Eng vs SL: ಎರಡು ತಂಡಗಳ ಭವಿಷ್ಯ ನಿರ್ಧರಿಸಲಿದೆ ಶ್ರೀಲಂಕಾ: ಸಂಭಾವ್ಯ ತಂಡ, ಹವಾಮಾನ ವರದಿ

ಟಿ20 ವಿಶ್ವಕಪ್‌ನಲ್ಲಿ ಗ್ರೂಪ್ 1ರ ಅಂತಿಮ ಪಂದ್ಯ ಶನಿವಾರ ನಡೆಯಲಿದ್ದು ಈ ಪಂದ್ಯ ಎರಡು ತಣಂಡಗಳ ಪಾಲಿಗೆ ನಿರ್ಣಾಯಕವಾಗಲಿದೆ. ಶ್ರೀಲಂಕಾ ಹಾಗೂ ಇಂಗ್ಲೆಂಡ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಶ್ರೀಲಂಕಾ ಈಗಾಗಲೇ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಪೈಕಿ ಯಾವ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇಂಗ್ಲೆಂಡ್ ತಂಡ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದಗ್ಯಗಳಲ್ಲಿ ಗೆಲುವು ಸಾಧಿಸಿದ್ದು ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದ್ದು ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ. ಹೀಗಾಗಿ 5 ಅಂಕಗಳನ್ನು ಪಡೆದುಕೊಂಡಿರುವ ಇಂಗ್ಲೆಂಡ್ ತಂಡ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಆತಿಥೇಯ ಆಸ್ಟ್ರೇಲಿಯಾ ಗಳಿಸಿದಷ್ಟೇ ಅಂಕಗಳನ್ನು ತನ್ನದಾಗಿಸಿಕೊಳ್ಳಲಿದೆ. ಆದರೆ ಆಸ್ಟ್ರೇಲಿಯಾ ತಂಡಕ್ಕಿಂತ ನೆಟ್‌ರನ್‌ರೇಟ್‌ನಲ್ಲಿ ಉತ್ತಮ ಸ್ಥಾನದಲ್ಲಿರುವ ಕಾರಣ ಇಂಗ್ಲೆಂಡ್ ಸೆಮಿಫೈನಲ್‌ಗೇರುವ ಅವಕಾಶ ಪಡೆಯಲಿದೆ. ಆಸ್ಟ್ರೇಲಿಯಾ ತಂಡ ಸೂಪರ್ 12 ಹಂತದಿಂದಲೇ ಹೊರಬೀಳಲಿದೆ.

ಪಂದ್ಯದ ಸಮಯ ನೇರಪ್ರಸಾರ ಮಾಹಿತಿ
ಶ್ರೀಲಂಕಾ ಹಾಗೂ ಇಂಗ್ಲೆಂಡ್ ತಂಡಗಳು ಶನಿವಾರ ಸಿಡ್ನಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಹಾಟ್‌ಸ್ಟಾರ್ ಹಾಗೂ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಹವಾಮಾನ ವರದಿ: ಪಂದ್ಯದ ದಿನ ಸಿಡ್ನಿಯಲ್ಲಿ ಸಂಪೂರ್ಣ ಆಟ ನಡೆಯಲು ಪೂರಕವಾದ ವಾತಾವರಣವಿರಲಿದೆ. 13-20 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.
ಪಿಚ್ ರಿಪೋರ್ಟ್: ಸಿಡ್ನಿ ಪಿಚ್ ಬ್ಯಾಟರ್‌ಗಳಿಗೆ ಹಾಗೂ ಬೌಲಿಂಗ್ ವಿಭಾಗಕ್ಕೆ ಸಮಾನವಾದ ನೆರವು ನೀಡುವ ಸಾಧ್ಯತೆಯಿದೆ. ಅರಂಭದಲ್ಲಿ ಬೌಲರ್‌ಗಳಿಗೆ ಪಿಚ್ ನೆರವು ನೀಡಲಿದ್ದು ಪಂದ್ಯ ಮುಂದುವರಿದಂತೆಯೇ ಬ್ಯಾಟರ್‌ಗಳಿಗೆ ನೆರವು ನೀಡುವ ಸಾಧ್ಯತೆಯಿದೆ.

ಸಂಭಾವ್ಯ ಆಡುವ ಬಳಗ ಹೀಗಿದೆ
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ & ವಿಕಡೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್/ಚಾಮಿಕ ಕರುಣಾರತ್ನೆ, ಲಹಿರು ಕುಮಾರ, ಕಸುನ್ ರಜಿತ
ICC Player Of The Month Award : ಮೊದಲ ಬಾರಿಗೆ ವಿರಾಟ್ ಕೊಹ್ಲಿ ನಾಮನಿರ್ದೇಶನ

ಮಹತ್ವದ ಪಂದ್ಯದಲ್ಲಿ ಗೆದ್ದು ಪೈಪೋಟಿಗಿಳಿದ ಆಸ್ಟ್ರೇಲಿಯಾ
ಇನ್ನು ಈ ವಿಶ್ವಕಪ್‌ಗೆ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ಆತಿಥೇಯ ತಂಡವೂ ಆಗಿರುವ ಕಾರಣ ಸಾಕಷ್ಟು ನಿರೀಕ್ಷೆಗಳಿತ್ತು. ಆದರೆ ಮೊದಲ ಪಂದ್ಯದಲ್ಲಿಯೇ ನ್ಯೂಜಿಲೆಂಡ್ ತಂಡದ ವಿರುದ್ಧ ಅನುಭವಿಸಿದ ಬೃಹತ್ ಸೋಲು ತಂಡದ ಹಿನ್ನಡೆಗೆ ಕಾರಣವಾಯಿತು. ಬಳಿಕ ಇಂಗ್ಲೆಂಡ್ ವಿರುದ್ಧದ ಪಂದ್ಯ ಮಳೆಗೆ ಆಹುತಿಯಾದ ಕಾರಣ ಆಸ್ಟ್ರೇಲಿಯಾಗೆ ಮತ್ತಷ್ಟು ಹಿನ್ನಡೆಯಾಯಿತು. ಈ ಮಧ್ಯೆ ಐರ್ಲೆಂಡ್ ಹಾಗೂ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿ ಪೈಪೋಟಿಯಲ್ಲಿ ಮುಂದುವರಿಯಿತಾದರೂ ಅಫ್ಘಾನಿಸ್ತಾನದ ವಿರುದ್ಧದ ಶುಕ್ರವಾರದ ಪಂದ್ಯ ಆಸಿಸ್ ಪಾಲಿಗೆ ಬಹಳ ಮಹತ್ವದ್ದಾಗಿತ್ತು. ಈ ಪಂದ್ಯದಲ್ಲಿ ರೋಚಕವಾಗಿ ಆಸ್ಟ್ರೇಲಿಯಾ ಗೆಲುವು ಸಾಧಿಸಲು ಯಶಸ್ವಿಯಾಗಿದ್ದು ಸೆಮಿಫೈನಲ್ ಹೋರಾಟದಲ್ಲಿ ಮುಂದುವರಿದಿದೆ. ಇದೀಗ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಎಲ್ಲಾ ಪಂದ್ಯಗಳನ್ನು ಆಡಿ ಮುಗಿಸಿದ್ದು ತಲಾ 7 ಅಂಕಗಳನ್ನು ಪಡೆದುಕೊಂಡಿದೆ. ನ್ಯೂಜಿಲೆಂಡ್ ನೆಟ್‌ರನ್‌ರೇಟ್‌ನಲ್ಲಿ ಮುಂದಿರುವ ಕಾರಣ ಈಗಾಗಲೇ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಇತ್ತ ಇಂಗ್ಲೆಂಡ್ ತಂಡಕ್ಕೆ ಇಂದು ಪಂದ್ಯ ಬಾಕಿಯಿದ್ದು 5 ಅಂಕಗಳನ್ನು ಹೊಂದಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಇಂಗ್ಲೆಂಡ್ ತಂಡ ಕೂಡ 7 ಅಂಕಗಳನ್ನು ಖಾತೆಗೆ ಸೇರಿಸಿಕೊಳ್ಳಲಿದೆ. ಆದರೆ ಇಂಗ್ಲೆಂಡ್ ತಂಡದ ನೆಟ್‌ರನ್‌ರೇಟ್ ಆಸ್ಟ್ರೇಲಿಯಾಗಿಂತ ಉತ್ತಮವಾಗಿರುವ ಕಾರಣ ಆಸ್ಟ್ರೇಲಿಯಾ ಲೀಗ್ ಹಂತದಿಂದಲೇ ಹೊರಬೀಳಲಿದ್ದು ಇಂಗ್ಲೆಂಡ ಸೆಮಿಫೈನಲ್‌ಗೆ ಪ್ರವೇಶಿಸಲಿದೆ. ಹೀಗಾಗಿ ಆಸ್ಟ್ರೇಲಿಯಾ ಶ್ರೀಲಂಕಾದ ಗೆಲುವನ್ನು ನಿರೀಕ್ಷಿಸುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications