ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ರಾಹುಲ್ ದಾಖಲೆ, ಭಾರತಕ್ಕೆ ಭರ್ಜರಿ ಜಯ; ಸೆಮಿಫೈನಲ್‌ ಪ್ರವೇಶಕ್ಕೆ ಇದೊಂದೇ ಮಾರ್ಗ!

T20 World Cup 2021: Team India win by 8 wickets against Scotland and still have the semifinal chances

ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 37ನೇ ಪಂದ್ಯದಲ್ಲಿ ಭಾರತ ಮತ್ತು ಸ್ಕಾಟ್ಲೆಂಡ್ ತಂಡಗಳು ಇಂದು ( ನವೆಂಬರ್‌ 5 ) ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾದವು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಕಾಟ್ಲೆಂಡ್ ವಿರುದ್ಧ 8 ವಿಕೆಟ್‍ಗಳ ಅಮೋಘ ಗೆಲುವನ್ನು ಸಾಧಿಸುವುದರ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತನ್ನ ದ್ವಿತೀಯ ಗೆಲುವನ್ನು ದಾಖಲಿಸಿತು.

ಈ ವಿಶೇಷ ದಾಖಲೆಗಳಲ್ಲಿ ಸಚಿನ್, ಧೋನಿಗಿಂತ ವಿರಾಟ್ ಕೊಹ್ಲಿಯೇ ನಂಬರ್ ಒನ್!ಈ ವಿಶೇಷ ದಾಖಲೆಗಳಲ್ಲಿ ಸಚಿನ್, ಧೋನಿಗಿಂತ ವಿರಾಟ್ ಕೊಹ್ಲಿಯೇ ನಂಬರ್ ಒನ್!

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ತಂಡವಾದ ಸ್ಕಾಟ್ಲೆಂಡ್‌ಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದರು. ಹೀಗೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಸ್ಕಾಟ್ಲೆಂಡ್ ಬ್ಯಾಟ್ಸ್‌ಮನ್‌ಗಳು ಟೀಮ್ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿ ಪೆವಿಲಿಯನ್ ಪರೇಡ್ ನಡೆಸಿದರು. 17.4 ಓವರ್‌ಗಳಲ್ಲಿ 85 ರನ್‌ಗಳಿಗೆ ಆಲ್ ಔಟ್ ಆದ ಸ್ಕಾಟ್ಲೆಂಡ್ ಟೀಮ್ ಇಂಡಿಯಾಗೆ ಗೆಲ್ಲಲು 86 ರನ್‌ಗಳ ಅಲ್ಪ ಮೊತ್ತದ ಗುರಿಯನ್ನು ನೀಡಿತು.

ಸ್ಕಾಟ್ಲೆಂಡ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಜಾರ್ಜ್ ಮುನ್ಸೆ 24, ಕೈಲ್ ಕೋಟ್ಜರ್ 1, ಮ್ಯಾಥ್ಯೂ ಕ್ರಾಸ್(ವಿಕೆಟ್ ಕೀಪರ್) 2, ರಿಚಿ ಬೆರಿಂಗ್ಟನ್ 0, ಕ್ಯಾಲಮ್ ಮ್ಯಾಕ್ಲಿಯೋಡ್ 16, ಮೈಕೆಲ್ ಲೀಸ್ಕ್ 21, ಕ್ರಿಸ್ ಗ್ರೀವ್ಸ್ 1, ಮಾರ್ಕ್ ವ್ಯಾಟ್ 14, ಸಫ್ಯಾನ್ ಷರೀಫ್ 0, ಅಲಾಸ್ಡೇರ್ ಇವಾನ್ಸ್ 0 ಮತ್ತು ಅಜೇಯ ಬ್ರಾಡ್ಲಿ ವೀಲ್ 2 ರನ್ ಗಳಿಸಿದರು.

