ಭಾರತ vs ಪಾಕ್: ಸಂಕಷ್ಟದಲ್ಲಿದ್ದ ಭಾರತಕ್ಕೆ ಕೊಹ್ಲಿ ಆಸರೆ; ಅರ್ಧಶತಕದ ಜೊತೆ ಹಲವಾರು ದಾಖಲೆ ಸೃಷ್ಟಿ

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ( ಅಕ್ಟೋಬರ್ 24 ) ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸುತ್ತಿವೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕ ಆಟಗಾರರಾದ ಕೆ ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಬೇಗನೇ ವಿಕೆಟ್ ಕಳೆದುಕೊಳ್ಳುವ ಮೂಲಕ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತು. ನಂತರ ನಾಲ್ಕನೇ ಕ್ರಮಾಂಕದಲ್ಲಿ ಬಂದ ಸೂರ್ಯಕುಮಾರ್ ಯಾದವ್ ಕೂಡಾ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು.

ಭಾರತ vs ಪಾಕ್: ಭಾರತ ಈ ಒಂದು ತಪ್ಪನ್ನೇನಾದರೂ ಮಾಡಿದರೆ ಪಾಕಿಸ್ತಾನಕ್ಕೆ ಗೆಲುವು: ಕಪಿಲ್ ದೇವ್ಭಾರತ vs ಪಾಕ್: ಭಾರತ ಈ ಒಂದು ತಪ್ಪನ್ನೇನಾದರೂ ಮಾಡಿದರೆ ಪಾಕಿಸ್ತಾನಕ್ಕೆ ಗೆಲುವು: ಕಪಿಲ್ ದೇವ್

ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಆಪತ್ಬಾಂಧವನಾಗಿ ನಿಂತದ್ದು ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್. ರಿಷಭ್ ಪಂತ್ ಮತ್ತು ವಿರಾಟ್ ಕೊಹ್ಲಿ 53 ರನ್‌ಗಳ ಜತೆಯಾಟವನ್ನು ಆಡುವುದರ ಮೂಲಕ ಸಂಕಷ್ಟದಲ್ಲಿದ್ದ ಭಾರತಕ್ಕೆ ಆಸರೆಯಾದರು. ಆದರೆ ರಿಷಭ್ ಪಂತ್ 39 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ, ತಮ್ಮ ಆಟವನ್ನು ಮುಂದುವರಿಸಿದ ನಾಯಕ ವಿರಾಟ್ ಕೊಹ್ಲಿ 57 ರನ್ ಬಾರಿಸಿದರು.

ಭಾರತ vs ಪಾಕ್: ಭಾರತ vs ಪಾಕ್: "ಪಾಕಿಸ್ತಾನ ಗೆಲ್ಲಬೇಕೆಂದರೆ ಈ ಒಬ್ಬ ಆಟಗಾರನನ್ನು ತಂಡದಿಂದ ಹೊರಗಿಡಲೇಬೇಕು!"

45 ಎಸೆತಗಳಿಗೆ 50 ರನ್ ಪೂರೈಸಿದ ವಿರಾಟ್ ಕೊಹ್ಲಿ ಈ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ಪರ ಜವಾಬ್ದಾರಿಯುತ ಆಟವನ್ನು ಆಡಿದ್ದು ಮಾತ್ರವಲ್ಲದೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಅರ್ಧಶತಕ ಬಾರಿಸಿದ ಮೊದಲನೇ ಭಾರತೀಯ ನಾಯಕ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಅತಿಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೀಗೆ ಪಾಕಿಸ್ತಾನ ವಿರುದ್ಧ ನಡೆದ ಈ ಪಂದ್ಯದಲ್ಲಿ ಅರ್ಧಶತಕ ಭಾರಿಸುವುದರ ಮೂಲಕ ವಿರಾಟ್ ಕೊಹ್ಲಿ ನಿರ್ಮಿಸಿರುವ ಹಲವಾರು ದಾಖಲೆಗಳ ಮತ್ತು ವಿಶೇಷ ಸಾಧನೆ ಹಾಗೂ ಉತ್ತಮ ಆಟಗಳ ಪಟ್ಟಿ ಈ ಕೆಳಕಂಡಂತಿದೆ.

ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ಅರ್ಧಶತಕ ಬಾರಿಸಿದ ಆಟಗಾರ

ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ಅರ್ಧಶತಕ ಬಾರಿಸಿದ ಆಟಗಾರ

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾದ ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಸಹ ಮಾಡಿದ್ದಾರೆ. ಈ ಹಿಂದೆ ಈ ದಾಖಲೆಯನ್ನು 9 ಅರ್ಧಶತಕಗಳನ್ನು ಬಾರಿಸಿದ್ದ ಕ್ರಿಸ್ ಗೇಲ್ ಜೊತೆ ಹಂಚಿಕೊಂಡಿದ್ದ ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್‌ನ ತಮ್ಮ ಹತ್ತನೇ ಅರ್ಧಶತಕವನ್ನು ಬಾರಿಸುವುದರ ಮೂಲಕ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್‌ಗಳಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿರುವ ಟಾಪ್ 3 ಆಟಗಾರರು

1. ವಿರಾಟ್ ಕೊಹ್ಲಿ (ಭಾರತ): 10 ಅರ್ಧಶತಕಗಳು

2. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್): 9 ಅರ್ಧಶತಕಗಳು

3. ಮಹೇಲಾ ಜಯವರ್ಧನೆ ( ಶ್ರೀಲಂಕಾ ): 7 ಅರ್ಧಶತಕಗಳು

ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ನಾಯಕ

ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ನಾಯಕ

ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡ ನಂತರ ಆಯೋಜನೆಯಾಗಿರುವ ಮೊದಲನೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಇದಾಗಿದೆ. ಹೀಗಾಗಿ ವಿರಾಟ್ ಕೊಹ್ಲಿ ಇಂದು ಅರ್ಧಶತಕ ಬಾರಿಸುವುದರ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ನಾಯಕ ಎನಿಸಿಕೊಂಡಿದ್ದಾರೆ. ಈ ಹಿಂದೆ ಎಂ ಎಸ್ ಧೋನಿ ಟೀಮ್ ಇಂಡಿಯಾದ ನಾಯಕನಾಗಿ ಹಲವು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳನ್ನು ಆಡಿದರೂ ಸಹ ಯಾವುದೇ ಟಿ ಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿಯೂ ಅರ್ಧಶತಕವನ್ನು ಬಾರಿಸಿರಲಿಲ್ಲ.

ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ಕೊನೆಯ 6 ಅರ್ಧಶತಕಗಳೆಲ್ಲಾ ಕೊಹ್ಲಿಯದ್ದೇ!

ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ಕೊನೆಯ 6 ಅರ್ಧಶತಕಗಳೆಲ್ಲಾ ಕೊಹ್ಲಿಯದ್ದೇ!

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸುವುದರ ಮೂಲಕ ವಿರಾಟ್ ಕೊಹ್ಲಿ ವಿಶೇಷವಾದ ಮೈಲಿಗಲ್ಲನ್ನು ನಿರ್ಮಿಸಿದ್ದಾರೆ. ಹೌದು, ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯಗಳಲ್ಲಿ ಭಾರತದ ಪರ ಕಳೆದ ಎಲ್ಲಾ 6 ಅರ್ಧಶತಕಗಳನ್ನು ಬಾರಿಸಿರುವ ಆಟಗಾರ ಇದೇ ವಿರಾಟ್ ಕೊಹ್ಲಿ. ಹೌದು ವಿರಾಟ್ ಕೊಹ್ಲಿ ಹೊರತುಪಡಿಸಿ ಬೇರೆ ಯಾವುದೇ ಆಟಗಾರರೂ ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಹೀಗಾಗಿ ಕಳೆದ 6 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿರುವ ಭಾರತದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.

ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಭಾರತ ತಂಡದಿಂದ ಬಂದಿರುವ ಕೊನೆಯ 6 ಅರ್ಧಶತಕಗಳ ಪಟ್ಟಿ

ವಿರಾಟ್ ಕೊಹ್ಲಿ 57 vs ಪಾಕಿಸ್ತಾನ ( ಅಕ್ಟೋಬರ್ 24, 2021 )

ವಿರಾಟ್ ಕೊಹ್ಲಿ 89* vs ವೆಸ್ಟ್ ಇಂಡೀಸ್

ವಿರಾಟ್ ಕೊಹ್ಲಿ 82* vs ಆಸ್ಟ್ರೇಲಿಯಾ

ವಿರಾಟ್ ಕೊಹ್ಲಿ 55* vs ಪಾಕಿಸ್ತಾನ

ವಿರಾಟ್ ಕೊಹ್ಲಿ 77 vs ಶ್ರೀಲಂಕಾ

ವಿರಾಟ್ ಕೊಹ್ಲಿ 72* vs ಸೌತ್ಆಫ್ರಿಕಾ

ಗೆದ್ದ ಮೇಲೆ ಬಾಬರ್ ಅಜಮ್ ಭಾರತದ ವಿರುದ್ಧ ಕೊಟ್ರು ಶಾಕಿಂಗ್ ಹೇಳಿಕೆ | Oneindia Kannada

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, October 24, 2021, 21:19 [IST]
Other articles published on Oct 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X