
ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 12 ಕಾದಾಟದ ಎರಡನೇ ಪಂದ್ಯದಲ್ಲಿ ಶನಿವಾರ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಂತಹ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ. ಸೂಪರ್ 12 ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನ್ನ ಅನುಭವಿಸಿದ ಬಳಿಕ ಈ ಪಂದ್ಯವು ಮತ್ತಷ್ಟು ರೋಚಕತೆ ಹೆಚ್ಚಿಸಿದೆ.
ಪರ್ತ್‌ನಲ್ಲಿನ ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜಾಸ್ ಬಟ್ಲರ್ ಇಬ್ಬನಿಯ ಅಂಶವು ಪ್ರಮುಖ ಪಾತ್ರವಹಿಸುವುದರಿಂದ ಅಫ್ಘಾನಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಆಹ್ವಾನಿಸಿದ್ದಾರೆ. ಇಂಗ್ಲೆಂಡ್ 15 ಆಟಗಾರರ ಸ್ಕ್ವಾಡ್‌ನಲ್ಲಿ ಡೇವಿಡ್ ವಿಲ್ಲಿ, ಮೈಕಲ್ ಜೋರ್ಡಾನ್, ಟೈಮಲ್ ಮಿಲ್ಸ್ ಹಾಗೂ ಸಾಲ್ಟ್ ಬೆಂಚ್ ಕಾದಿದ್ದು ಉಳಿದವರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ತಾವು ಟಾಸ್ ಗೆದ್ದಿದ್ರೆ ಮೊದಲು ಬ್ಯಾಟಿಂಗ್ ಮಾಡಿ ಉತ್ತಮ ಸ್ಕೋರ್ ಕಲೆಹಾಕುವ ಯೋಜನೆಯಲ್ಲಿದ್ದೆವು ಎಂದು ಅಫ್ಘಾನಿಸ್ತಾನ ತಂಡದ ನಾಯಕ ಮೊಹಮ್ಮದ್ ನಬಿ ಹೇಳಿದ್ದಾರೆ. ಈ ಮೂಲಕ ಟಾಸ್ ಸೋತರು ತಮ್ಮ ಯೋಜನೆ ಪ್ರಕಾರ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದೆ ಎಂಬುದು ಇವರ ಅಭಿಪ್ರಾಯವಾಗಿದೆ. ಉಭಯ ತಂಡಗಳು ಗೇಮ್ ಚೇಂಜ್ ಮಾಡುವ ಆಟಗಾರರಿದ್ದು, ಎರಡು ತಂಡಗಳ ಪ್ಲೇಯಿಂಗ್ ಇಲೆವೆನ್ ಅನ್ನು ಈ ಕೆಳಗೆ ಕಾಣಬಹುದು.
ಇಂಗ್ಲೆಂಡ್ ತಂಡದ ಪ್ಲೇಯಿಂಗ್ 11
ಜಾಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ಟೈಮಲ್ ಮಿಲ್ಸ್, ಫಿಲಿಪ್ ಸಾಲ್ಟ್
ಅಫ್ಘಾನಿಸ್ತಾನ ತಂಡದ ಪ್ಲೇಯಿಂಗ್ 11
ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಉಸ್ಮಾನ್ ಘನಿ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫರೀದ್ ಅಹ್ಮದ್ ಮಲಿಕ್, ಫಜಲ್ಹಕ್ ಫಾರೂಕಿ
ಬೆಂಚ್: ದರ್ವಿಶ್ ರಸೂಲಿ, ನವೀನ್-ಉಲ್-ಹಕ್, ಕೈಸ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