ಭಾರತ ವಿರುದ್ಧದ ಟೆಸ್ಟ್ ಸರಣಿಗೆ 15 ಆಟಗಾರರ ತಂಡ ಪ್ರಕಟಿಸಿದ ನ್ಯೂಜಿಲೆಂಡ್‌; ಬಲಿಷ್ಠರಿಗೇ ಸ್ಥಾನವಿಲ್ಲ!ಭಾರತ ವಿರುದ್ಧದ ಟೆಸ್ಟ್ ಸರಣಿಗೆ 15 ಆಟಗಾರರ ತಂಡ ಪ್ರಕಟಿಸಿದ ನ್ಯೂಜಿಲೆಂಡ್‌; ಬಲಿಷ್ಠರಿಗೇ ಸ್ಥಾನವಿಲ್ಲ!

ಇನ್ನು ಸ್ಕಾಟ್ಲೆಂಡ್ ತಂಡ ನೀಡಿದ 86 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಪ್ರಾರಂಭದಿಂದಲೂ ಅಬ್ಬರದ ಬ್ಯಾಟಿಂಗ್ ನಡೆಸಿದರು. ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಗಳಿಸಿದರು ಮತ್ತು ಕೆಎಲ್ ರಾಹುಲ್ 19 ಎಸೆತಗಳಲ್ಲಿ 50 ರನ್ ಬಾರಿಸಿದರು. ಇನ್ನುಳಿದಂತೆ ವಿರಾಟ್ ಕೊಹ್ಲಿ ಅಜೇಯ 2 ರನ್ ಮತ್ತು ಸೂರ್ಯಕುಮಾರ್ ಯಾದವ್ ಅಜೇಯ 6 ರನ್ ಕಲೆ ಹಾಕಿದರು. ಈ ಮೂಲಕ ಟೀಮ್ ಇಂಡಿಯಾ 6.3 ಓವರ್‌ಗಳಲ್ಲಿ 89 ರನ್ ಬಾರಿಸುವ ಮೂಲಕ 8 ವಿಕೆಟ್‍ಗಳ ಬೃಹತ್ ಗೆಲುವನ್ನು ದಾಖಲಿಸಿದೆ. ಹಾಗೂ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನಕ್ಕೇರಿದೆ.

ರೋಹಿತ್ ಶರ್ಮಾ ಓಪನರ್ ಸ್ಥಾನದಿಂದ ಕೆಳಗಿಳಿಯಲು ಇವರೇ ಕಾರಣ; ಕೊನೆಗೂ ಹೊರಬಿತ್ತು ಸತ್ಯರೋಹಿತ್ ಶರ್ಮಾ ಓಪನರ್ ಸ್ಥಾನದಿಂದ ಕೆಳಗಿಳಿಯಲು ಇವರೇ ಕಾರಣ; ಕೊನೆಗೂ ಹೊರಬಿತ್ತು ಸತ್ಯ

ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಅರ್ಧಶತಕ ದಾಖಲಿಸುವುದರ ಮೂಲಕ ಕೆಲ ದಾಖಲೆಗಳನ್ನು ನಿರ್ಮಿಸಿದ್ದಾರೆ, ಇದರ ಕುರಿತ ಮಾಹಿತಿ ಹಾಗೂ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಸಾಧ್ಯತೆಗಳು ಹೇಗಿವೆ ಎಂಬುದರ ಕುರಿತ ಮಾಹಿತಿ ಈ ಕೆಳಕಂಡಂತಿವೆ ಓದಿ..

ಮುಂದಿನ ಪಂದ್ಯವನ್ನು ಇಷ್ಟೇ ದೊಡ್ಡ ಮಟ್ಟದಲ್ಲಿ ಗೆಲ್ಲಬೇಕು ಟೀಮ್ ಇಂಡಿಯಾ

ಮುಂದಿನ ಪಂದ್ಯವನ್ನು ಇಷ್ಟೇ ದೊಡ್ಡ ಮಟ್ಟದಲ್ಲಿ ಗೆಲ್ಲಬೇಕು ಟೀಮ್ ಇಂಡಿಯಾ

ಸದ್ಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಗೆದ್ದಿದ್ದು, ಇನ್ನೆರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಭಾರತ ತಂಡ ನಂತರದ ಪಂದ್ಯಗಳಲ್ಲಿ ಅಫ್ಘಾನಿಸ್ತಾನ ಮತ್ತು ಸ್ಕಾಟ್ಲೆಂಡ್ ವಿರುದ್ಧ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದೆ. ಅದರಲ್ಲಿಯೂ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಅಂತರದಲ್ಲಿ ಗೆಲುವು ಸಾಧಿಸಿದ್ದು, ಅಫ್ಘಾನಿಸ್ತಾನಕ್ಕಿಂತ ಹೆಚ್ಚಿನ ರನ್ ರೇಟ್ ಪಡೆದಿದೆ. ಹೀಗಾಗಿ ಅಫ್ಘಾನಿಸ್ತಾನವನ್ನು ಕೆಳತಳ್ಳಿ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನಕ್ಕೇರಿದ್ದು ಮುಂಬರುವ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಇದೇ ರೀತಿಯ ದೊಡ್ಡ ಗೆಲುವು ಸಾಧಿಸಿದರೆ ಸೆಮಿಫೈನಲ್ ಪ್ರವೇಶಿಸುವ ಅರ್ಹತೆ ದೊರೆತಾಗ ನೆಟ್ ರನ್ ರೇಟ್ ಸಹಾಯ ಮಾಡಲಿದೆ.

ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಸೋಲಲೇಬೇಕು

ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಸೋಲಲೇಬೇಕು

ಟೀಮ್ ಇಂಡಿಯಾ ಮುಂದಿನ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಾಕಾಗುವುದಿಲ್ಲ. ಅದರ ಜೊತೆಗೆ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೋಲಲೇಬೇಕಾಗಿದೆ. ಹೀಗೆ ಮುಂದಿನ ಪಂದ್ಯದಲ್ಲಿ ಭಾರತ ಗೆದ್ದು ನ್ಯೂಜಿಲೆಂಡ್ ಸೋತರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಹಾದಿಗಳು ಹುಟ್ಟಿಕೊಳ್ಳಲಿವೆ. ಒಂದುವೇಳೆ ನ್ಯೂಜಿಲೆಂಡ್ ಅಫ್ಘಾನಿಸ್ತಾನ ವಿರುದ್ಧ ಜಯ ಸಾಧಿಸಿದರೆ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶಿಸಲಿದ್ದು ಟೀಮ್ ಇಂಡಿಯಾ ಟೂರ್ನಿಯಿಂದ ಹೊರ ಬೀಳಲಿದೆ.

Team Indiaಗೆ ಸಿಕ್ಕೇಬಿಡ್ತು ಸೆಮಿಫೈನಲ್ ಗೆ ಎಂಟ್ರಿಯಾಗೋ ಅವಕಾಶ | Oneindia Kannada
ಕೆ ಎಲ್ ರಾಹುಲ್ ಅರ್ಧ ಶತಕದ ದಾಖಲೆ

ಕೆ ಎಲ್ ರಾಹುಲ್ ಅರ್ಧ ಶತಕದ ದಾಖಲೆ

ಕೆಎಲ್ ರಾಹುಲ್ 18 ಎಸೆತಗಳಲ್ಲಿ ಅರ್ಧಶತಕವನ್ನು ಬಾರಿಸಿದ್ದು ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಹಾಗೂ ಟಿ ಟ್ವೆಂಟಿ ವರ್ಲ್ಡ್ ಕಪ್ ಇತಿಹಾಸದಲ್ಲಿ ಅತಿ ವೇಗವಾಗಿ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕೆ ಎಲ್ ರಾಹುಲ್ ಮೂರನೇ ಸ್ಥಾನಕ್ಕೇರಿದ್ದಾರೆ.

Story first published: Friday, November 5, 2021, 22:33 [IST]
Other articles published on Nov 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X