ಟಿ20 ವಿಶ್ವಕಪ್: ಸೆಮಿಫೈನಲ್ ಕನಸು ಜೀವಂತವಾಗಿರಿಸಲು ಇಂಗ್ಲೆಂಡ್ ಸಾಹಸ

ಟಿ20 ವಿಶ್ವಕಪ್ ರೋಚಕ ಘಟ್ಟವನ್ನು ತಲುಪಿದೆ. ಸೆಮಿಫೈನಲ್ ಹಂತಕ್ಕೇರಲು ಎಲ್ಲಾ ತಂಡಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದು ಫಲಿತಾಂಶಗಳ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿದೆ. ಈ ಹಂತದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿದ್ದು ಇದು ಇಂಗ್ಲೆಂಡ್ ಪಾಇಗೆ ಅತ್ಯಂತ ನಿರ್ಣಾಯಕವಾಗಿದೆ.
ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಟೂರ್ನಿಯನ್ನು ಗೆಲುವಿನೊಂದಿಗೆ ಆರಂಭಿಸಿದ್ದರೂ ಐರ್ಲೆಂಡ್ ವಿರುದ್ಧ ಐದು ವಿಕೆಟ್‌ಗಳ ಅಂತರದ ಸೋಲು ತಂಡಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಅದಾದ ಬಳಿಕ ಆಸ್ಟ್ರೇಲಿಯಾ ತಂಡದ ವಿರುದ್ಧದ ಪಂದ್ಯ ಮಳೆಗೆ ಆಹುತಿಯಾಗಿದ್ದು ತಂಡಕ್ಕೆ ಮತ್ತಷ್ಟು ದೊಡ್ಡ ಆಘಾತವನ್ನು ನೀಡಿದೆ.
ಇದೀಗ ಎರಡು ಪಂದ್ಯಗಳು ಮಾತ್ರ ಇಂಗ್ಲೆಂಡ್ ತಂಡಕ್ಕೆ ಬಾಕಿಯಿದ್ದು ಎರಡು ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದರೆ ಇಂಗ್ಲೆಂಡ್ ತಂಡ ಸೆಮಿಫೈನಲ್ ಹಂತಕ್ಕೇರುವ ಸಾಧ್ಯತೆಯನ್ನು ತೆರೆದಿಡಲಿದೆ. ಆದರೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಸೋಲು ಅನುಭವಿಸಿದರೆ ಸೆಮಿಫೈನಲ್‌ಗೇರುವ ಅವಕಾಶಕ್ಕೆ ಬೇರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ ಎಂಬುದು ಸ್ಪಷ್ಟ!
ಹೆಡ್ ಟು ಹೆಡ್: ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಈವರೆಗೆ 22 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 12 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದ್ದರೆ 8 ಒಂದ್ಯಗಳಲ್ಲಿ ಕಿವೀಸ್ ಪಡೆ ಗೆದ್ದುಕೊಂಡಿದೆ. ಒಂದು ಟೈ ಫಲಿತಾಂಶ ಪಡೆದುಕೊಂಡಿದ್ದರೆ ಒಂದು ಫಲಿತಾಂಶ ಕಾಣದೆ ಅಂತ್ಯವಾಗಿದೆ. ಇನ್ನು ಟಿ20 ವಿಶ್ವಕಪ್‌ನ್ಲಲಿ ಈವರೆಗೆ ಈ ಎರಡು ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು ಇದರಲ್ಲಿ ತಲಾ 3 ಬಾರಿ ಎರಡು ತಂಡಗಳು ಸೋಲು ಗೆಲುವಿನ ರುಚಿ ಕಂಡಿದೆ.
ಇಂಗ್ಲೆಂಡ್ ಸ್ಕ್ವಾಡ್: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್,
ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಟೈಮಲ್ ಮಿಲ್ಸ್, ಫಿಲಿಪ್ ಸಾಲ್ಟ್
ನ್ಯೂಜಿಲೆಂಡ್ ಸ್ಕ್ವಾಡ್: ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications