ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೋಹಿತ್ ಶರ್ಮಾ ಓಪನರ್ ಸ್ಥಾನದಿಂದ ಕೆಳಗಿಳಿಯಲು ಇವರೇ ಕಾರಣ; ಕೊನೆಗೂ ಹೊರಬಿತ್ತು ಸತ್ಯ

T20 World Cup 2021: Sending Ishan Kishan as Opener against New Zealand was MS Dhonis Idea: Source

ಪ್ರಸ್ತುತ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಅಕ್ಷರಶಃ ಮಂಕಾಗಿದ್ದು ಟೂರ್ನಿಯಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳಲ್ಲಿ ಸತತವಾಗಿ ಸೋತಿದೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲೆರಡು ಪಂದ್ಯಗಳಲ್ಲಿ ಸತತವಾಗಿ ಸೋತಿರುವ ಟೀಂ ಇಂಡಿಯಾ ಸದ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದ್ದು, ಇನ್ನೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿಲ್ಲ.

ಟಿ20 ವಿಶ್ವಕಪ್: ಸತತ 4ನೇ ಗೆಲುವು ಕಂಡ ಪಾಕಿಸ್ತಾನ ಸೆಮಿಫೈನಲ್‌ಗೆ ಲಗ್ಗೆಟಿ20 ವಿಶ್ವಕಪ್: ಸತತ 4ನೇ ಗೆಲುವು ಕಂಡ ಪಾಕಿಸ್ತಾನ ಸೆಮಿಫೈನಲ್‌ಗೆ ಲಗ್ಗೆ

ಸೂಪರ್ 12 ಗ್ರೂಪ್ 2ರಲ್ಲಿ ಟೀಮ್ ಇಂಡಿಯಾ ಸ್ಥಾನ ಪಡೆದುಕೊಂಡಿದ್ದು, ಅಕ್ಟೋಬರ್ 24ರ ಭಾನುವಾರದಂದು ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ತನ್ನ ಬದ್ಧ ವೈರಿಯಾದ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೀನಾಯವಾದ ಸೋಲನ್ನು ಅನುಭವಿಸಿತ್ತು. ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಪಾಕಿಸ್ತಾನ ವಿಶ್ವಕಪ್ ಹಣಾಹಣಿಯೊಂದರಲ್ಲಿ ಸೋಲಿಸಿದ ಮೈಲಿಗಲ್ಲನ್ನು ಈ ಪಂದ್ಯದ ಮೂಲಕ ನೆಟ್ಟಿತ್ತು. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಆರಂಭದ ಪಂದ್ಯದಲ್ಲಿಯೇ ದೊಡ್ಡ ಮಟ್ಟದ ಸೋಲನ್ನು ಕಂಡ ಟೀಮ್ ಇಂಡಿಯಾ ನಂತರ ನ್ಯೂಜಿಲೆಂಡ್ ವಿರುದ್ಧ ನಡೆದ ಮತ್ತೊಂದು ಪಂದ್ಯದಲ್ಲಿಯೂ ಸೋಲನ್ನು ಅನುಭವಿಸಿತು.

ಭಾರತದ ಕಳಪೆ ಪ್ರದರ್ಶನಕ್ಕೆ ಐಪಿಎಲ್ ಕಾರಣ?; ಸತತ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಬ್ಯಾಟಿಂಗ್ ಕೋಚ್ಭಾರತದ ಕಳಪೆ ಪ್ರದರ್ಶನಕ್ಕೆ ಐಪಿಎಲ್ ಕಾರಣ?; ಸತತ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಬ್ಯಾಟಿಂಗ್ ಕೋಚ್

ಅಕ್ಟೋಬರ್ 31ರ ಭಾನುವಾರದಂದು ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಪರ ಈ ಪಂದ್ಯದಲ್ಲಿ ಆರಂಭಿಕ ಆಟಗಾರರಾಗಿ ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಕಣಕ್ಕಿಳಿಯುವುದರ ಮೂಲಕ ಅಚ್ಚರಿ ಮೂಡಿಸಿದ್ದರು. ಈ ಹಿಂದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಜೋಡಿ ಆರಂಭಿಕರಾಗಿ ಕಣಕ್ಕಿಳಿಯುತ್ತಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಯಿತು. ಹೀಗೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ಥಾನಕ್ಕೆ ಇಶಾನ್ ಕಿಶನ್ ಅವರನ್ನು ಯಾಕೆ ಕಳುಹಿಸಲಾಯಿತು ಮತ್ತು ರೋಹಿತ್ ಶರ್ಮಾರನ್ನು ಮೂರನೇ ಕ್ರಮಾಂಕದಲ್ಲಿ ಯಾಕೆ ಕಣಕ್ಕಿಳಿಸಲಾಯಿತು ಹಾಗೂ ಇದರ ಹಿಂದಿನ ಕಾರಣಕರ್ತರು ಯಾರು ಎಂಬ ಪ್ರಶ್ನೆಗಳು ಎದ್ದಿದ್ದವು. ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ತೆರೆ ಬಿದ್ದಿದ್ದು ಈ ಕೆಳಕಂಡಂತೆ ಉತ್ತರಗಳು ಸಿಕ್ಕಿವೆ.

ಇದು ಎಂಎಸ್ ಧೋನಿ ಉಪಾಯ

ಇದು ಎಂಎಸ್ ಧೋನಿ ಉಪಾಯ


ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲು ಇಶಾನ್ ಕಿಶನ್ ಅವರನ್ನು ಆರಂಭಿಕ ಆಟಗಾರರಾಗಿ ಕಣಕ್ಕೆ ಇಳಿಸಬೇಕು ಮತ್ತು ರೋಹಿತ್ ಶರ್ಮಾ ಅವರನ್ನು ತೃತೀಯ ಕ್ರಮಾಂಕದಲ್ಲಿ ಕಣಕ್ಕಿಳಿಸಬೇಕು ಎಂಬ ಉಪಾಯವನ್ನು ಎಂಎಸ್ ಧೋನಿ ನೀಡಿದರು ಎಂದು ಟೀಮ್ ಇಂಡಿಯಾದ ಬಲ್ಲ ಮೂಲಗಳು ತಿಳಿಸಿವೆ.

ರೋಹಿತ್ ಶರ್ಮಾ ಕೂಡ ಒಪ್ಪಿಗೆ ನೀಡಿದ್ದರು

ರೋಹಿತ್ ಶರ್ಮಾ ಕೂಡ ಒಪ್ಪಿಗೆ ನೀಡಿದ್ದರು

ಹೀಗೆ ರೋಹಿತ್ ಶರ್ಮಾ ಬದಲು ಇಶಾನ್ ಕಿಶನ್ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಉಪಾಯವನ್ನು ಎಂಎಸ್ ಧೋನಿ ನೀಡಿದ ನಂತರ ತಂಡದ ತರಬೇತುದಾರರು ಮತ್ತು ನಾಯಕನ ಉಪಸ್ಥಿತಿಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ. ಈ ಸಮಯದಲ್ಲಿ ರೋಹಿತ್ ಶರ್ಮಾ ಕೂಡ ತಂಡದ ನಿರ್ಧಾರಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಯೋಜನೆಯನ್ನೇನೋ ಮಾಡಿದರು ಆದರೆ ಯೋಜನೆ ಕೆಲಸ ಮಾಡಲಿಲ್ಲ!

ಯೋಜನೆಯನ್ನೇನೋ ಮಾಡಿದರು ಆದರೆ ಯೋಜನೆ ಕೆಲಸ ಮಾಡಲಿಲ್ಲ!

ಹೌದು, ತಂಡದ ಯೋಜನೆಯಂತೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ, ಆರಂಭಿಕ ಆಟಗಾರನಾಗಿ ಇಶಾನ್ ಕಿಶನ್ ಅವರನ್ನು ಕಳುಹಿಸಲಾಗಿತ್ತು. ಆದರೆ ಟೀಮ್ ಇಂಡಿಯಾದ ಈ ಯೋಜನೆ ಕೆಲಸ ಮಾಡಲೇ ಇಲ್ಲ. ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಹೀಗೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪ್ರಯೋಗ ಮಾಡಿದರೂ ಕೂಡ ಉತ್ತಮ ಆರಂಭವನ್ನಾಗಲಿ ಅಥವಾ ಗೆಲುವನ್ನಾಗಲಿ ಪಡೆದುಕೊಳ್ಳುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಲಿಲ್ಲ.

ಮುಂಬೈ ಇಂಡಿಯನ್ಸ್ ಹಾರ್ದಿಕ್ ಕೈ ಬಿಡೋದಕ್ಕೆ ಕಾರಣ ಏನು ಗೊತ್ತಾ? | Oneindia Kannada

Story first published: Wednesday, November 3, 2021, 15:08 [IST]
Other articles published on Nov 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X