ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

5-0 ಅಂತರದಿಂದ ಗೆದ್ದ ಆ ಟಿ20 ಸರಣಿಯನ್ನು ಮರೆಯಬೇಡಿ: ಸುನಿಲ್ ಗವಾಸ್ಕರ್

T20 World Cup 2021:Sunil Gavaskar predicts India will defeat New Zealand

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಪಂದ್ಯದ ಆರಂಭಕ್ಕೂ ಮುನ್ನ ಮಾಜಿ ನಾಯಕ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾ ಬಗ್ಗೆ ಮಾತನಾಡಿದ್ದಾರೆ. ಈ ಪಂದ್ಯಕ್ಕೂ ಮುನ್ನ ಅವರು ಭಾರತ ನ್ಯೂಜಿಲೆಂಡ್ ವಿರುದ್ಧ ಚುಟುಕು ಕ್ರಿಕೆಟ್‌ನಲ್ಲಿ ಸಾಧಿಸಿದ ಮುನ್ನಡೆಯ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಅದರದ್ದೇ ನೆಲದಲ್ಲಿ ಬರ್ಜರಿಯಾಗಿ ಗೆದ್ದ ಸರಣಿಯನ್ನು ಸ್ಮರಿಸಿದ್ದಾರೆ ಸುನಿಲ್ ಗವಾಸ್ಕರ್.

2020ರಲ್ಲಿ ನ್ಯೂಜಿಲೆಂಡ್‌ಗೆ ಪ್ರವಾಸ ಕೂಗೊಂಡಿದ್ದ ಭಾರತ ಅಲ್ಲಿ ಮೊದಲಿಗೆ ಐದು ಒಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಂಡಿತ್ತು. ಈ ಸರಣಿಯಲ್ಲಿ ಭಾರತ ಐದು ಪಂದ್ಯಗಳನ್ನು ಕೂಡ ಭರ್ಜರಿಯಾಗಿ ಗೆದ್ದು ಬೀಗಿತ್ತು. ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿಯೂ ಭಾರತ ನ್ಯೂಜಿಲೆಂಡ್ ತಂಡದ ವಿರುದ್ಧ ಅಂತಾದ್ದೇ ಅದ್ಭುತ ಸಾಧನೆಯನ್ನು ಮಾಡಲಿದೆ ಎಂದಿದ್ದಾರೆ ಭಾರತೀಯ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ ಮಾಜಿ ನಾಯಕ ಸುನಿಲ್ ಗವಾಸ್ಕರ್.

ಟಿ20 ವಿಶ್ವಕಪ್: ಅಫ್ಘಾನಿಸ್ತಾನ vs ನಮೀಬಿಯಾ ಸಂಭಾವ್ಯ ಆಡುವ ಬಳಗ, ಪಿಚ್ ವರದಿ, ನೇರಪ್ರಸಾರಟಿ20 ವಿಶ್ವಕಪ್: ಅಫ್ಘಾನಿಸ್ತಾನ vs ನಮೀಬಿಯಾ ಸಂಭಾವ್ಯ ಆಡುವ ಬಳಗ, ಪಿಚ್ ವರದಿ, ನೇರಪ್ರಸಾರ

ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಭಾರೀ ಸೋಲನ್ನು ಅನುಭವಿಸಿತ್ತು. ಇದೀಗ ಕೇನ್ ವಿಲಿಯಮ್ಸನ್ ಪಡೆಯನ್ನು ವಿರಾಟ್ ಕೊಹ್ಲಿ ಪಡೆ ಎದುರಿಸಲಿದ್ದು ಈ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಅನಿವಾರ್ಯವಾಗಿದೆ. ಇನ್ನು ನ್ಯೂಜಿಲೆಂಡ್ ತಂಡವೂ ಕೂಡ ಪಾಕಿಸ್ತಾನದ ವಿರುದ್ಧವೇ ತನ್ನ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಕಾರಣದಿಂದಾಗಿ ಭಾರತದ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ ಈ ಪಂದ್ಯ ಕ್ವಾರ್ಟನ್ ಫೈನಲ್ ಪಂದ್ಯ ಎಂದೇ ಬಿಂಬಿತವಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!

ನ್ಯೂಜಿಲೆಂಡ್ ತಂಡದ ವಿರುದ್ಧದ ಸವಾಲು ಭಾರತಕ್ಕೆ ಕಠಿಣವಾಗಿರುತ್ತದೆ ಎಂದು ಸುನಿಲ್ ಗವಾಸ್ಕರ್ ಹೇಳಿಕೊಂಡಿದ್ದಾರೆ. ನ್ಯೂಜಿಲೆಂಡ್ ತಂಡ ಸಾಕಷ್ಟು ಸಮತೋಲಿತವಾಗಿದೆ. ಹೋರಾಡುವ ಶಕ್ತಿ ನ್ಯೂಜಿಲೆಂಡ್ ತಂಡದಲ್ಲಿ ಅತ್ಯುತ್ತಮವಾಗಿದೆ. ಆದರೆ ನ್ಯೂಜಿಲೆಂಡ್ ವಿರುದ್ಧ ಈ ಮುನ್ನ ಅದರದ್ದೇ ತವರಿನಲ್ಲಿ ಭಾರತ 5-0 ಅಂತರದಿಂದ ಟಿ20 ಕ್ರಿಕೆಟ್‌ನಲ್ಲಿ ಗೆಲುವು ಸಾಧಿಸಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

"ನ್ಯೂಜಿಕಲೆಂಡ್ ಪಡೆ ಯಾವಾಗಲೂ ಅತ್ಯಂತ ಸಮತೋಲಿತ ತಂಡವಾಗಿರುತ್ತದೆ. ಅವರಲ್ಲಿ ಹೋರಾಡುವ ಶಕ್ತಿಯಿದೆ. ಅವರು ಎಂದಿಗೂ ಸುಲಭವಾಗಿ ಬಿಟ್ಟುಕೊಡಲಾರರು. ಅದೇಢ ಕಾರಣದಿಂದಾಗಿ ಯಾವಾಗಲೂ ನೀವು ಎವರ ವಿರುದ್ಧ ಆಡುವಾಗ ಸಾಕಷ್ಟು ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಹಾಗಾಗಿ ಇದು ಖಂಡಿತವಾಗಿಯೂ ಸುಲಬದ ಪಂದ್ಯ ಆಗಿರುವುದಿಲ್ಲ. ಆದರೆ ನೀವು ಒಂದು ಸಂಗತಿಯನ್ನು ನೆನಪಿಟ್ಟುಕೊಳ್ಳಬೇಕು. ಭಾರತ 2020ರಲ್ಲಿ ನಡೆದ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು 5-0 ಅಂತರದಿಂದ ಮಣಿಸಿತ್ತು. ಇದರಲ್ಲಿ ಎರಡು ಪಂದ್ಯಗಳನ್ನು ಭಾರತ ಸೂಪರ್ ಓವರ್‌ನಲ್ಲಿ ಗೆಲುವು ಕಂಡಿತ್ತು. ಹೀಗಾಗಿ ನ್ಯೂಜಿಲೆಂಡ್ ತ,ಡದ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ಈ ಪಂದ್ಯ ಸಾಕಷ್ಟು ಆತ್ಮ ವಿಶ್ವಾಸವನ್ನು ನೀಡಲಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್.

Story first published: Sunday, October 31, 2021, 17:44 [IST]
Other articles published on Oct 31, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X