ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಬಹು ನಿರೀಕ್ಷಿತ ಭಾರತ vs ಪಾಕಿಸ್ತಾನ ಪಂದ್ಯ ರದ್ದು?; ಸ್ಪಷ್ಟನೆ ನೀಡಿದ ಬಿಸಿಸಿಐ

T20 World Cup 2021: We cant cancel any matches which are organised by ICC says Rajeev Shukla

ಕಳೆದ ಭಾನುವಾರದಿಂದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಿದ್ದು, ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23ರ ಶನಿವಾರದಿಂದ ಆರಂಭವಾಗುತ್ತಿವೆ. ಹೀಗೆ ಸೂಪರ್ 12 ಹಂತದ ಪಂದ್ಯಗಳು ಸನಿಹವಾಗುತ್ತಿದ್ದಂತೆ ಟೂರ್ನಿಯ ಕುರಿತಾಗಿ ಸಾಕಷ್ಟು ದೊಡ್ಡ ಮಟ್ಟದ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.

ಮುಂದಿನ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌‌ಗೆ ಎದುರಾಗಲಿರುವ ಸಂಕಷ್ಟವನ್ನು ಬಿಚ್ಚಿಟ್ಟ ರೋಹಿತ್ ಶರ್ಮಾಮುಂದಿನ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌‌ಗೆ ಎದುರಾಗಲಿರುವ ಸಂಕಷ್ಟವನ್ನು ಬಿಚ್ಚಿಟ್ಟ ರೋಹಿತ್ ಶರ್ಮಾ

ಅದರಲ್ಲಿಯೂ ಅಕ್ಟೋಬರ್ 24ರ ಭಾನುವಾರದಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೆಜ್ ಪಂದ್ಯ ಸಾಕಷ್ಟು ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ ಎಂದರೆ ತಪ್ಪಾಗಲಾರದು. ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸಾಮಾನ್ಯ ಸರಣಿ ನಡೆಯುತ್ತಿದೆ ಎಂದರೆ ಸಾಕು ದೊಡ್ಡ ಮಟ್ಟದ ಸದ್ದು ನಿರ್ಮಾಣವಾಗಿ ಬಿಡುತ್ತದೆ. ಹೀಗಿರುವಾಗ ಈ ಎರಡೂ ತಂಡಗಳ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದೆ ಎಂದರೆ ಅದರ ಪ್ರಭಾವ ಕ್ರಿಕೆಟ್ ಜಗತ್ತಿನಲ್ಲಿ ಸಾಮಾನ್ಯವಾಗಿರುವುದಿಲ್ಲ. ಈ ಎರಡೂ ತಂಡಗಳ ನಡುವೆ ನಡೆಯಲಿರುವ ಪಂದ್ಯವನ್ನು ವೀಕ್ಷಿಸುವುದಕ್ಕಾಗಿ ಕೆಲಸಗಳನ್ನು ಬದಿಗಿಟ್ಟು ಟಿವಿ ಮುಂದೆ ಕೂರುವ ಕೋಟ್ಯಂತರ ವೀಕ್ಷಕರಿದ್ದಾರೆ. ಕೇವಲ ಭಾರತ ಮತ್ತು ಪಾಕಿಸ್ತಾನ ದೇಶಗಳ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ ವಿಶ್ವದಾದ್ಯಂತ ಇರುವ ಕ್ರಿಕೆಟ್ ವೀಕ್ಷಕರು ಈ ಪಂದ್ಯವನ್ನು ತಪ್ಪದೇ ವೀಕ್ಷಿಸುತ್ತಾರೆ.

ಇಷ್ಟು ದೊಡ್ಡ ಮಟ್ಟದಲ್ಲಿ ಕ್ರೇಜ್ ಮತ್ತು ವೀಕ್ಷಕ ವರ್ಗವನ್ನು ಹೊಂದಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಅಕ್ಟೋಬರ್ 24ರಂದು ನಡೆಯಬೇಕಾಗಿರುವ ಪಂದ್ಯದ ವಿರುದ್ಧ ಇದೀಗ ಸಾಕಷ್ಟು ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿದೆ. ಟೀಮ್ ಇಂಡಿಯಾ ಯಾವುದೇ ಕಾರಣಕ್ಕೂ ಪಾಕಿಸ್ತಾನದ ವಿರುದ್ಧ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಯೋಜಿಸಿರುವ ಪಂದ್ಯದಲ್ಲಿ ಭಾಗವಹಿಸಬಾರದು ಎಂದು ಭಾರತದ ಹಲವಾರು ಸಂಘಟನೆಗಳು ಒತ್ತಾಯಿಸಿದ್ದು ಇದೀಗ ಈ ಕುರಿತಾಗಿ ಬಿಸಿಸಿಐನ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿದ್ದು ಪಂದ್ಯ ನಡೆಯುವುದರ ಕುರಿತು ಈ ಕೆಳಕಂಡಂತೆ ಸ್ಪಷ್ಟನೆ ನೀಡಿದ್ದಾರೆ.

ಐಸಿಸಿ ಆಯೋಜಿಸಿರುವ ಪಂದ್ಯವನ್ನು ರದ್ದು ಮಾಡಲಾಗುವುದಿಲ್ಲ

ಐಸಿಸಿ ಆಯೋಜಿಸಿರುವ ಪಂದ್ಯವನ್ನು ರದ್ದು ಮಾಡಲಾಗುವುದಿಲ್ಲ

ಅಕ್ಟೋಬರ್ 24ರಂದು ನಡೆಯಬೇಕಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ ಟ್ವೆಂಟಿ ವಿಶ್ವಕಪ್ ಪಂದ್ಯವನ್ನು ರದ್ದು ಮಾಡಬೇಕೆಂದು ಒತ್ತಾಯ ಮಾಡುತ್ತಿರುವವರಿಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ "ಐಸಿಸಿ ಆಯೋಜಿಸಿರುವ ಪಂದ್ಯಗಳನ್ನು ನಾವು ಯಾವುದೇ ಕಾರಣಕ್ಕೂ ಆಡುವುದಿಲ್ಲ ಎಂದು ವಿರೋಧಿಸಲು ಸಾಧ್ಯವಿಲ್ಲ. ಪ್ರತಿಯೊಂದು ತಂಡವೂ ಕೂಡ ಐಸಿಸಿ ನಿಯಮದಂತೆ ಪಂದ್ಯವನ್ನು ಆಡಿಯೇ ತೀರಬೇಕಾಗುತ್ತದೆ" ಎಂದಿದ್ದಾರೆ.

ಪಂದ್ಯ ರದ್ದಾಗಬೇಕು ಎನ್ನುವುದರ ಹಿಂದಿನ ಕಾರಣವೇನು?

ಪಂದ್ಯ ರದ್ದಾಗಬೇಕು ಎನ್ನುವುದರ ಹಿಂದಿನ ಕಾರಣವೇನು?

ಜಮ್ಮು ಕಾಶ್ಮೀರದ ಕಾಶ್ಮೀರ ಕಣಿವೆಯಲ್ಲಿ ಕಳೆದೆರಡು ದಿನಗಳಿಂದ ಉಗ್ರರ ಹಿಂಸಾಚಾರ ನಡೆಯುತ್ತಿದೆ. ಈಗಾಗಲೇ ಕೆಲ ಸೈನಿಕರು ಮತ್ತು ಜನಸಾಮಾನ್ಯರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಹೀಗಾಗಿ ಭಾರತದ ಸೈನಿಕರನ್ನು ಕೊಂದಂತಹ ದೇಶದ ವಿರುದ್ಧ ಭಾರತ ಯಾವುದೇ ಕಾರಣಕ್ಕೂ ಕ್ರಿಕೆಟ್ ಆಡಬಾರದು ಎಂದು ಹಲವಾರು ದೇಶ ಪರ ಸಂಘಟನೆಗಳು ಬಿಸಿಸಿಐಗೆ ಒತ್ತಾಯ ಮಾಡಿವೆ. ಆದರೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ "ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿರುವವರಿಗೆ ಸಂತಾಪ ಸೂಚಿಸುತ್ತೇನೆ. ಈ ರೀತಿಯ ದಾಳಿ ಮಾಡಿರುವ ಉಗ್ರ ಸಂಘಟನೆಗಳು ಸರಿಯಾದ ಪಾಠ ಕಲಿಯಲಿವೆ. ಆದರೆ ಕ್ರಿಕೆಟ್ ವಿಚಾರದಲ್ಲಿ ಪಂದ್ಯವನ್ನಾಡದೇ ಹಿಂದೆ ಸರಿಯುವುದು ಸಾಧ್ಯವಿಲ್ಲ" ಎಂದು ಹೇಳಿಕೆ ನೀಡಿದ್ದಾರೆ.

ಕ್ಯಾಪ್ಟನ್ ಕೂಲ್ ಗರಂ ಆದ ಕ್ಷಣ | Oneindia Kannada
ಭಾರತ ಮತ್ತು ಪಾಕಿಸ್ತಾನ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ?


ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸೂಪರ್ 12 ಹಂತದ ಪಂದ್ಯ ಅಕ್ಟೋಬರ್ 24ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

Story first published: Wednesday, October 20, 2021, 10:20 [IST]
Other articles published on Oct 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X