For Quick Alerts
ALLOW NOTIFICATIONS  
For Daily Alerts
 

T20 ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್‌ ಆಯ್ಕೆ

England vs Srilanka

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್‌ 12 ಅತ್ಯಂತ ಮಹತ್ವದಲ್ಲಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟಾಸ್‌ ಗೆದ್ದ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ನ.05ರಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಸೂಪರ್ 12ನ 39ನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದು, ಇಂಗ್ಲೆಂಡ್ ಸೆಮಿಫೈನಲ್‌ ಪ್ರವೇಶಕ್ಕೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ತಂಡದಲ್ಲಿ ಯಾವುದೇ ಬದಲಾವಣೆ ಮಾಡದ ಇಂಗ್ಲೆಂಡ್

ತಂಡದಲ್ಲಿ ಯಾವುದೇ ಬದಲಾವಣೆ ಮಾಡದ ಇಂಗ್ಲೆಂಡ್

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಶ್ರೀಲಂಕಾ ತಂಡವು ಕೇವಲ ಒಂದು ಬದಲಾವಣೆ ಮಾಡಿದ್ದು, ಕರುಣರತ್ನೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ ತಂಡದಲ್ಲಿ ಕಳೆದ ಪಂದ್ಯದ ಆಟಗಾರರನ್ನೇ ಮುಂದುವರಿಸಿದ್ದು, ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಕಳೆದ ಏಳು ಪಂದ್ಯಗಳ ಇತಿಹಾಸವನ್ನು ನೋಡಿದ್ರೆ, ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಪಂದ್ಯವನ್ನು ಗೆದ್ದು ಬೀಗಿದೆ. ಹೀಗಾಗಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ದಸುನ್ ಶನಕ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗೆ ಕಾಣಬಹುದಾಗಿದೆ

ಇಂಗ್ಲೆಂಡ್ ಪ್ಲೇಯಿಂಗ್ 11

ಇಂಗ್ಲೆಂಡ್ ಪ್ಲೇಯಿಂಗ್ 11

ಜೋಸ್ ಬಟ್ಲರ್(ನಾಯಕ ಮತ್ತು ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಸ್ಯಾಮ್ ಕುರಾನ್, ಡೇವಿಡ್ ಮಲನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್

ಬೆಂಚ್: ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಟೈಮಲ್ ಮಿಲ್ಸ್, ಫಿಲಿಪ್ ಸಾಲ್ಟ್

ಟಿ20 ವಿಶ್ವಕಪ್: ಭಾರತ-ಜಿಂಬಾಬ್ವೆ ಅಂತಿಮ ಪಂದ್ಯಕ್ಕೆ ಮಳೆ ಕಾಟವೇ? ಹವಾಮಾನ ವರದಿಯಲ್ಲಿ ಏನಿದೆ?

ಶ್ರೀಲಂಕಾ ಪ್ಲೇಯಿಂಗ್ 11

ಶ್ರೀಲಂಕಾ ಪ್ಲೇಯಿಂಗ್ 11

ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್ ತೀಕ್ಷಣ, ಲಹಿರು ಕುಮಾರ, ಕಸುನ್ ರಜಿತ

ಬೆಂಚ್: ಅಸಿತ ಫೆರ್ನಾಂಡೋ, ಅಶೆನ್ ಬಂಡಾರ, ಜೆಫ್ರಿ ವಾಂಡರ್ಸೆ, ಪ್ರಮೋದ್ ಮದುಶನ್

SMAT 2022: ಸೈಯದ್ ಮುಷ್ತಾಕ್ ಅಲಿ T20 ಟೂರ್ನಿ ಫೈನಲ್, ಹಿಮಾಚಲ ಪ್ರದೇಶ vs ಮುಂಬೈ ಪ್ರಶಸ್ತಿಗಾಗಿ ಸೆಣಸಾಟ

ಗ್ರೂಪ್ ಎ ಪಾಯಿಂಟ್ಸ್ ಟೇಬಲ್‌

ಗ್ರೂಪ್ ಎ ಪಾಯಿಂಟ್ಸ್ ಟೇಬಲ್‌

ಸೂಪರ್ 12 ಗ್ರೂಪ್ 1ರಲ್ಲಿ ನ್ಯೂಜಿಲೆಂಡ್ ತಂಡವು 5 ಫಂದ್ಯಗಳಲ್ಲಿ 3 ಗೆಲವು, 1 ಸೋಲು ಹಾಗೂ 1 ಫಲಿತಾಂಶವಿಲ್ಲದೆ 7 ಪಾಯಿಂಟ್ಸ್ ಕಲೆಹಾಕಿದ್ದು, ನೆಟ್‌ ರನ್‌ರೇಟ್‌ +2.113ರಷ್ಟು ಹೊಂದಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ 7 ಪಾಯಿಂಟ್ಸ್ ಹೊಂದಿದ್ದರೂ , ನೆಟ್‌ ರನ್‌ರೇಟ್‌ನಲ್ಲಿ ಹಿಂದಿರುವ ಕಾರಣ ಸೆಮಿಫೈನಲ್ ಪ್ರವೇಶ ಕಷ್ಟಸಾಧ್ಯವಾಗಿದೆ. ಆಸ್ಟ್ರೇಲಿಯಾ ನೆಟ್ ರನ್‌ರೇಟ್‌ -0.173ರಷ್ಟಿದೆ.

ಇನ್ನು ಪ್ರಸ್ತುತ ಪಂದ್ಯವನ್ನಾಡುತ್ತಿರುವ ಇಂಗ್ಲೆಂಡ್ 4 ಪಂದ್ಯಗಳಲ್ಲಿ 2 ಗೆಲುವು, 1 ಸೋಲು, 1 ಫಲಿತಾಂಶವಿಲ್ಲದೆ 5 ಪಾಯಿಂಟ್ಸ್‌ ಕಲೆಹಾಕಿದ್ದು, ನೆಟ್‌ರನ್‌ರೇಟ್ + 0.547ರಷ್ಟಿದೆ. ಶ್ರೀಲಂಕಾ 4ರಲ್ಲಿ ತಲಾ ಎರಡು ಗೆಲುವು ಸೋಲು ಹೊಂದಿದ್ದು 4 ಪಾಯಿಂಟ್ಸ್‌ ಕಲೆಹಾಕಿದ್ದು, ಈಗಾಗಲೇ ಸೆಮಿಫೈನಲ್‌ನಿಂದ ಹೊರಬಿದ್ದಾಗಿದೆ.

ಹೀಗಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಸೆಮಿಫೈನಲ್ ಪ್ರವೇಸಿಸಲಿದೆ. ಒಂದು ವೇಳೆ ಶ್ರೀಲಂಕಾ ಗೆದ್ದರೆ, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಸೆಮಿಫೈನಲ್‌ ಅವಕಾಶ ಪಡೆಯಲಿದೆ.

Story first published: Saturday, November 5, 2022, 13:14 [IST]
Other articles published on Nov 5, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+