New Zealand vs Afghanistan : ಕಿವೀಸ್ ಪಡೆಗೆ ಶಾಕ್ ನೀಡುತ್ತಾ ಅಫ್ಘಾನಿಸ್ತಾನ, ಸಂಭಾವ್ಯ ಆಡುವ ಬಳಗ, ಪಿಚ್ ವರದಿ

ಟಿ20 ವರ್ಲ್ಡ್ ಕಪ್ 2022 ರ 21ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಅಫ್ಘಾನಿಸ್ತಾನ ಮುಖಾಮುಖಿಯಾಗಲಿವೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಬುಧವಾರ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ.
2022 ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ಆಸ್ಟ್ರೇಲಿಯಾವನ್ನು 89 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಆರಂಭಿಕ ಬ್ಯಾರ್ ಗಳಾದ ಫಿನ್ ಅಲೆನ್ 16 ಎಸೆತಗಳಲ್ಲಿ 42 ರನ್ ಮತ್ತು ಡೆವೊನ್ ಕಾನ್ವೇ 58 ಎಸೆತಗಳಲ್ಲಿ ಅಜೇಯ 92 ರನ್‌ಗಳ ಸಹಾಯದಿಂದ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು.
ನಂತರ ಆಸ್ಟ್ರೇಲಿಯಾದ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕುವಲ್ಲಿ ನ್ಯೂಜಿಲೆಂಡ್ ಬೌಲರ್ ಗಳು ಯಶಸ್ವಿಯಾದರು. ಟಿಮ್ ಸೌಥಿ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ ಮೂರು ವಿಕೆಟ್‌ಗಳನ್ನು ಪಡೆದರು. ಅಂತಿಮವಾಗಿ 111 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಆಸ್ಟ್ರೇಲಿಯಾವನ್ನು 89 ರನ್‌ಗಳಿಂದ ಸೋಲಿಸಿತು. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕೂಡ ನ್ಯೂಜಿಲೆಂಡ್ ತಮ್ಮ ಉತ್ತಮ ಆಟ ಪ್ರದರ್ಶಿಸುವ ಉತ್ಸಾಹದಲ್ಲಿದ್ದಾರೆ.

ಮೊದಲ ಗೆಲುವಿನ ಹುಡುಕಾಟದಲ್ಲಿ ಅಫ್ಘಾನಿಸ್ತಾನ
ಅಫ್ಘಾನಿಸ್ತಾನ ಈ ಬಾರಿ ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಆರಂಭಿಕ ಪಂದ್ಯದಲ್ಲಿ ಅವರು ಇಂಗ್ಲೆಂಡ್ ವಿರುದ್ಧ ಸೋಲನುಭವಿಸಿತು. ಅಫ್ಘಾನಿಸ್ತಾನದ ಬ್ಯಾಟರ್‌ಗಳು ಪರಿಸ್ಥಿತಿಗೆ ಹೊಂದಿಕೊಳ್ಳಲು ವಿಫಲರಾದರು. ಇಂಗ್ಲೆಂಡ್ ವಿರುದ್ಧ 19.4 ಓವರ್‌ಗಳಲ್ಲಿ 112 ರನ್‌ಗಳಿಗೆ ಆಲೌಟಾಯಿತು.
ಅಫ್ಘಾನಿಸ್ತಾನದ ಪರವಾಗಿ ಇಬ್ರಾಹಿಂ ಝದ್ರಾನ್ ಮಾತ್ರ 32 ರನ್ ಗಳಿಸಿದರು. ಬೌಲರ್ ಇಂಗ್ಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದರು. ಪ್ರಮುಖ 5 ವಿಕೆಟ್‌ಗಳನ್ನು ಪಡೆದರು. ಅಂತಿಮ ಓವರ್ ನಲ್ಲಿ ಇಂಗ್ಲೆಂಡ್ ಗುರಿಯನ್ನು ಮುಟ್ಟಿತು. ಬುಧವಾರ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಬೇಕಾದರೆ, ಬ್ಯಾಟಿಂಗ್, ಬೌಲಿಂಗ್ ವಿಭಾಗದಿಂದ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ.
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ: ತಂಡಕ್ಕೆ ಮರಳಿದ ಸ್ಟಾರ್ ಆಟಗಾರ

ಬೌಲರ್ ಗಳಿಗೆ ಸಹಾಯಕವಾದ ಪಿಚ್
ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಮೆಲ್ಬೋರ್ನ್ ಪಿಚ್ ವೇಗಿಗಳಿಗೆ ಸಹಾಯಕವಾಗಿತ್ತು. ಆರಂಭದಲ್ಲಿ ಚೆಂಡು ಸ್ವಿಂಗ್ ಆಗುವುದರಿಂದ ಬ್ಯಾಟರ್ ಗಳು ರನ್ ಗಳಿಸಲು ಪರದಾಡುತ್ತಾರೆ. ಬ್ಯಾಟರ್ ಕೆಲವು ಎಸೆತಗಳನ್ನು ಎದುರಿಸದ ನಂತರ ರನ್ ಗಳಿಸಲು ಸುಲಭವಾಗುತ್ತದೆ. ಪಂದ್ಯದ ಉದ್ದಕ್ಕೂ ಪಿಚ್ ಒಂದೇ ರೀತಿ ವರ್ತಿಸುವ ಸಾಧ್ಯತೆ ಇದೆ.
ನ್ಯೂಜಿಲೆಂಡ್-ಅಫ್ಘಾನಿಸ್ತಾನ ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಇದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೆಲ್ಬೋರ್ನ್‌ನಲ್ಲಿ ತಾಪಮಾನವು 14 ರಿಂದ 20 ಡಿಗ್ರಿ ಸೆಲ್ಸಿಯಸ್ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ, ದಿನವಿಡೀ ಮಳೆಯ ಮುನ್ಸೂಚನೆ ಇದೆ.

ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಉಸ್ಮಾನ್ ಘನಿ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್/ನವೀನ್-ಉಲ್-ಹಕ್ ಎಫ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications