ಟಿ20 ವಿಶ್ವಕಪ್‌ಗೆ ಅಫ್ಘಾನಿಸ್ತಾನ ತಂಡ ಪ್ರಕಟವಾದ ಬೆನ್ನಲ್ಲೇ ಮನನೊಂದ ರಶೀದ್ ಖಾನ್ ರಾಜೀನಾಮೆ!

ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಹಲವಾರು ವಿದ್ಯಮಾನಗಳು ವೇಗವಾಗಿ ಜರುಗುತ್ತಿದ್ದು ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಅಂತಿಮ ಘಟ್ಟವನ್ನು ತಲುಪಿ ಕುತೂಹಲವನ್ನು ಕೆರಳಿಸಿದೆ, ಮತ್ತೊಂದೆಡೆ ಇದೇ ಸೆಪ್ಟೆಂಬರ್ 19ರಿಂದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳು ಯುಎಇನಲ್ಲಿ ಆರಂಭವಾಗಲಿದ್ದು ಇದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಹಾಗೂ ಅಕ್ಟೋಬರ್ 17ರಿಂದ ಯುಎಇಯಲ್ಲಿ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು ವಿವಿಧ ದೇಶಗಳು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಮ್ಮ ತಂಡಗಳನ್ನು ಪ್ರಕಟಿಸಿವೆ.

ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಸಚಿನ್ ಮತ್ತು ಗಂಗೂಲಿ ರೀತಿಯ ಆಟಗಾರರಲ್ಲ: ಕಪಿಲ್ ದೇವ್ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಸಚಿನ್ ಮತ್ತು ಗಂಗೂಲಿ ರೀತಿಯ ಆಟಗಾರರಲ್ಲ: ಕಪಿಲ್ ದೇವ್

ಇತ್ತೀಚೆಗಷ್ಟೇ ಭಾರತ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿದ ನಂತರ ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರೀಡಾ ಪಂಡಿತರು ಈ ಕುರಿತಾಗಿ ಸಾಕಷ್ಟು ಚರ್ಚೆಗಳನ್ನು ನಡೆಸಿದ್ದರು. ಇದೀಗ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಕೂಡ ಮುಂಬರಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ 18 ಆಟಗಾರರ ತಂಡವನ್ನು ಪ್ರಕಟಿಸಿದ್ದು ಭಾರಿ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ.

ಹೌದು, ಸೆಪ್ಟೆಂಬರ್ 9ರ ಗುರುವಾರದಂದು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಅಕ್ಟೋಬರ್ 17ರಿಂದ ನವೆಂಬರ್‌ 14ರವರೆಗೆ ಯುಎಇಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ 18 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಣೆ ಮಾಡಿದೆ. ಹೀಗೆ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ನಾಯಕ ರಶೀದ್ ಖಾನ್ ಸೇರಿದಂತೆ 18 ಆಟಗಾರರ ತಂಡವನ್ನು ಘೋಷಣೆ ಮಾಡಿದ ಬೆನ್ನಲ್ಲೇ ನಾಯಕ ರಶೀದ್ ಖಾನ್ ತನ್ನ ನಾಯಕತ್ವದ ಸ್ಥಾನಕ್ಕೆ ರಾಜಿನಾಮೆಯನ್ನು ಘೋಷಿಸಿದ್ದು, ದಿಢೀರನೆ ರಾಜಿನಾಮೆ ಘೋಷಿಸುವುದಕ್ಕೆ ಕಾರಣವೇನೆಂಬುದನ್ನು ಕೂಡ ಬಿಚ್ಚಿಟ್ಟಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಗೆಲ್ಲಲು ಈ ಇಬ್ಬರು ಆಟಗಾರರು ಇರಲೇಬೇಕು: ಸುನಿಲ್ ಗವಾಸ್ಕರ್ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಗೆಲ್ಲಲು ಈ ಇಬ್ಬರು ಆಟಗಾರರು ಇರಲೇಬೇಕು: ಸುನಿಲ್ ಗವಾಸ್ಕರ್

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಅಫ್ಘಾನಿಸ್ತಾನ ತಂಡ ಪ್ರಕಟವಾದ ಬೆನ್ನಲ್ಲೇ ಅಫ್ಘಾನಿಸ್ತಾನ ತಂಡದ ರಶೀದ್ ಖಾನ್ ದಿಢೀರ್ ರಾಜಿನಾಮೆ ಘೋಷಿಸಲು ನೀಡಿರುವ ಕಾರಣ ಮುಂದೆ ಇದೆ ಓದಿ..

ರಶೀದ್ ಖಾನ್ ರಾಜೀನಾಮೆಗೆ ಕಾರಣವಿದು

ರಶೀದ್ ಖಾನ್ ರಾಜೀನಾಮೆಗೆ ಕಾರಣವಿದು

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ರಶೀದ್ ಖಾನ್ ಸೇರಿದಂತೆ ಒಟ್ಟು 18 ಆಟಗಾರರ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ರಶೀದ್ ಖಾನ್ ಮನನೊಂದು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ. "ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಅಫ್ಗಾನಿಸ್ತಾನ ಕ್ರಿಕೆಟ್ ತಂಡದ ನಾಯಕನಾದ ನನ್ನನ್ನು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಪರಿಗಣಿಸಬೇಕಿತ್ತು, ಆದರೆ ನನಗೆ ಯಾವುದೇ ಮಾಹಿತಿಯನ್ನು ನೀಡದೇ ಇಡೀ ತಂಡವನ್ನು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಆಯ್ಕೆ ಮಾಡಿ ಘೋಷಣೆ ಮಾಡಿದ್ದು ಮನಸ್ಸಿಗೆ ಬೇಸರ ತಂದಿದೆ. ಹೀಗಾಗಿ ನಾನು ಅಫ್ಘಾನಿಸ್ತಾನ ಟಿ ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ತಕ್ಷಣವೇ ಕೆಳಗಿಳಿಯುತ್ತಿದ್ದೇನೆ" ಎಂದು ಟ್ವೀಟ್ ಮಾಡುವ ಮೂಲಕ ರಶೀದ್ ಖಾನ್ ರಾಜೀನಾಮೆಯನ್ನು ಘೋಷಣೆ ಮಾಡಿದ್ದಾರೆ.

ಕಳೆದ ಜುಲೈ ತಿಂಗಳಿನಲ್ಲಿ ನಾಯಕನ ಪಟ್ಟಕ್ಕೇರಿದ್ದ ರಶೀದ್ ಖಾನ್

ಕಳೆದ ಜುಲೈ ತಿಂಗಳಿನಲ್ಲಿ ನಾಯಕನ ಪಟ್ಟಕ್ಕೇರಿದ್ದ ರಶೀದ್ ಖಾನ್

ಅಫ್ಘಾನಿಸ್ತಾನದ ಪ್ರತಿಭಾವಂತ ಆಟಗಾರ ರಶೀದ್ ಖಾನ್ ಇದೇ ವರ್ಷದ ಜುಲೈ ತಿಂಗಳಿನಲ್ಲಿ ಅಫ್ಘಾನಿಸ್ತಾನ ಟಿ ಟ್ವೆಂಟಿ ತಂಡದ ನಾಯಕನಾಗಿ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದರು. ಅಫ್ಘಾನಿಸ್ತಾನದ ನಾಯಕನಾಗುವಂತೆ ಆಫರ್ ಬಂದಾಗ ಹೆಚ್ಚಿನ ಒತ್ತಡಕ್ಕೆ ಒಳಗಾಗಲು ಇಚ್ಛಿಸದ ರಶೀದ್ ಖಾನ್ ನಾಯಕ ಪಟ್ಟವನ್ನು ಅಲಂಕರಿಸಲು ಹಿಂದೇಟು ಹಾಕಿದ್ದರು, ಆದರೆ ತದನಂತರ ಅಫ್ಘಾನಿಸ್ತಾನದ ನಾಯಕನಾಗಲು ರಶೀದ್ ಖಾನ್ ಗ್ರೀನ್ ಸಿಗ್ನಲ್ ನೀಡಿದ್ದರು. ಇದೀಗ ಅಫ್ಘಾನಿಸ್ತಾನದ ನಾಯಕನಾಗಿ ಆಯ್ಕೆಯಾಗಿ 3 ತಿಂಗಳು ಕಳೆಯುವಷ್ಟರಲ್ಲಿಯೇ ರಶೀದ್ ಖಾನ್ ನಾಯಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

Dhoni ಮಾರ್ಗದರ್ಶನದ ಬಗ್ಗೆ ಟೀಮ್ ಇಂಡಿಯಾ ನಾಯಕ Virat ಹೇಳೋದೇನು | Oneindia Kannada
ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿರುವ ಅಫ್ಘಾನಿಸ್ತಾನ ತಂಡ

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿರುವ ಅಫ್ಘಾನಿಸ್ತಾನ ತಂಡ

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಅಫ್ಘಾನಿಸ್ತಾನದ ತಂಡ ಹೀಗಿದೆ: ರಶೀದ್ ಖಾನ್, ರಹಮತುಲ್ಲಾ ಗುರ್ಬಾಜ್, ಹಜರತುಲ್ಲಾ ಜಾಜೈ, ಉಸ್ಮಾನ್ ಘನಿ, ಅಸ್ಘರ್ ಅಫ್ಘಾನ್, ಮೊಹಮ್ಮದ್ ನಬಿ, ನಜೀಬುಲ್ಲಾ ಜ಼ದ್ರಾನ್, ಹಷ್ಮತುಲ್ಲಾ ಶಾಹಿದಿ, ಮೊಹಮ್ಮದ್ ಶಹಜಾದ್, ಮುಜೀಬ್ ಉರ್ ರಹಮಾನ್, ಕರೀಂ ಜನತ್, ಗುಲ್ಬದಿನ್ ನಾಯ್ಬ್, ನವೀನ್ ಉಲ್ ಹಕ್, ಹಮೀದ್ ಹಸ್ದಾನ್, ಶರಾಫುದ್ದೀನ್ ಅಶ್ರಫ್, ದಾವ್ಲತ್ ಜದ್ರಾನ್, ಶಪೂರ್ ಜ಼ದ್ರಾನ್ ಮತ್ತು ಕೈಸ್ ಅಹ್ಮದ್.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 9 - October 21 2021, 03:30 PM
ಬಾಂಗ್ಲಾದೇಶ್
ಪಪುವಾ ನ್ಯೂ ಗಿನಿವಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, September 10, 2021, 9:29 [IST]
Other articles published on Sep 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X