ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

AUS vs NZ T20 World Cup 2022 : ಕಳೆದ ವಿಶ್ವಕಪ್‌ ಫೈನಲ್‌ ಸೋಲಿಗೆ ಆಸಿಸ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ನ್ಯೂಜಿಲೆಂಡ್!

T20 World Cup 2022: Australia face New Zealand in Super 12 stage in SCG

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಇಂದಿನಿಂದ ಆರಂಭವಾಗಲಿದ್ದು ಚುಟುಕು ವಿಶ್ವಕಪ್‌ನ ತೀವ್ರತೆ ಇನ್ನು ಹೆಚ್ಚಾಗಲಿದೆ. ಆತಿಥೇಯ ಆಸ್ಟ್ರೇಲಿಯಾ ಹಾಗೂ ಕಳೆದ ವರ್ಷದ ರನ್ನರ್‌ಅಪ್ ತಂಡವಾಗಿರುವ ನ್ಯೂಜಿಲೆಂಡ್ ತಂಡಗಳು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿದೆ. ಈ ಸೆಣೆಸಾಟದೊಂದಿಗೆ ವಿಶ್ವಕಪ್‌ನ ಕಾವೇರಲಿದೆ.

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕಳೆದ ವರ್ಷದ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ತಂಡಗಳು ಮತ್ತೊಮ್ಮೆ ಎದುರಾಗುತ್ತಿರವುದು ಕುತೂಹಲ ಮೂಡಿಸಿದೆ. ಯುಎಇನಲ್ಲಿ ನಡೆದಿದ್ದ ಈ ಹಿಂದಿನ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಪಟ್ಟಕ್ಕೇರಿತ್ತು. ಆ ಸೋಲಿಗೆ ಕೇನ್ ಮಿಲಿಯಮ್ಸನ್ ಪಡೆ ಸೇಡು ತೀರಿಸಿಕೊಳ್ಳುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಟಿ20 ವಿಶ್ವಕಪ್ 2022: ಭಾರತೀಯ ಕ್ರಿಕೆಟ್ ಬೆಳವಣಿಗೆ ಶ್ಲಾಘಿಸಿದ ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್ಟಿ20 ವಿಶ್ವಕಪ್ 2022: ಭಾರತೀಯ ಕ್ರಿಕೆಟ್ ಬೆಳವಣಿಗೆ ಶ್ಲಾಘಿಸಿದ ಆಸೀಸ್ ಮಾಜಿ ನಾಯಕ ರಿಕಿ ಪಾಂಟಿಂಗ್

ಅರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಗೆ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿದ್ದು ಬಲಿಷ್ಠ ಆಟಗಾರರ ಪಡೆಯೊಂದಿಗೆ ಟೂರ್ನಿಯಲ್ಲಿ ಮಿಂಚಲು ಸಜ್ಜಾಗಿದೆ. ಮತ್ತೊಂದೆಡೆ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ಕೂಡ ಸಾಕಷ್ಟು ಪ್ರತಿಭಾವಂತ ಆಟಗಾರರೊಂದಿಗೆ ವಿಶ್ವಕಪ್‌ನಲ್ಲಿ ಪಾರಮ್ಯ ಮೆರೆಯುವ ವಿಶ್ವಾಸದಲ್ಲಿದೆ.

ಪಂದ್ಯಕ್ಕೆ ಮಳೆಯ ಆತಂಕ: ಈ ಬಾರಿಯ ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಮೊದಲ ಪಂದ್ಯಕ್ಕೆ ಮಳೆಯ ಆತಂಕವುಂಟಾಗಿದೆ. ಪಂದ್ಯದ ಸಂದರ್ಭದಲ್ಲಿ ಮಳೆಯಾಗುವ ಸಾಧ್ಯತೆ 28-51 ಶೇಕಡಾದಷ್ಟಿದೆ ಎಂದು ಎಂದು ಆಕ್ಯು ವೆದರ್ ಮಾಹಿತಿ ನೀಡುತ್ತಿದೆ ಹೀಗಾಗಿ ಪಂದ್ಯಕ್ಕೆ ಮಳೆ ಸಂಪೂರ್ಣವಾಗಿ ಅಡ್ಡಿಯುಂಟು ಮಾಡದಿದ್ದರೂ ಕೆಲಕಾಲ ತೊಂದರೆ ನೀಡುವ ಸಾಧ್ಯತೆಯಿದೆ.

ಹೊಸ ಅವತಾರದಲ್ಲಿ ಕಾಣಿಸಿಕೊಂಡ ರಿಷಭ್ ಪಂತ್: ವಿಶ್ವಕಪ್‌ನಲ್ಲಿ ಆಡೋದು ಬಿಟ್ಟು, ಇದೇನಿದು?ಹೊಸ ಅವತಾರದಲ್ಲಿ ಕಾಣಿಸಿಕೊಂಡ ರಿಷಭ್ ಪಂತ್: ವಿಶ್ವಕಪ್‌ನಲ್ಲಿ ಆಡೋದು ಬಿಟ್ಟು, ಇದೇನಿದು?

ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ನ್ಯೂಜಿಲೆಂಡ್: ಮ್ಯಾಟಿನ್ ಗಪ್ಟಿಲ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ, ಟಿಮ್ ಸೌಥಿ

Story first published: Saturday, October 22, 2022, 8:44 [IST]
Other articles published on Oct 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X