Eng Vs Pak: ಬೆನ್‌ಸ್ಟೋಕ್ಸ್ ಜವಾಬ್ದಾರಿಯುತ ಆಟ, 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದ ಇಂಗ್ಲೆಂಡ್

ಮೆಲ್ಬೋರ್ನ್ ಕ್ರಿಕೆಟ್ ಅಂಗಳದಲ್ಲಿ ನಡೆದ ಟಿ20 ವಿಶ್ವಕಪ್ 2022ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಎನಿಸಿಕೊಂಡಿದೆ. 2010ರಲ್ಲಿ ಇಂಗ್ಲೆಂಡ್ ಮೊದಲ ಬಾರಿಗೆ ಟಿ20 ವಿಶ್ವಕಪ್ ಜಯಿಸಿತ್ತು.
ಆಸ್ಟ್ರೇಲಿಯಾದಲ್ಲಿ 1992ರಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ಇಂಗ್ಲೆಂಡ್ ತಂಡವನ್ನು ಸೋಲಿಸಿ ವಿಶ್ವಚಾಂಪಿಯನ್ ಆಗಿತ್ತು. ಈಗ, ಆ ಸೋಲಿನ ಸೇಡು ತೀರಿಸಿಕೊಳ್ಳುವ ಮೂಲಕ ಇಂಗ್ಲೆಂಡ್ ಟಿ20 ವಿಶ್ವಕಪ್ ಎತ್ತಿಹಿಡಿದಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕನ ತೀರ್ಮಾನವನ್ನು ಸಮರ್ಥನೆ ಮಾಡಿಕೊಳ್ಳುವಂತೆ ಇಂಗ್ಲೆಂಡ್ ಬೌಲರ್ ಗಳು ಪ್ರದರ್ಶನ ನೀಡಿದರು. ಸೆಮಿಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಪಾಕಿಸ್ತಾನದ ಆರಂಭಿಕರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಪ್ರಮುಖ ಪಂದ್ಯದಲ್ಲಿ ಕೈಕೊಟ್ಟರು. ಅಂತಿಮವಾಗಿ ಪಾಕಿಸ್ತಾನ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು.
ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಒಳಗಾದರೂ ಅಂತಿಮವಾಗಿ ಬೆನ್‌ಸ್ಟೋಕ್ಸ್ ಮತ್ತು ಮೋಯಿನ್ ಅಲಿ ಇಂಗ್ಲೆಂಡ್ ತಂಡವನ್ನು ಗೆಲುವಿನ ದಡ ಸೇರಿಸಿದರು. 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಸಾಧಿಸಿತು.

ಸ್ಟೋಕ್ಸ್ ಆಟಕ್ಕೆ ಮಣಿದ ಪಾಕಿಸ್ತಾನ
ಸಾಧಾರಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲಿ ಅಲೆಕ್ಸ್ ಹೇಲ್ಸ್ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಒಳಗಾಯಿತು. ಶಾಹಿನ್ ಅಫ್ರಿದಿ ಮೊದಲನೇ ಓವರ್ ನಲ್ಲಿ ವಿಕೆಟ್ ಪಡೆದು ಪಾಕಿಸ್ತಾನಕ್ಕೆ ಗೆಲುವಿನ ಭರವಸೆ ಮೂಡಿಸಿದರು. ಜೋಸ್ ಬಟ್ಲರ್ 17 ಎಸೆತಗಳಲ್ಲಿ 26 ರನ್ ಗಳಿಸಿ ಔಟಾದರು. ಫಿಲಿಪ್ ಸಾಲ್ಟ್ ಕೂಡ 10 ರನ್ ಗಳಿಸಿ ಔಟಾದರು.
ಒಂದು ಹಂತದಲ್ಲಿ ಇಂಗ್ಲೆಂಡ್ ಒತ್ತಡಕ್ಕೆ ಒಳಗಾಯಿತು. ಆದರೆ ಅನುಭವಿ ಬೆನ್ ಸ್ಟೋಕ್ಸ್ ನಿಧಾನವಾಗಿ ರನ್ ಗಳಿಸುತ್ತಾ ಕೊನೆಯವರೆಗೂ ಆಡಿದರು. ಫೈನಲ್ ಪಂದ್ಯದಲ್ಲಿ 49 ಎಸೆತಗಳಲ್ಲಿ 52 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು.
ಟಿ20 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಆಟಗಾರರು ಏಕೆ ಕಪ್ಪು ಪಟ್ಟಿ ಧರಿಸಿದ್ದಾರೆ? ಕಾರಣ ಇಲ್ಲಿದೆ

ಸಾಧಾರಣ ಮೊತ್ತ ಕಲೆಹಾಕಿದ ಪಾಕಿಸ್ತಾನ
ರಿಜ್ವಾನ್ 14 ಎಸೆತಗಳಲ್ಲಿ 15 ರನ್ ಗಳಿಸಿ ಔಟಾದರು, ನಾಯಕ ಬಾಬರ್ ಅಜಮ್ 28 ಎಸೆತಗಳಲ್ಲಿ 32 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಂತರ ಬಂದ ಮೊಹಮ್ಮದ್ ಹ್ಯಾರಿಸ್ ಕೂಡ ರನ್ ಗಳಿಸಲು ಪರದಾಡಿದರು, ಆದಿಲ್ ರಶೀದ್ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಮುಂದಾದ ಅವರು, 8 ರನ್ ಗಳಿಸಿ ಔಟಾದರು.
ಶಾನ್ ಮಸೂದ್ 28 ಎಸೆತಗಳಲ್ಲಿ 38 ರನ್ ಗಳಿಸಿದರು. ಇಫ್ತಿಕರ್ ಅಹಮದ್ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಶದಾಬ್ ಖಾನ್ 14 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು.

ಆಂಗ್ಲರಿಂದ ಉತ್ತಮ ಬೌಲಿಂಗ್ ಪ್ರದರ್ಶನ
ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದರು. ಯಾವ ಹಂತದಲ್ಲೂ ಪಾಕಿಸ್ತಾನಕ್ಕೆ ಹೆಚ್ಚಿನ ರನ್ ಗಳಿಸಲು ಅವಕಾಶ ನೀಡಲಿಲ್ಲ. ಸ್ಯಾಮ್ ಕರಾನ್ ಮತ್ತು ಸ್ಪಿನ್ನರ್ ಆದಿಲ್ ರಶೀದ್, ಕ್ರಿಸ್ ಜೋರ್ಡಾನ್ ಅತ್ಯುತ್ತಮ ಬೌಲಿಂಗ್ ಮಾಡಿದರು.
ಸ್ಯಾಮ್ ಕರಾನ್ 4 ಓವರ್ ಗಳಲ್ಲಿ ಕೇವಲ 12 ರನ್ ನೀಡಿ 3 ವಿಕೆಟ್ ಪಡೆದರು. ರಶೀದ್ ಮತ್ತು ಜೋರ್ಡಾನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಬೆನ್ ಸ್ಟೋಕ್ಸ್ ಕೂಡ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.
ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಸ್ಯಾಮ್ ಕರಾನ್ ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications