ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್; ಎಷ್ಟು ರನ್ ನೀಡಿದ್ರು ಗೊತ್ತಾ?

T20 World Cup 2021: Virat Kohli bowls 2 overs in India vs Australia Warm Up Match

ಕಳೆದ ಭಾನುವಾರದಿಂದ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಚಾಲನೆಯನ್ನು ಪಡೆದುಕೊಂಡಿದೆ.

ಕೊಹ್ಲಿ ನಂತರ ಭಾರತ ಟಿ20 ತಂಡದ ನಾಯಕನಾಗಲು ಈತನನ್ನು ಬಿಟ್ಟರೆ ಇನ್ಯಾರಿಗೆ ಸಾಧ್ಯ!: ಬಿಸಿಸಿಐ ಅಧಿಕಾರಿಕೊಹ್ಲಿ ನಂತರ ಭಾರತ ಟಿ20 ತಂಡದ ನಾಯಕನಾಗಲು ಈತನನ್ನು ಬಿಟ್ಟರೆ ಇನ್ಯಾರಿಗೆ ಸಾಧ್ಯ!: ಬಿಸಿಸಿಐ ಅಧಿಕಾರಿ

ಈ ಅರ್ಹತಾ ಸುತ್ತಿನ ಪಂದ್ಯಗಳ ಜೊತೆಗೆ ವಿವಿಧ ತಂಡಗಳು ಅಭ್ಯಾಸ ಪಂದ್ಯಗಳಲ್ಲಿಯೂ ಕಣಕ್ಕಿಳಿದಿವೆ. ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಅಭ್ಯಾಸ ಪಂದ್ಯವೊಂದು ನಡೆದಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಎದುರಾಳಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತ್ತು. ಇನ್ನು ಈ ಪಂದ್ಯದ ನಂತರ ಇಂದು ( ಅಕ್ಟೋಬರ್ 20 ) ಆಸ್ಟ್ರೇಲಿಯಾ ವಿರುದ್ಧವೂ ಕೂಡ ಭಾರತ ಅಭ್ಯಾಸ ಪಂದ್ಯವನ್ನಾಡುತ್ತಿದೆ.

ದುಬೈನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬದಲಾಗಿ ರೋಹಿತ್ ಶರ್ಮಾ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು ಮತ್ತು ತಂಡದಿಂದ ವಿಶ್ರಾಂತಿಗೆಂದು ಹೊರಗುಳಿದಿರುವ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ವೇಳೆ ಭಾರತ ತಂಡದ ಪರ ಫೀಲ್ಡಿಂಗ್ ಮಾಡಲು ಕಣಕ್ಕಿಳಿದಿದ್ದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ 2 ಓವರ್‌ ಬೌಲಿಂಗ್ ಕೂಡಾ ಮಾಡುವುದರ ಮೂಲಕ ಕ್ರಿಕೆಟ್ ಅಭಿಮಾನಿಗಳ ಗಮನವನ್ನು ತನ್ನತ್ತ ಸೆಳೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಈ ಅಭ್ಯಾಸ ಪಂದ್ಯದಲ್ಲಿ 2 ಓವರ್ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ ಮೊದಲನೇ ಓವರ್‌ನಲ್ಲಿ ಕೇವಲ 4 ರನ್ ನೀಡಿದರು ಮತ್ತು ದ್ವಿತೀಯ ಓವರ್‌ನಲ್ಲಿ 8 ರನ್ ನೀಡಿದರು. ಹೀಗೆ ಒಟ್ಟು 2 ಓವರ್‌ಗಳಲ್ಲಿ 12 ರನ್ ನೀಡಿದ ವಿರಾಟ್ ಕೊಹ್ಲಿ ಯಾವುದೇ ವಿಕೆಟ್ ಪಡೆಯದೇ 6 ಎಕಾನಮಿ ದರದಲ್ಲಿ ಬೌಲಿಂಗ್ ಮಾಡಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಅಭ್ಯಾಸ ಪಂದ್ಯವೊಂದು ನಡೆದಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಎದುರಾಳಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತ್ತು. ಇನ್ನು ಈ ಪಂದ್ಯದ ನಂತರ ಇಂದು ( ಅಕ್ಟೋಬರ್ 20 ) ಆಸ್ಟ್ರೇಲಿಯಾ ವಿರುದ್ಧವೂ ಕೂಡ ಭಾರತ ಅಭ್ಯಾಸ ಪಂದ್ಯವನ್ನಾಡಿದೆ.

ಈ ಕಾರಣದಿಂದಲೇ ಭಾರತವನ್ನು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಇದುವರೆಗೂ ಸೋಲಿಸಲು ಆಗಿಲ್ಲ: ಕಪಿಲ್ ದೇವ್ಈ ಕಾರಣದಿಂದಲೇ ಭಾರತವನ್ನು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಇದುವರೆಗೂ ಸೋಲಿಸಲು ಆಗಿಲ್ಲ: ಕಪಿಲ್ ದೇವ್

ದುಬೈನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿ ಕಾರಣದಿಂದಾಗಿ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದು ರೋಹಿತ್ ಶರ್ಮಾ ಈ ಪಂದ್ಯದ ನಾಯಕತ್ವವನ್ನು ವಹಿಸಿಕೊಂಡಿದ್ದರು. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯದ ನಾಯಕ ಆ್ಯರೋನ್ ಫಿಂಚ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಾರ್ಕಸ್ ಸ್ಟಾಯಿನಿಸ್ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ಇನ್ನು ಆಸ್ಟ್ರೇಲಿಯಾ ನೀಡಿದ 153 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 9 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿದೆ. 17.5 ಓವರ್‌ಗಳಲ್ಲಿ 153 ರನ್ ಬಾರಿಸಿದ ಟೀಮ್ ಇಂಡಿಯಾ 9 ವಿಕೆಟ್‍ಗಳ ಅಮೋಘ ಜಯವನ್ನು ಕಂಡಿದೆ.

ಟೀಮ್ ಇಂಡಿಯಾ ಬ್ಯಾಟಿಂಗ್ ಹೀಗೇ ಇದ್ರೆ ಈ ಸಲ T20 ವಿಶ್ವಕಪ್ ಟ್ರೋಫಿ ನಮ್ದೇ... | Oneindia Kannada

ಆಸ್ಟ್ರೇಲಿಯಾ ವಿರುದ್ಧ ನಡೆದ ಈ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ಆಕರ್ಷಕ ಅರ್ಧ ಶತಕ ಸಿಡಿಸುವುದರ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. 41 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 60 ರನ್ ಚಚ್ಚುವುದರ ಮೂಲಕ 5 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದರು. ಇನ್ನುಳಿದಂತೆ ಕೆಎಲ್ ರಾಹುಲ್ 39 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ ಅಜೇಯ 38 ಮತ್ತು ಹಾರ್ದಿಕ್ ಪಾಂಡ್ಯ ಅಜೇಯ 14 ರನ್ ಗಳಿಸುವುದರ ಮೂಲಕ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.

Story first published: Thursday, October 21, 2021, 9:46 [IST]
Other articles published on Oct 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X