Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ವಿಶ್ವಕಪ್: ಆಸ್ಟ್ರೇಲಿಯಾ vs ನ್ಯೂಜಿಲೆಂಡ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI, Live ಸ್ಕೋರ್

T20 world cup 2022 Australia vs New Zealand, Super 12 1st match, Toss report, Playing XI

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆತಿಥೆಯ ಆಸ್ಟ್ರೇಲಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್‌ಗೆ ಸನಿಹದಲ್ಲಿರುವಾಗ ಒಂದಾದ ನಂತರ ಒಂದರಂತೆ ಸೋಲು ಅನುಭವಿಸಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಟೂರ್ನಿಗೂ ಮುನ್ನ ಸಣ್ಣ ಹಿನ್ನಡೆಯನ್ನು ಅನುಬವಿಸಿರುವುದು ಸುಳ್ಳಲ್ಲ. ಆದರೆ ಯಾವಾಗಲೂ ವಿಶ್ವಕಪ್ ವೇದಿಕೆಯಲ್ಲಿ ಅದ್ಭುತ ಪ್ರದರ್ಶನ ನೀಡುವ ಆಸಿಸ್ ಪಡೆ ಈ ಟೂರ್ನಿಯಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದು ಎಲ್ಲರ ಕುತೂಹಲ ಮೂಡಿಸಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಆಸಿಸ್ ವಿರುದ್ಧವೇ ಸೋಲು ಅನುಭವಿಸಿರುವ ಕಾರಣ ಈ ಬಾರಿ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
53397

ನ್ಯೂಜಿಲೆಂಡ್ ಪ್ಲೇಯಿಂಗ್ XI: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಮಾರ್ಟಿನ್ ಗಪ್ಟಿಲ್, ಮೈಕೆಲ್ ಬ್ರೇಸ್ವೆಲ್

ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ಬೆಂಚ್: ಸ್ಟೀವನ್ ಸ್ಮಿತ್, ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್

Story first published: Saturday, October 22, 2022, 12:30 [IST]
Other articles published on Oct 22, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+