ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಜರುಗುತ್ತಿದ್ದು ಈಗಾಗಲೇ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಸುತ್ತಿಗೆ ತಮ್ಮ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿವೆ. ಇನ್ನುಳಿದಂತೆ ಭಾರತ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಸೆಮಿಫೈನಲ್ ರೇಸ್ ಏರ್ಪಟ್ಟಿದೆ.
ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 1ರಲ್ಲಿ ಇಂಗ್ಲೆಂಡ್ ಒಟ್ಟು 3 ಪಂದ್ಯಗಳನ್ನಾಡಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ, ಇದೇ ಗುಂಪಿನ ಮತ್ತೊಂದು ತಂಡ ದಕ್ಷಿಣ ಆಫ್ರಿಕಾ ಟೂರ್ನಿಯಲ್ಲಿ ಇದುವರೆಗೂ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ 4 ಅಂಕಗಳನ್ನು ಪಡೆದುಕೊಂಡು ದ್ವಿತೀಯ ಸ್ಥಾನದಲ್ಲಿದೆ ಮತ್ತು ಆಸ್ಟ್ರೇಲಿಯಾ ತಂಡ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಇನ್ನು ಗ್ರೂಪ್ 1ರ ಉಳಿದ ತಂಡಗಳಾದ ಶ್ರೀಲಂಕಾ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಸೋತಿದೆ, ವೆಸ್ಟ್ ಇಂಡೀಸ್ ಕೂಡ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಸೋತಿದೆ ಮತ್ತು ಬಾಂಗ್ಲಾದೇಶ 3 ಪಂದ್ಯಗಳನ್ನಾಡಿದ್ದು ಎಲ್ಲ ಪಂದ್ಯಗಳಲ್ಲಿಯೂ ಸೋಲುಂಡಿದೆ. ಹೀಗೆ ಹೆಚ್ಚು ಪಂದ್ಯಗಳನ್ನು ಸೋತಿರುವ ಈ ಮೂರೂ ತಂಡಗಳು ಸೆಮಿಫೈನಲ್ ರೇಸ್‌ನಿಂದ ಬಹುತೇಕ ಹೊರಬಿದ್ದಿವೆ.
ಇತ್ತ ಸೂಪರ್ 12 ಹಂತದ ಗ್ರೂಪ್ 2ರಲ್ಲಿ ಪಾಕಿಸ್ತಾನ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಟೂರ್ನಿಯಲ್ಲಿ ಇದುವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಪಾಕಿಸ್ತಾನ ಎಲ್ಲಾ ಪಂದ್ಯಗಳಲ್ಲಿಯೂ ಜಯ ಸಾಧಿಸಿದೆ. ಅಫ್ಘಾನಿಸ್ತಾನ 2 ಪಂದ್ಯಗಳನ್ನಾಡಿ 1 ಪಂದ್ಯದಲ್ಲಿ ಗೆದ್ದು ಮತ್ತೊಂದರಲ್ಲಿ ಸೋಲುವುದರ ಮೂಲಕ 2 ಅಂಕಗಳನ್ನು ಪಡೆದುಕೊಂಡು ದ್ವಿತೀಯ ಸ್ಥಾನದಲ್ಲಿದೆ ಮತ್ತು ನಮೀಬಿಯಾ 1 ಪಂದ್ಯವನ್ನಾಡಿದ್ದು ಅದರಲ್ಲಿ ಗೆಲ್ಲುವುದರ ಮೂಲಕ ತೃತೀಯ ಸ್ಥಾನದಲ್ಲಿದೆ. ಈ ಗ್ರೂಪ್ 2ರಲ್ಲಿ ಬಲಿಷ್ಠ ತಂಡಗಳೆನಿಸಿಕೊಂಡಿರುವ ನ್ಯೂಜಿಲೆಂಡ್ ಮತ್ತು ಟೀಮ್ ಇಂಡಿಯಾ ಇದುವರೆಗೂ ಕೇವಲ ಒಂದೇ ಒಂದು ಪಂದ್ಯವನ್ನಾಡಿ ಸೋಲುಂಡಿದ್ದು ಈ ತಂಡಗಳ ಮುಂದಿನ ಪಂದ್ಯ ಯಾವ ತಂಡ ಸೆಮಿಫೈನಲ್ ಕಡೆ ಹೆಜ್ಜೆ ಹಾಕಲಿದೆ ಎಂಬುದನ್ನು ತಿಳಿಸಲಿದೆ.
ಹೀಗೆ ಯಾವ ತಂಡಗಳು ಸೆಮಿಫೈನಲ್ ಸುತ್ತಿಗೆ ಆರ್ಹತೆಯನ್ನು ಪಡೆದುಕೊಳ್ಳಲಿವೆ ಎನ್ನುವ ರೋಚಕ ಘಟಕ್ಕೆ ಬಂದು ತಲುಪಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಯಾವ ತಂಡಗಳು ಸೆಮಿಫೈನಲ್ ಪ್ರವೇಶಿಸಬಹುದು ಎಂಬುದರ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಇದೀಗ ಶೇನ್ ವಾರ್ನ್ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಯಾವ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ ಮತ್ತು ಫೈನಲ್ ಪಂದ್ಯದಲ್ಲಿ ಯಾರ ನಡುವೆ ಪಂದ್ಯಗಳು ನಡೆಯಲಿವೆ ಎಂಬುದನ್ನು ಈ ಕೆಳಕಂಡಂತೆ ಊಹಿಸಿದ್ದಾರೆ.
{photo-feature}
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications