Ind vs Eng : ಮತ್ತೆ ನೆರವಾದ ಕೊಹ್ಲಿ, ಸ್ಪೋಟಿಸಿದ ಹಾರ್ದಿಕ್: ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಭಾರತ

ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸೆಣೆಸಾಡುತ್ತಿದ್ದು ಭಾರತ ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದೆ. ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಅವರ ಭರ್ಜರಿ ಬ್ಯಾಟಿಂಗ್‌ನ ನೆರವಿನಿಂದಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡಕ್ಕೆ 169 ರನ್‌ಗಳ ಸವಾಲಿನ ಗುರಿ ನೀಡಲು ಯಶಸ್ವಿಯಾಗಿದೆ.
ಟೀಮ್ ಇಂಡಿಯಾ ಪರವಾಗಿ ಮತ್ತೆ ಆರಂಭಿಕರಾದ ಕೆಎಲ್ ರಾಹುಲ್ ವೈಫಲ್ಯ ಅನುಭವಿಸಿದರೆ ವಿರಾಟ್ ಕೊಹ್ಲಿ ಮತ್ತೊಮ್ಮೆ ತಂಡಕ್ಕೆ ನೆರವಾಗಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ನಾಲ್ಕನೇ ಅರ್ಧ ಶತಕ ಸಿಡಿಸಿರುವ ವಿರಾಟ್ ಕೊಹ್ಲಿ ತಂಡವನ್ನು ಆಪತ್ತಿನಿಂದ ಕಾಪಾಡಿದರು. ಬಳಿಕ ಹಾರ್ದಿಕ್ ಪಾಂಡ್ಯ ಕೂಡ ವಿರಾಟ್ ಕೊಹ್ಲಿ ಜೊತೆಗೂಡಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ತಂಡದ ಮೊತ್ತ 170ರ ಸನಿಹಕ್ಕೆ ತಲುಪಲು ಕಾರಣವಾದರು.
ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಕೇವಲ 5 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ನಂತರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ತಂಡವನ್ನು ಮೇಲಕ್ಕೆತ್ತುವ ಪ್ರಯತ್ನ ನಡೆಸಿದರಾದರೂ ರೋಹಿತ್ ಶರ್ಮಾ 27 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಇನ್ನು ಈ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾಋ್ ಈ ಪಂದ್ಯದಲ್ಲಿಯೂ ಅಬ್ಬರಿಸುವ ನಿರೀಕ್ಷೆ ಮೂಡಿಸಿದರಾದರೂ ಅವರ ಆಟ 14 ರನ್‌ಗಳಿಗೆ ಅಂತ್ಯವಾಯಿತು.
ಆದರೆ ಬಳಿಕ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಜೋಡಿ ಅಮೋಘ ಜೊತೆಯಾಟದಲ್ಲಿ ಭಾಗಿಯಾದರು. ವಿರಾಟ್ ಕೊಹ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿ ಈ ಪಂದ್ಯದಲ್ಲಿಯೂ ಅರ್ಧ ಶತಕ ಸಿಡಿಸಿದರು. 40 ಎಸೆತಗಳನ್ನು ಎದುರಿಸಿದ ಕೊಹ್ಲಿ 50 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಮತ್ತೊಂದು ತುದಿಯಲ್ಲಿ ಹಾರ್ದಿಕ್ ಪಾಂಡ್ಯ ಅಬ್ಬರದ ಪ್ರದರ್ಶನ ಮುಂದುವರಿದಿತ್ತು. ಕೇವಲ 33 ಎಸೆತಗಳಲ್ಲಿ 63 ರನ್ ಬಾರಿಸಿದ ಹಾರ್ದಿಕ್ ಪಾಂಡ್ಯ 190.91ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದರು. ಈ ಇನ್ನಿಂಗ್ಸ್‌ನಲ್ಲಿ ಐದು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಸಿಡಿಸಿದ್ದಾರೆ ಪಾಂಡ್ಯ. ಈ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 168 ರೆನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ಡಬ್ಲ್ಯೂ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್
ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications