ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್ ವಿರುದ್ಧ ಸೋತು ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದ ಬಾಂಗ್ಲಾದೇಶ

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 23ನೇ ಪಂದ್ಯದಲ್ಲಿ ಇಂದು ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಿದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅತ್ತ ಟಾಸ್ ಸೋತ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು.
ಹೀಗೆ ಬಾಂಗ್ಲಾದೇಶದ ಉತ್ತಮ ಬೌಲಿಂಗ್ ದಾಳಿ ಎದುರು ವೆಸ್ಟ್ ಇಂಡೀಸ್ 143 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ಬಾಂಗ್ಲಾದೇಶ ವಿಫಲವಾಗಿದ್ದು ಅಂತಿಮವಾಗಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. ಈ ಮೂಲಕ ವೆಸ್ಟ್ ಇಂಡೀಸ್ ಬಾಂಗ್ಲಾದೇಶದ ವಿರುದ್ಧ 3 ರನ್‌ಗಳ ರೋಚಕ ಗೆಲುವನ್ನು ದಾಖಲಿಸಿದೆ. ಇದು ವೆಸ್ಟ್ ಇಂಡೀಸ್ ತಂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ದಾಖಲಿಸಿರುವ ಚೊಚ್ಚಲ ಗೆಲುವಾಗಿದೆ. ಅತ್ತ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿರುವ ಬಾಂಗ್ಲಾದೇಶ ಸೆಮಿಫೈನಲ್ಸ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications