ಟಿ20 ವಿಶ್ವಕಪ್: ಇಂಗ್ಲೆಂಡ್ vs ಐರ್ಲೆಂಡ್ ಪಂದ್ಯ, ಟಾಸ್ ರಿಪೋರ್ಟ್, ಆಡುವ ಬಳಗ Live ಸ್ಕೋರ್

ಟಿ20 ವಿಶ್ವಕಪ್‌ನಲ್ಲಿ ಇಂದು ಐರ್ಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಐರ್ಲೆಂಡ್ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇಂಗ್ಲೆಂಡ್ ತಂಡ ಈ ಪಂದ್ಯಕ್ಕಾಗಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅಫ್ಘಾನಿಸ್ತಾನದ ವಿರುದ್ಧ ಆಡಿದ ಬಳಗದೊಂದಿಗೆ ಕಣಕ್ಕಿಳಿದಿದೆ. ಇನ್ನು ಐರ್ಲೆಂಡ್ ತಂಡದಲ್ಲಿ ಈ ಪಂದ್ಯಕ್ಕಾಗಿ ಒಂದು ಬದಲಾವನೆ ಮಾಡಿಕೊಳ್ಳಲಾಗಿದೆ. ಸಿಮಿ ಸಿಂಗ್ ಆಡುವ ಬಳಗದಿಂದ ಹೊರಬಿದ್ದಿದ್ದು ಫಿನ್ ಹ್ಯಾಂಡ್‌ಗೆ ಪ್ಲೇಯಿಂಗ್ XI ನಲ್ಲಿ ಅವಕಾಶ ದೊರೆತಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ

ನೆರೆಹೊರೆಯವರ ಸೆಣೆಸಾಟ
ಇಂಗ್ಲೆಂಡ್ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಸೋಲುಣಿಸಿ ಆತ್ಮವಿಶ್ವಾಸದಲ್ಲಿ ಕಾಣಿಸುತ್ತಿದ್ದರೆ ಐರ್ಲೆಂಡ್ ತಂಡ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿ ಹಿನ್ನಡೆ ಅನುಭವಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಇಂಗ್ಲೆಂಡ್ ಕೂಡ ಒಂದಾಗಿದೆ. ಮತ್ತೊಂದೆಡೆ ಐರ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದರೂ ತಂಡದಲ್ಲಿ ಹಲವು ಸ್ಪೋಟಕ ಆಟಗಾರರು ಇದ್ದಾರೆ ಎಂಬುದು ಗಮನಾರ್ಹ ಸಂಗತಿ. ಐರ್ಲೆಂಡ್ ಅನೇಕ ಸಂದರ್ಭಗಳಲ್ಲಿ ದೊಡ್ಡ ತಂಡಗಳಿಗೆ ಆಘಾತ ನೀಡಿರುವ ಉದಾಹರಣೆಯಿದ್ದು ಮತ್ತೊಂದು ಅಂಥಾದ್ದೇ ಪ್ರದರ್ಶನದ ನಿರೀಕ್ಷೆಯಲ್ಲಿದೆ.

ಐರ್ಲೆಂಡ್ ಆಡುವ ಬಳಗ
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್
ಬೆಂಚ್: ಸ್ಟೀಫನ್ ಡೊಹೆನಿ, ಕಾನರ್ ಓಲ್ಫರ್ಟ್, ಗ್ರಹಾಂ ಹ್ಯೂಮ್, ಸಿಮಿ ಸಿಂಗ್

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್ : ಜೋಸ್ ಬಟ್ಲರ್(ವಿಕೆಟ್ ಕೀಪರ್/ ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಫಿಲಿಪ್ ಸಾಲ್ಟ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಟೈಮಲ್ ಮಿಲ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications