T20 World Cup 2022 : ಟಿ20 ವಿಶ್ವಕಪ್‌ಗಾಗಿ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್; ಯಾರಿಗೆಲ್ಲಾ ಸ್ಥಾನ?

ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಶುಕ್ರವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದು, ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ಅವರನ್ನು ಕೈಬಿಡಲಾಗಿದೆ. ವೇಗದ ಬೌಲರ್‌ಗಳಾದ ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್ ತಮ್ಮ ಗಾಯಗಳಿಂದ ಚೇತರಿಸಿಕೊಂಡಿದ್ದಾರೆ ಮತ್ತು ಐಸಿಸಿ ಪುರುಷರ ಟಿ20 ವಿಶ್ವಕಪ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆಯುವ ಪಾಕಿಸ್ತಾನದ ಟಿ20 ಪ್ರವಾಸಕ್ಕಾಗಿ ಎರಡೂ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.
"ಇಬ್ಬರೂ ಆಟಗಾರರು ಕೊನೆಯದಾಗಿ ಮಾರ್ಚ್‌ನಲ್ಲಿ ವೆಸ್ಟ್ ಇಂಡೀಸ್‌ನ ಟೆಸ್ಟ್ ಪ್ರವಾಸದ ಸಮಯದಲ್ಲಿ ಇಂಗ್ಲೆಂಡ್‌ಗಾಗಿ ಆಡಿದ್ದರು," ಎಂದು ಇಸಿಬಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಅಕ್ಟೋಬರ್ 22ರಂದು ಅಫ್ಘಾನಿಸ್ತಾನ ವಿರುದ್ಧ ಪಂದ್ಯ
ಇಂಗ್ಲೆಂಡ್ ತನ್ನ ಮೊದಲ ಟಿ20 ವಿಶ್ವಕಪ್ ಪಂದ್ಯವನ್ನು ಅಕ್ಟೋಬರ್ 22ರಂದು ಅಫ್ಘಾನಿಸ್ತಾನ ವಿರುದ್ಧ ಪರ್ತ್‌ನಲ್ಲಿ ಆಡಲಿದೆ. ಜೋಸ್ ಬಟ್ಲರ್ ನಾಯಕತ್ವದ ತಂಡವು ಅಕ್ಟೋಬರ್ 28ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ ಮತ್ತು ಇಂಗ್ಲೆಂಡ್ ತಂಡ ನವೆಂಬರ್ 1ರಂದು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ.
2022ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ನವೆಂಬರ್ 13ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಬಟ್ಲರ್ ಅನುಪಸ್ಥಿತಿಯಲ್ಲಿ ಮೊಯಿನ್ ಅಲಿಗೆ ನಾಯಕತ್ವ
"ವೇಗಿ ಕ್ರಿಸ್ ಜೋರ್ಡಾನ್ (ಬೆರಳು ಗಾಯ) ಮತ್ತು ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ (ಪಾದದ ಗಾಯ) ತಮ್ಮ ಚಿಕಿತ್ಸ ಮತ್ತು ತರಬೇತಿ ಮುಂದುವರೆಸುತ್ತಾರೆ ಮತ್ತು ವಿಶ್ವಕಪ್‌ಗೆ ಮುಂಚಿತವಾಗಿ ನಡೆಯುವ ಪಾಕಿಸ್ತಾನ ಪ್ರವಾಸದಲ್ಲಿ ಪಾಲ್ಗೊಳ್ಳುವುದಿಲ್ಲ. ಆದರೆ ಆಸ್ಟ್ರೇಲಿಯಾದಲ್ಲಿ ನಡೆಯುವ ಪಂದ್ಯಾವಳಿಗೆ ಫಿಟ್ ಆಗಲು ಟ್ರ್ಯಾಕ್‌ನಲ್ಲಿ ಉಳಿಯುತ್ತಾರೆ".
"ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಕರುಳು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ, ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಆದರೆ ಅವರು ಏಳು ಪಂದ್ಯಗಳ ಸರಣಿಯ ಕೊನೆಯ ಹಂತಗಳಲ್ಲಿ ಆಡಲು ಲಭ್ಯವಿರುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಜೋಸ್ ಬಟ್ಲರ್ ಅನುಪಸ್ಥಿತಿಯಲ್ಲಿ ಮೊಯಿನ್ ಅಲಿ ಇಂಗ್ಲೆಂಡ್ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ," ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಣೆ ತಿಳಿಸಿದೆ.

ಇಂಗ್ಲೆಂಡ್ ಟಿ20 ವಿಶ್ವಕಪ್ ತಂಡ
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್
ಮೀಸಲು ಆಟಗಾರರು: ಲಿಯಾಮ್ ಡಾಸನ್, ರಿಚರ್ಡ್ ಗ್ಲೀಸನ್, ಟೈಮಲ್ ಮಿಲ್ಸ್

ಪಾಕಿಸ್ತಾನ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡ:
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಜೋರ್ಡಾನ್ ಕಾಕ್ಸ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಲಿಯಾಮ್ ಡಾಸನ್, ರಿಚರ್ಡ್ ಗ್ಲೀಸನ್, ಟಾಮ್ ಹೆಲ್ಮ್, ವಿಲ್ ಜಾಕ್ಸ್, ಡೇವಿಡ್ ಮಲಾನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಓಲಿ ಸ್ಟೋನ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಲ್ಯೂಕ್ ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications