ಆಸ್ಟ್ರೇಲಿಯಾ vs ನ್ಯೂಜಿಲೆಂಡ್: ಸ್ಪೋಟಕ ಆಟ ಪ್ರದರ್ಶಿಸಿದ ಕಿವೀಸ್: ಆಸಿಸ್ ಪಡೆಗೆ ಬೃಹತ್ ಗುರಿ

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿರುವ ನ್ಯೂಜಿಲೆಂಡ್ ತಂಡ ಸ್ಪೋಟಕ ಪ್ರದರ್ಶನ ನೀಡಿದೆ. ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ನ್ಯೂಜಿಲೆಂಡ್ ಬೃಹತ್ ಮೊತ್ತವನ್ನು ಪೇರಿಸಿದ್ದು ನಿಗದಿತ 20 ಓವರ್‌ಗಳಲ್ಲಿ 200 ರನ್‌ಗಳಿಸಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡದ ಮುಂದೆ ಕಠಿಣ ಗುರಿ ನಿಗದಿಯಾಗಿದೆ.
ಅಬ್ಬರದ ಆರಂಭ ಪಡೆದ ನ್ಯೂಜಿಲೆಂಡ್
ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಅದ್ಭುತ ಆರಂಭ ದೊರೆಯಿಯಿತು. ಫಿನ್ ಅಲೆನ್ ಆಸಿಸ್ ಬೌಲರ್‌ಗಳ ವಿರುದ್ಧ ಆರಂಭದಲ್ಲಿಯೇ ಸಿಡಿಯಲು ಆರಂಭಿಸಿದ್ದರು. ಬೌಂಡರಿ ಸಿಕ್ಸರ್‌ಗಳನ್ನು ಬಾರಿಸುತ್ತಾ ಸಾಗಿದ ಫಿನ್ ಅಲೆನ್ ಕೇವಲ 4 ಓವರ್‌ಗಳಲ್ಲಿ ತಂಡ 56 ರನ್ ಗಳಿಸಲು ಕಾರಣವಾದರು. ಬಳಿಕ 16 ಎಸೆತಗಳಲ್ಲಿ 42 ರನ್‌ಗಳಿಸಿ ಅಲೆನ್ ವಿಕೆಟ್ ಕಳೆದುಕೊಂಡಿದ್ದರು. ನಂತರ ಇನ್ನಿಂಗ್ಸ್ ಕಟ್ಟುವ ಜವಾಬ್ಧಾರಿಯನ್ನು ಕಾನ್ವೆ ವಹಿಸಿಕೊಂಡರು.
ಜವಾಬ್ಧಾರಿಯುತ ಪ್ರದರ್ಶನ ನೀಡಿದ ಕಾನ್ವೆ ಕಿವೀಸ್ ಪರವಾಗಿ ಅದ್ಭುತ ಪ್ರದರ್ಶನ ನೀಡಿದರು. ಅಂತಿಮ ಹಂತದವರೆಗೂ ಅಜೇಯವಾಗುಳಿದ ಅವರು 58 ಎಸೆತಗಳಲ್ಲಿ ಅಜೇಯ 92 ರನ್‌ಗಳನ್ನು ಗಳಿಸಿದರು. ಇನ್ನು ಕೊನೇಯ ಹಂತದಲ್ಲಿ ಜಿಮ್ಮಿ ನೀಶಮ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು 13 ಎಸೆತಗಳಲ್ಲಿ 26 ರನ್‌ಗಳಿಸಿ ತಂಡದ ಮೊತ್ತ 200ಕ್ಕೆ ಏರಲು ಕಾರಣವಾದರು. ಆಸ್ಟ್ರೇಲಿಯಾ ಪರವಾಗಿ ಹೇಜಲ್‌ವುಡ್ ಮಾತ್ರ ಎರಡು ವಿಕೆಟ್ ಕಬಳಿಸಲು ಯಶಸ್ವಿಯಾದರೆ ಒಂದು ವಿಕೆಟ್ ಆಡಂ ಜಂಪಾ ಪಾಲಾಯಿತು.
Live ಸ್ಕೋರ್‌ಕಾರ್ಡ್ ಹೀಗಿದೆ
ನ್ಯೂಜಿಲೆಂಡ್ ಪ್ಲೇಯಿಂಗ್ XI: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಮಾರ್ಟಿನ್ ಗಪ್ಟಿಲ್, ಮೈಕೆಲ್ ಬ್ರೇಸ್ವೆಲ್
ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ಬೆಂಚ್: ಸ್ಟೀವನ್ ಸ್ಮಿತ್, ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications