ಟಿ20 ವಿಶ್ವಕಪ್ ಸೆಮಿಫೈನಲ್ 1: ನ್ಯೂಜಿಲೆಂಡ್‌ vs ಇಂಗ್ಲೆಂಡ್ ತಂಡಗಳಲ್ಲಿ ಯಾರು ಬಲಿಷ್ಠರು?

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹಂತ ಇಂದಿನಿಂದ ( ನವೆಂಬರ್‌ 10 ) ಪ್ರಾರಂಭವಾಗುತ್ತಿದ್ದು ಸೆಮಿಫೈನಲ್ ಸುತ್ತಿಗೆ ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಲಗ್ಗೆ ಇಟ್ಟಿವೆ. ಈ ಪೈಕಿ ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಪರಸ್ಪರ ಸೆಣಸಾಟ ನಡೆಸಲಿದ್ದು ಈ ಪಂದ್ಯ ಅಬುದಾಬಿಯ ಶೇಖ್ ಝಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ನವೆಂಬರ್‌ 10 ) ಸಂಜೆ 7.30ಕ್ಕೆ ಆರಂಭವಾಗಲಿದೆ.

ಟಿ20 ವಿಶ್ವಕಪ್: ಈ 5 ಅಂಶಗಳು ಸರಿ ಇದ್ದಿದ್ದರೆ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ಇರುತ್ತಿತ್ತು!ಟಿ20 ವಿಶ್ವಕಪ್: ಈ 5 ಅಂಶಗಳು ಸರಿ ಇದ್ದಿದ್ದರೆ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ಇರುತ್ತಿತ್ತು!

ಟೂರ್ನಿಯ ಸೂಪರ್ 12 ಹಂತದಲ್ಲಿ ಇತ್ತಂಡಗಳು ಬೇರೆಬೇರೆ ಗುಂಪಿನಲ್ಲಿದ್ದರೂ ಸಹ ಎರಡೂ ತಂಡಗಳು ತಲಾ 4 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಸಮಬಲವನ್ನು ಸಾಧಿಸಿವೆ. ಆದರೆ, ನ್ಯೂಜಿಲೆಂಡ್ ತಂಡಕ್ಕಿಂತ ಇಂಗ್ಲೆಂಡ್ ತಂಡದ ನೆಟ್ ರನ್ ರೇಟ್ ಉತ್ತಮವಾಗಿದ್ದು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಉತ್ತಮ ಪ್ರದರ್ಶನವನ್ನು ನೀಡಿದೆ ಎಂದೇ ಹೇಳಬಹುದು.

ಇನ್ನು ಇಂದು ಇತ್ತಂಡಗಳ ನಡುವೆ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಪ್ರವೇಶಿಸಲಿದ್ದು ನವೆಂಬರ್‌ 14ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಅಥವಾ ಆಸ್ಟ್ರೇಲಿಯಾ ತಂಡದ ಜೊತೆ ಸೆಣಸಾಟ ನಡೆಸಲಿದೆ. ಹಾಗೂ ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಹೀಗಾಗಿ ಈ ಪಂದ್ಯ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಎರಡೂ ತಂಡಗಳಿಗೂ ಕೂಡ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ ಎಂದೇ ಹೇಳಬಹುದು.

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಸಮಬಲವನ್ನು ಸಾಧಿಸಿವೆ. ಆದರೆ ಇತ್ತಂಡಗಳ ನಡುವಿನ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯದಲ್ಲಿ ಗೆದ್ದಿದೆ ಮತ್ತು ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಸೋತು ಮಂಕಾಗಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಒಟ್ಟಾರೆ ಟಿಟ್ವೆಂಟಿ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೂ ಒಟ್ಟು 20 ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯಗಳ ಪೈಕಿ ಇಂಗ್ಲೆಂಡ್ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್ 7 ಪಂದ್ಯಗಳಲ್ಲಿ ಗೆಲುವನ್ನು ಕಂಡಿದೆ. ಈ ಮೂಲಕ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಒಟ್ಟಾರೆ ಟಿಟ್ವೆಂಟಿ ಮುಖಾಮುಖಿಯಲ್ಲಿ ಇಂಗ್ಲೆಂಡ್ ಸ್ಪಷ್ಟ ಮೇಲುಗೈ ಸಾಧಿಸಿ ಬಲಿಷ್ಠ ತಂಡವೆನಿಸಿಕೊಂಡಿದೆ.

ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ: ನಿರೀಕ್ಷೆಗಳು ದುಪ್ಪಟ್ಟುಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ: ನಿರೀಕ್ಷೆಗಳು ದುಪ್ಪಟ್ಟು

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯ ಫಲಿತಾಂಶ

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಇಂಗ್ಲೆಂಡ್ 2 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ತಂಡ ಮುನ್ನಡೆ ಸಾಧಿಸಿದೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ ಟ್ವೆಂಟಿ ವಿಶ್ವಕಪ್ ಮುಖಾಮುಖಿಯಲ್ಲಿ ಯಾರು ಹೆಚ್ಚು ಗೆದ್ದಿರುವವರು?

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಇಲ್ಲಿಯವರೆಗೂ ಒಟ್ಟು 5 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಎದುರಾಗಿವೆ. ಈ ಪೈಕಿ ಇಂಗ್ಲೆಂಡ್ 3 ಪಂದ್ಯಗಳಲ್ಲಿ ಗೆದ್ದಿದ್ದರೆ, ನ್ಯೂಜಿಲೆಂಡ್ 2 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದಿರುವ ಟಿ ಟ್ವೆಂಟಿ ವಿಶ್ವಕಪ್ ಮುಖಾಮುಖಿಯ ಪಂದ್ಯಗಳಲ್ಲಿ ಇಂಗ್ಲೆಂಡ್ ಮುನ್ನಡೆ ಸಾಧಿಸಿದೆ.

For Quick Alerts
ALLOW NOTIFICATIONS
For Daily Alerts
Story first published: Wednesday, November 10, 2021, 14:58 [IST]
Other articles published on Nov 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X