಿತ್ತು. ನಂತರ ಅಕ್ಟೋಬರ್ 26ರ ಮಂಗಳವಾರದಂದು ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ಕೂಡ ಪಾಕಿಸ್ತಾನ ತಂಡ ಗೆಲುವನ್ನು ಸಾಧಿಸಿತ್ತು. ಹೀಗೆ ಭಾರತ ಮತ್ತು ನ್ಯೂಜಿಲೆಂಡ್ ರೀತಿಯ ಬಲಿಷ್ಠ ತಂಡಗಳನ್ನು ತನ್ನ ಮೊದಲೆರಡು ಪಂದ್ಯಗಳಲ್ಲಿ ಸೋಲಿಸಿದ ಪಾಕಿಸ್ತಾನ ಟೂರ್ನಿಯಲ್ಲಿನ ತನ್ನ ತೃತೀಯ ಪಂದ್ಯದಲ್ಲಿ ಅಕ್ಟೋಬರ್ 29ರ ಶುಕ್ರವಾರದಂದು ಅಫ್ಘಾನಿಸ್ತಾನಕ್ಕೆ ಸೋಲುಣಿಸಿತ್ತು. ಹೀಗೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪಾಕಿಸ್ತಾನ ಇದೀಗ ನಮೀಬಿಯಾ ವಿರುದ್ಧವೂ ಕೂಡ ಭರ್ಜರಿ ಜಯ ಸಾಧಿಸುವುದರ ಮೂಲಕ ಸೆಮಿಫೈನಲ್ ಹಂತಕ್ಕೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡಿದೆ. ಈ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ನಂತರ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶವನ್ನು ಪಡೆದುಕೊಂಡ ತಂಡ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನ ಪಾತ್ರವಾಗಿದೆ.

ಟಿ20 ವಿಶ್ವಕಪ್ ಮುಗಿದ ನಂತರ ಭಾರತ ಏಕದಿನ ತಂಡಕ್ಕೂ ಆಯ್ಕೆಯಾಗಲಿದ್ದಾರೆ ನೂತನ ನಾಯಕ!ಟಿ20 ವಿಶ್ವಕಪ್ ಮುಗಿದ ನಂತರ ಭಾರತ ಏಕದಿನ ತಂಡಕ್ಕೂ ಆಯ್ಕೆಯಾಗಲಿದ್ದಾರೆ ನೂತನ ನಾಯಕ!

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ ಒಟ್ಟು 4 ಪಂದ್ಯಗಳನ್ನಾಡಿರುವ ಪಾಕಿಸ್ತಾನ ಎಲ್ಲಾ ಪಂದ್ಯಗಳಲ್ಲಿಯೂ ಗೆಲುವನ್ನು ಸಾಧಿಸಿದ್ದು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 2ರಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡು ಸದ್ಯ ಸೆಮಿಫೈನಲ್ ಸುತ್ತಿಗೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡಿದೆ.

IPL ಆಡಿ ಆಡಿ ಆಟ ಹಾಳು ಮಾಡಿಕೊಂಡಿರುವ ಆಟಗಾರರು | Oneindia Kannada

Story first published: Wednesday, November 3, 2021, 10:17 [IST]
Other articles published on Nov 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X