ಟಿ20 ವಿಶ್ವಕಪ್, ಸೆಮಿಫೈನಲ್: ಭಾರತ vs ಇಂಗ್ಲೆಂಡ್: Live ಸ್ಕೋರ್, ಪ್ಲೇಯಿಂಗ್ XI

ಟಿ20 ವಿಶ್ವಕಪ್‌ನಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಅಡಿಲೇಡ್‌ನಲ್ಲಿ ಈ ಪಂದ್ಯ ನಡೆಯುತ್ತಿದ್ದು ಯಾರಿಗೆ ಮೇಲುಗೈ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದೆ. ಗಾಯದ ಕಾರಣದಿಂದಾಗಿ ಡೇವಿಡ್ ಮಲನ್ ಹಾಗೂ ಮಾರ್ಕ್ ವುಡ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಕ್ರಿಸ್ ಜೋರ್ಡನ್ ಹಾಗೂ ಫಿಲಿಪ್ ಸಾಲ್ಟ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಹಾಗಾಗಿ ಮತ್ತೆ ರಿಷಭ್ ಪಂತ್ ಅವಕಾಶ ಪಡೆದುಕೊಂಡಿದ್ದು ದಿನೇಶ್ ಕಾರ್ತಿಕ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಫೈನಲ್ ಮೇಲೆ ಕಣ್ಣು
ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಈಗಾಗಲೇ ಮೇಲುಗೈ ಸಾಧಿಸಿದ್ದು ಫೈನಲ್‌ಗೆ ಪ್ರವೇಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬುಧವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ದ ಅದ್ಭುತ ಪ್ರದರ್ಶನ ನೀಡಿದ ಪಾಕಿಸ್ತಾನ ಪಂದ್ಯದಲ್ಲಿ ಸಂಪೂರ್ಣ ಮೇಲಗೈ ಸಾಧಿಸಿತು. ಈ ಮೂಲಕ ಭರ್ಜರಿ ಗೆಲುವು ಸಾಧಿಸಿದ ಪಾಕಿಸ್ತಾನ 12 ವರ್ಷಗಳ ಬಳಿಕ ಟಿ20 ವಿಶ್ವಕಪ್‌ನಲ್ಲಿ ಫೈನಲ್ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ. ಇಂದು ನಡೆಯುವ ಇಂಗ್ಲೆಂಡ್ ಹಾಗೂ ಭಾರತ ವಿರುದ್ಧದ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶಿಸಿ ಚಾಂಪಿಯನ್ ಪಟ್ಟಕ್ಕಾಗಿ ಪಾಕಿಸ್ತಾನದ ವಿರುದ್ಧ ಕಾದಾಡಲಿದೆ. ಫೈನಲ್ ಪಂದ್ಯ ಮುಂದಿನ ಭಾನುವಾರ ಮೆಲ್ಬರ್ನ್‌ನಲ್ಲಿ ಆಯೋಜನೆಯಾಗಲಿದೆ.

ಟೀಮ್ ಇಂಡಿಯಾ ಆಡುವ ಬಳಗ
ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ಡಬ್ಲ್ಯೂ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications