ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಸ್ಕಾಟ್ಲೆಂಡ್: ಗೆಲುವಿಗಾಗಿ ಕೊಹ್ಲಿಯ ಹಳೇ ತಂತ್ರ; ಸೆಮಿಫೈನಲ್ ಪ್ರವೇಶಿಸಲು ಈ ರೀತಿ ನಡೆಯಲೇಬೇಕು!

T20 World Cup 2021: Team India unlikely to change their playing 11 against Scotland

ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಸತತ 2 ಸೋಲುಗಳನ್ನು ಕಂಡ ನಂತರ ಮೂರನೇ ಪಂದ್ಯದಲ್ಲಿ ಗೆಲುವನ್ನು ಸಾಧಿಸಿದೆ. ಹೌದು, ನವೆಂಬರ್‌ 3ರ ಬುಧವಾರದಂದು ಅಬುಧಾಬಿಯ ಶೈಖ್ ಝಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಟೀಮ್ ಇಂಡಿಯಾ 66 ರನ್‌ಗಳ ಬೃಹತ್ ಜಯವನ್ನು ದಾಖಲಿಸಿತು. ಈ ಮೂಲಕ ಟೂರ್ನಿಯಲ್ಲಿ ಕೊಹ್ಲಿ ಪಡೆ ಗೆಲುವಿನ ಖಾತೆ ತೆರೆಯಿತು.

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ನ್ಯೂಜಿಲೆಂಡ್‌ಗೆ ಜಯ; ಟೀಮ್ ಇಂಡಿಯಾ ಸೆಮಿಫೈನಲ್ ಹಾದಿ ಕಷ್ಟಕಷ್ಟ!ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ನ್ಯೂಜಿಲೆಂಡ್‌ಗೆ ಜಯ; ಟೀಮ್ ಇಂಡಿಯಾ ಸೆಮಿಫೈನಲ್ ಹಾದಿ ಕಷ್ಟಕಷ್ಟ!

ಟೀಮ್ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಈ ಭರ್ಜರಿ ಜಯವನ್ನು ಸಾಧಿಸುವುದಕ್ಕೂ ಮುನ್ನ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ನಡೆದ ಪಂದ್ಯಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿತ್ತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಿದ್ದ ಭಾರತ ಹೀನಾಯ ಸೋಲನ್ನು ಕಂಡಿತ್ತು. ಈ ಮೂಲಕ ಇದೇ ಮೊದಲ ಬಾರಿಗೆ ವಿಶ್ವಕಪ್ ಹಣಾಹಣಿಯ ಪಂದ್ಯವೊಂದರಲ್ಲಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಸೋಲುಂಡಿತು. ಇದಾದ ಬಳಿಕ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ಕೂಡ ಟೀಮ್ ಇಂಡಿಯಾ ಸೋಲುವುದರ ಮೂಲಕ ಕಳೆದ 18 ವರ್ಷಗಳಿಂದ ಐಸಿಸಿ ಟೂರ್ನಿಯ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುತ್ತಿರುವ ತನ್ನ ಕೆಟ್ಟ ದಾಖಲೆಯನ್ನು ಈ ಬಾರಿಯೂ ಮುಂದುವರಿಸಿತು.

ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಪಾಕಿಸ್ತಾನದ ಬಾಬರ್ ಅಜಮ್ ನಂ.1; ಕೊಹ್ಲಿಗೆ ಎಷ್ಟನೇ ಸ್ಥಾನ ಗೊತ್ತಾ?ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಪಾಕಿಸ್ತಾನದ ಬಾಬರ್ ಅಜಮ್ ನಂ.1; ಕೊಹ್ಲಿಗೆ ಎಷ್ಟನೇ ಸ್ಥಾನ ಗೊತ್ತಾ?

ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳನ್ನು ಸೋತ ಟೀಂ ಇಂಡಿಯಾ ಇದೀಗ ಸೆಮಿಫೈನಲ್ ಪ್ರವೇಶಿಸಲು ಇತರ ತಂಡಗಳ ನಡುವಿನ ಪಂದ್ಯದ ಫಲಿತಾಂಶದ ಮೇಲೆ ಅವಲಂಬಿತವಾಗುವಂತಾಗಿದೆ. ಅಷ್ಟೆ ಅಲ್ಲದೇ ಟೂರ್ನಿಯಲ್ಲಿನ ತನ್ನ ಉಳಿದ ಪಂದ್ಯಗಳನ್ನು ಕೂಡ ಟೀಮ್ ಇಂಡಿಯಾ ಗೆಲ್ಲಬೇಕಿದೆ. ಇನ್ನು ಇಂದು ( ನವೆಂಬರ್‌ 5 ) ಟೀಮ್ ಇಂಡಿಯಾ ಟೂರ್ನಿಯಲ್ಲಿನ ತನ್ನ ನಾಲ್ಕನೇ ಪಂದ್ಯವನ್ನಾಡಲಿದ್ದು ಸ್ಕಾಟ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ. ಈ ನಡುವೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಯಾವೆಲ್ಲ ಅವಕಾಶಗಳಿವೆ, ಯಾವ ತಂಡ ಸೋತರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ ಎಂಬ ಚರ್ಚೆಗಳು ಕೂಡ ನಡೆಯುತ್ತಿವೆ. ಇನ್ನು ಸ್ಕಾಟ್ಲೆಂಡ್ ವಿರುದ್ಧ ಇಂದು ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಕಡ್ಡಾಯವಾಗಿ ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ತಮ್ಮ ಹಳೆ ತಂತ್ರವನ್ನೇ ಮುಂದುವರೆಸುವುದು ಬಹುತೇಕ ಖಚಿತವಾಗಿದೆ. ಹೀಗೆ ಸ್ಕಾಟ್ಲೆಂಡ್ ವಿರುದ್ಧ ಕಣಕ್ಕಿಳಿಯಬಹುದಾದ ಭಾರತ ತಂಡ ಮತ್ತು ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶದ ಸಾಧ್ಯತೆಗಳು ಎಷ್ಟಿವೆ ಎಂಬುದರ ಮಾಹಿತಿ ಮುಂದೆ ಓದಿ.

ಸ್ಕಾಟ್ಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ತಂಡ

ಸ್ಕಾಟ್ಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ತಂಡ

ನವೆಂಬರ್‌ 3ರ ಬುಧವಾರದಂದು ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಟೀಮ್ ಇಂಡಿಯಾ 66 ರನ್‌ಗಳ ಬೃಹತ್ ಜಯ ಸಾಧಿಸಿದ ಕಾರಣದಿಂದಾಗಿ ತಂಡದ ನಾಯಕ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿದಿದ್ದ ತಂಡವನ್ನೇ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯಕ್ಕೂ ಕಣಕ್ಕಿಳಿಸುವ ತೀರ್ಮಾನವನ್ನು ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿದಿದ್ದ ತಂಡ ಉತ್ತಮ ಪ್ರದರ್ಶನ ನೀಡಿದ ಕಾರಣದಿಂದಾಗಿ ಅದೇ ಆಟಗಾರರನ್ನೊಳಗೊಂಡಂತೆ ಸ್ಕಾಟ್ಲೆಂಡ್ ವಿರುದ್ಧ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

ಸ್ಕಾಟ್ಲೆಂಡ್ ವಿರುದ್ಧ ಕಣಕ್ಕಿಳಿಯಬಹುದಾದ ಭಾರತದ ಸಂಭಾವ್ಯ ತಂಡ ಹೀಗಿದೆ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ಮುಂದಿನ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕಾಗಿದೆ ಟೀಮ್ ಇಂಡಿಯಾ!

ಮುಂದಿನ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕಾಗಿದೆ ಟೀಮ್ ಇಂಡಿಯಾ!

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಇಂದು ( ನವೆಂಬರ್‌ 5) ಸ್ಕಾಟ್ಲೆಂಡ್ ವಿರುದ್ಧ ಸೆಣಸಾಡಲಿದೆ ಹಾಗೂ ತನ್ನ ಮುಂದಿನ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಕೂಡ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಸೆಮಿಫೈನಲ್ ಹಾದಿಯನ್ನು ಸುಗಮ ಮಾಡಿಕೊಳ್ಳಬೇಕೆಂದರೆ ಸ್ಕಾಟ್ಲೆಂಡ್ ಮತ್ತು ನಮೀಬಿಯಾ ವಿರುದ್ಧದ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುವುದರ ಮೂಲಕ ಉತ್ತಮ ನೆಟ್ ರನ್ ರೇಟ್ ಗಳಿಸಲೇಬೇಕಾಗಿದೆ. ಒಂದುವೇಳೆ ಟೀಮ್ ಇಂಡಿಯಾ ತನ್ನ ಮುಂದಿನ 2 ಪಂದ್ಯಗಳಲ್ಲಿ ಯಾವುದಾದರೊಂದು ಪಂದ್ಯವನ್ನು ಸೋತರೆ ಅಧಿಕೃತವಾಗಿ ಸೆಮಿಫೈನಲ್ ರೇಸ್‌ನಿಂದ ಹೊರಬೀಳಲಿದೆ.

ಸ್ಪೋಟಕ ಜಯದ ನಂತರ ಗೇಮ್ ಪ್ಲಾನ್ ಬಗ್ಗೆ ಹೇಳಿದ Virat Kohli | Oneindia Kannada
ಭಾರತದ ಸೆಮಿಫೈನಲ್ ಪ್ರವೇಶವನ್ನು ನಿರ್ಧರಿಸಲಿದೆ ನ್ಯೂಜಿಲೆಂಡ್ vs ಅಫ್ಘಾನಿಸ್ತಾನ ಪಂದ್ಯ

ಭಾರತದ ಸೆಮಿಫೈನಲ್ ಪ್ರವೇಶವನ್ನು ನಿರ್ಧರಿಸಲಿದೆ ನ್ಯೂಜಿಲೆಂಡ್ vs ಅಫ್ಘಾನಿಸ್ತಾನ ಪಂದ್ಯ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿ 2 ಪಂದ್ಯಗಳನ್ನು ಗೆದ್ದಿರುವ ನ್ಯೂಜಿಲೆಂಡ್ ತನ್ನ ಮುಂದಿನ ಪಂದ್ಯವನ್ನು ನಮೀಬಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ವಿರುದ್ಧ ಆಡಲಿದೆ. ನ್ಯೂಜಿಲೆಂಡ್ ನಮೀಬಿಯಾ ತಂಡ ವಿರುದ್ಧ ಸುಲಭವಾಗಿ ಜಯಗಳಿಸಲಿದ್ದು ಮುಂಬರಲಿರುವ ಭಾನುವಾರ ನಡೆಯಲಿರುವ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್‌ ನಡುವಿನ ಪಂದ್ಯ ಟೀಮ್ ಇಂಡಿಯಾ ಸೆಮಿಫೈನಲ್ ಭವಿಷ್ಯವನ್ನು ನಿರ್ಧರಿಸಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವೇನಾದರೂ ಅಫ್ಘಾನಿಸ್ತಾನದ ವಿರುದ್ಧ ಸೋತರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಹಾದಿಯ ಬಾಗಿಲು ತೆರೆಯಲಿದೆ. ಹೀಗೆ ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್ ಸೋತು, ಟೀಮ್ ಇಂಡಿಯಾ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳಿಗಿಂತ ಉತ್ತಮ ನೆಟ್ ರನ್ ರೇಟ್ ಹೊಂದಿದ್ದರೆ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಡಲಿದೆ. ಒಂದುವೇಳೆ ನ್ಯೂಜಿಲೆಂಡ್ ತನ್ನ ಮುಂದಿನ ಎರಡೂ ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದರೆ ಟೀಮ್ ಇಂಡಿಯಾ ಟೂರ್ನಿಯಿಂದ ಹೊರ ಬೀಳಲಿದೆ.

Story first published: Friday, November 5, 2021, 13:00 [IST]
Other articles published on Nov 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X